ದಿನದ ಸುದ್ದಿ

ರಜೆ ಹಾಕಿ‌ ಮನೆಗೆ ಹೋದ ಪೊಲೀಸ್ ಪೇದೆಗೆ ಕೊರೋನಾ ಸೋಂಕು..!

Published

on

ಸುದ್ದಿದಿನ,ಹಾವೇರಿ: ಜಿಲ್ಲೆಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕ ಹಾಗೂ ಪೊಲೀಸ್ ಕಾನ್‍ಸ್ಟೇಬಲ್‍ ನಲ್ಲಿ ಸೋಂಕು ದೃಢಪಟ್ಟಿದೆ.

41 ವರ್ಷದ ಕಾನಸ್ಟೇಬಲ್ ಪಿ-7030ರಲ್ಲಿ ಸೋಂಕು ದೃಢಪಟ್ಟಿದ್ದು, ಹಾವೇರಿ ಜಿಲ್ಲೆ ಬ್ಯಾಡಗಿ ಠಾಣೆಯಲ್ಲಿ ಕಾನ್‍ಸ್ಟೇಬಲ್‍ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಮೂಲತಃ ಕದರಮಂಡಲಿ ಗ್ರಾಮದ ನಿವಾಸಿಯಾಗಿದ್ದು, ಎರಡು ದಿನ ರಜೆ ಹಾಕಿ ದಾವಣಗೆರೆ ಜಿಲ್ಲೆ ಮಲೇಬೆನ್ನೂರಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಅಲ್ಲದೇ ತನ್ನ ಮಗನನ್ನು ಮಲೇಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಎರಡು ಬಾರಿ ಔಷಧಿ ತರಲು ಆಸ್ಪತ್ರೆಗೆ ಹೋಗಿದ್ದರು ಎನ್ನಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version