ದಿನದ ಸುದ್ದಿ

ರಾಜ್ಯದಲ್ಲಿ ಇಂದು 7,330 ಮಂದಿಗೆ ಕೊರೋನಾ ಪಾಸಿಟಿವ್

Published

on

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಇಂದು 7,330 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,71,876ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆಯು ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 93 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 4,615 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 7,626 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2,71,876 ಸೋಂಕಿತರ ಪೈಕಿ 82,677 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 1,84,568 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 727 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version