ದಿನದ ಸುದ್ದಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್

Published

on

ಸುದ್ದಿದಿನ, ಬೆಂಗಳೂರು: ಬಿಜೆಪಿಯ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣ ಮುಖರಾದ ಬಳಿಕ ರಮೇಶ್ ಚುನಾವಣೆ ಪ್ರಚಾರಕ್ಕೆ ಬರುತ್ತಾರೆ. ಚುನಾವಣಾ ಪ್ರಚಾರಕ್ಕೆ ಬರುವಂತೆ ಕರೆ ಮಾಡಿದಾಗ ನನಗೆ ಕೊರೋನಾ ಬಂದಿರುವ ವಿಚಾರ ತಿಳಿಯಿತು ಎಂದು ಬೈರತಿ ಬಸವರಾಜ್‌ ಹೇಳಿದ್ದಾರೆ.

ಇದನ್ನೂ ಓದಿ | ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಅಶ್ಲೀಲ ಸಿ.ಡಿ ಪ್ರಕರಣ ಸಂಬಂಧ ಸೋಮವಾರ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿಯು ನೋಟಿಸ್ ನೀಡಿತ್ತು. ಸದ್ಯ ಕೊರೊನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆ ಅವರು ಇಂದು ವಿಚಾರಣೆಗೆ ಗೈರಾಗಲಿದ್ದಾರೆ ಎನ್ನಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version