ದಿನದ ಸುದ್ದಿ

ಕೊರೋನಾ | ಇದುವರೆಗೆ ರಾಜ್ಯದಲ್ಲಿ 12, 016 ಮಂದಿ ಸಾವು ; 14,001 ಸಕ್ರಿಯ ಪ್ರಕರಣಗಳು..!

Published

on

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಸೋಮವಾರ 772 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾಕ್ಕೆ ತುತ್ತಾಗಿದ್ದ 1,261 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು, ಒಟ್ಟು 7 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ಸೋಮವಾರಕ್ಕೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9,10,241ಕ್ಕೆ ಏರಿಕೆ ಆಗಿದ್ದು, ಈ ಪೈಕಿ 8,84,205 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 14,001 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ ಒಟ್ಟು 12, 016 ಮಂದಿ ಕೊರೊನಾಗೆ ಬಲಿಯಾಗಿದ್ದು, ಸದ್ಯ 219 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 4,358 ಆಂಟಿಜನ್‌ ಟೆಸ್ಟ್‌, 69,293 ಆರ್‌ಟಿ ಪಿಸಿಆರ್‌ ಸೇರಿದಂತೆ 73,651 ಪರೀಕ್ಷೆ ಮಾಡಲಾಗಿದೆ. ಒಟ್ಟು ರಾಜ್ಯದಲ್ಲಿ ಇಲ್ಲಿಯವರೆಗೆ 1,31,21,419 ಕೊರೊನಾ ಪರೀಕ್ಷೆಯನ್ನು ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version