ದಿನದ ಸುದ್ದಿ
ದಾವಣಗೆರೆ | ಒಟ್ಟು 9 ಕೊರೊನಾ ಗುಣಮುಖ ವ್ಯಕ್ತಿಗಳು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಒಟ್ಟು ಈ ವರೆಗೆ 9 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಈ ಹಿಂದೆ ವಿದೇಶ ಪ್ರಯಾಣ ಹಿನ್ನೆಲೆ ಹೊಂದಿದ್ದ ಇಬ್ಬರು ರೋಗಿಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದರು. ಮೇ 20 ರಂದು ಬೆಳಿಗ್ಗೆ ರೋಗಿ ಸಂಖ್ಯೆಗಳಾದ 585, 616, ಮತ್ತು 635 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಮೇ 20 ರ ಸಂಜೆ ಕೊರೊನಾದಿಂದ ಗುಣಮುಖರಾದ ಆದರೆ ಇತರೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಇರುವ ರೋಗಿ ಸಂಖ್ಯೆಗಳಾದ 580, 584(ಹೃದಯ ರೋಗ) 583 ಮತ್ತು 617 ಇವರನ್ನು ಕೋವಿಡ್ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಿ ನಾನ್ ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಅವರು ಒಂದೆರಡು ದಿನಗಳ ಕಾಲ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243