ದಿನದ ಸುದ್ದಿ
ಬ್ರೇಕಿಂಗ್ | ಮಧ್ಯರಾತ್ರಿಯಿಂದಲೇ ದಾವಣಗೆರೆಯಲ್ಲಿ ನಿಷೇದಾಜ್ಞೆ ಜಾರಿ : ಜಿಲ್ಲಾಧಿಕಾರಿ
ಸುದ್ದಿದಿನ, ದಾವಣಗೆರೆ : ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸೋಮವಾರ ( ಮೇ-4) ಮಧ್ಯರಾತ್ರಿಯಿಂದಲೇ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿಲಾಗಿದೆ ಎಂದು ಮತಾಂತೇಶ ಬೀಳಗಿ ತಿಳಿಸಿದ್ದಾರೆ.
ಇವನ್ನೆಲ್ಲಾ ನಿಷೇಧಿಸಲಾಗಿದೆ
- ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-19ರ ಶುಶ್ರೂಷಾ ಷಾ ಉದ್ದೇಶಗಳನ್ನು ಮತ್ತು ಶಾಸನಬದ್ಧ ಹಾಗೂ ನಿಯಂತ್ರಣ ಪ್ರಕಾರ್ಯಗಳನ್ನು ಹೊರತುಪಡಿಸಿ, 05 ವ್ಯಕ್ತಿಗಳಿಗಿಂತ ಹೆಚ್ಚಿನ ಎಲ್ಲಾ ಸಮೂಹ ಒಗ್ಗೂಡುವಿಕೆಯನ್ನು ನಿಷೇಧಿಸಲಾಗಿದೆ.
- ಎಲ್ಲಾ ಧರ್ಮಗಳ ಪ್ರಾರ್ಥನಾ ಒಗ್ಗೂಡುವಿಕೆ ಮತ್ತು ಹಣ್ಣುಗಳ ಒಗ್ಗೂಡುವಿಕೆಯನ್ನು ಸಹ ನಿಲ್ಲಿಸತಕ್ಕದ್ದು.
- ಈ ಅವಧಿಯಲ್ಲಿ 65 ವರ್ಷಕ್ಕೂ ಹೆಚ್ಚಿನ ವಯಸ್ಸಿನವರು, ಮಾನಸಿಕ ಹಾಗೂ ಹೆಚ್ಚಿನ ಕಾಯಿಲೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, 10 ವರ್ಷದ ಒಳಗಿನ ಮಕ್ಕಳು ಆರೋಗ್ಯ ಚಿಕಿತ್ಸೆ ಉದ್ದೇಶಕ್ಕೆ ಹೊರತುಪಡಿಸಿ ಬೇರೆ ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುವಂತಿಲ್ಲ.
- ಈ ಅವಧಿಯಲ್ಲಿ ರಾತ್ರಿ 7.00 ರಿಂದ ಬೆಳಿಗ್ಗೆ 7 ಗಂಟೆಯವರೆಗೆ Essential ಚಟುವಟಿಕೆಯಲ್ಲಿ ತೊಡಗಿರುವವರನ್ನು ಹೊರತು ಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಇತರೆಯವರ ಚಲನ-ವಲನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. (ರಾತ್ರಿ 7 ರಿಂದ ಮುಂಜಾನೆ 7 ರವರೆಗೆ ಕರ್ಫ್ಯೂ ಇರುತ್ತದೆ).
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243