ದಿನದ ಸುದ್ದಿ

ದಾವಣಗೆರೆ | ಒಟ್ಟು 227 ಕೇಸ್‍ಗಳಲ್ಲಿ, 60ಕ್ಕಿಂತ ಮೇಲ್ಪಟ್ಟ ವಯಸ್ಸಿನವರೇ ಹೆಚ್ಚು..!

Published

on

ಸುದ್ದಿದಿನ,ದಾವಣಗೆರೆ: ರಾಜ್ಯದಲ್ಲಿ ಕರೋನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಜಾಗರೂಕತೆಯಿಂದ ಎಲ್ಲಾ ಅಧಿಕಾರಿಗಳು ಕೆಲಸ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಅಪಾಯದಿಂದ ತಪ್ಪಿಸಿಕೊಳ್ಳಬಹುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್ ಹೇಳಿದರು.

ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಯೋಜಿಸಲಾಗಿದ್ದ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೇಸ್‍ಗಳು ಕಡಿಮೆಯಾಗುವಂತೆ ನೋಡಿಕೊಳ್ಳಿ. ಕಂಟೇನ್ಮೆಂಟ್ ಜೋನ್ ಸೇರಿದಂತೆ ಬಫರ್ ಜೋನ್‍ಗಳ ಎಲ್ಲರಿಗೂ ಸಹ ರೋಗ ಲಕ್ಷಣಗಳನ್ನು ಪತ್ತೆ ಮಾಡಿ ಟೆಸ್ಟ್‍ಗೆ ಒಳಪಡಿಸಿ ಎಂದು ಸೂಚಿಸಿದರು.

ಪ್ರತಿ ಮನೆ ಮನೆಗೆ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಮತ್ತು ಕರೋನಾ ಬಗ್ಗೆ ಅರಿವು ಮೂಡಿಸಿ, ವೈದ್ಯರು ಮತ್ತು ನರ್ಸ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಜಾಹೀರಾತುಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಕಂಟೈನ್ಮಂಟ್ ಝೋನ್‍ಗಳಲ್ಲಿ ಕಮ್ಯುನಿಟಿ ಸ್ಪ್ರೇಡ್ ಆಗುವಂತಹ ಸಾಧ್ಯತೆಗಳು ಹೆಚ್ಚಿದ್ದು, ಅದನ್ನು ತಡೆಯುವಲ್ಲಿ ಹೆಚ್ಚಿನ ಗಮಸಹರಿಸಬೇಕು. ಜೊತೆಗೆ ಬಫರ್ ಝೋನ್‍ಗಳಲ್ಲಿ ಪ್ರತಿದಿನವು ಟೆಸ್ಟಿಂಗ್ ನಡೆಸಬೇಕು. ಜಿಲ್ಲೆಯ ಸೋಂಕಿತರಲ್ಲಿ ವೃದ್ದರು ಹೆಚ್ಚಿದ್ದು, ಇದು ಸಹ ಜಿಲ್ಲೆಯ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ.

ಇಲ್ಲಿಯವರೆಗೂ ದಾಖಲಾದ 227 ಕೇಸ್‍ಗಳಲ್ಲಿ 60ಕ್ಕಿಂತ ಮೇಲ್ಪಟ್ಟ ವಯಸ್ಸಿನವರ ಸಂಖ್ಯೆ ಹೆಚ್ಚಾಗಿ ದಾಖಲಾಗಿದೆ. ಜಿಲ್ಲೆಯಲ್ಲಿ ರೋಗಲಕ್ಷಣಗಳು ಇರುವ ಹಾಗೂ ಇಲ್ಲದಿರುವ ಸೋಂಕಿತರ ಸಂಖ್ಯೆಗಳು ಸಹ ಹೆಚ್ಚಾಗಿ ದಾಖಲಾಗಿವೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version