ದಿನದ ಸುದ್ದಿ
ಕೊರೋನಾ ಹೊಸ ಅಲೆ ಹೆಚ್ಚಳ | ಔರಂಗಾಬಾದ್ ನಲ್ಲಿ ಲಾಕ್ ಡೌನ್ ಘೋಷಣೆ
ಸುದ್ದಿದಿನ, ಮಹಾರಾಷ್ಟ್ರ: ಕೊರೋನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸರ್ಕಾರವು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಲಾಕ್‌ಡೌನ್ ಮತ್ತು ರಾತ್ರಿ ಕರ್ಫ್ಯೂ ಸೇರಿದಂತೆ ಕೊರೋನವೈರಸ್ ಹೊಸ ಅಲೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಔರಂಗಾಬಾದ್ ನಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ ಮಾರ್ಚ್ 8 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಮಂಗಳವಾರ, ಮಹಾರಾಷ್ಟ್ರದಲ್ಲಿ 6,218 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 51 ಸಾವುಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ 53,409 ಸಕ್ರಿಯ ಪ್ರಕರಣಗಳು ಸೇರಿದಂತೆ ಒಟ್ಟು 21,12,312 ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ | ನರದೌರ್ಬಲ್ಯ ನಿವಾರಣೆಗೆ ಬೆಳ್ಳುಳ್ಳಿ ಬಳಸಿ
ರಾಜ್ಯದಲ್ಲಿ ಇತ್ತೀಚೆಗೆ ಕೊರೋನಾ ಹೊಸ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೈಗೊಂಡ ಕ್ರಮಗಳು ಹೀಗಿವೆ.
ಔರಂಗಾಬಾದ್ ಲಾಕ್‌ಡೌನ್
ಔರಂಗಾಬಾದ್‌ನಲ್ಲಿ ಮಾರ್ಚ್ 8ರ ತನಕ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಿದೆ, ಅಗತ್ಯ ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ. “ಔರಂಗಾಬಾದ್ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಗಳಲ್ಲಿ ಸೇರುತ್ತಿದ್ದು ಮತ್ತು ಮಾಸ್ಕ್ ಗಳನ್ನು ಬಹಳ ವಿರಳವಾಗಿ ಬಳಸುತ್ತಾರೆ ಎಂಬ ವರದಿಗಳಿವೆ. ಫೆಬ್ರವರಿ 23 ರಿಂದ ಮಾರ್ಚ್ 8 ರವರೆಗೆ ಬೆಳಿಗ್ಗೆ 11 ರಿಂದ 6 ರವರೆಗೆ ಕರ್ಫ್ಯೂ ವಿಧಿಸಲು ನಿರ್ಧರಿಸಲಾಗಿದೆ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ “ಎಂದು ಔರಂಗಾಬಾದ್ ಪೊಲೀಸ್ ಆಯುಕ್ತ ನಿಖಿಲ್ ಗುಪ್ತಾ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243