ಸಿನಿ ಸುದ್ದಿ
ನಟ ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ
ಸುದ್ದಿದಿನ, ಹೈದರಾಬಾದ್:ತೆಲುಗು ಸಿನೆಮಾ ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಆಚಾರ್ಯ’ ಶೂಟಿಂಗ್ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ಪತ್ತೆಯಾಗಿದೆ. ಆದರೆ, ನನಗೆ ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲ.
ಆದರೂ ನಾನು ಹೋಂ ಐಸೋಲೇಷನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಚಿರು ಮನವಿ ಮಾಡಿದ್ದಾರೆ.
ఆచార్య షూటింగ్ ప్రారంభించాలని,కోవిడ్ టెస్ట్ చేయించుకున్నాను. రిజల్ట్ పాజిటివ్. నాకు ఎలాంటి కోవిడ్ లక్షణాలు లేవు.వెంటనే హోమ్ క్వారంటైన్ అయ్యాను.గత 4-5 రోజులుగా నన్ను కలిసినవారందరిని టెస్ట్ చేయించుకోవాలిసిందిగా కోరుతున్నాను.ఎప్పటికప్పుడు నా ఆరోగ్య పరిస్థితిని మీకు తెలియచేస్తాను. pic.twitter.com/qtU9eCIEwp
— Chiranjeevi Konidela (@KChiruTweets) November 9, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243