ದಿನದ ಸುದ್ದಿ
ಕೊರೊನ ಮೂರನೇ ಅಲೆ ಸಂಭವ ಮುನ್ನೆಚ್ಚರಿಕೆ ಅಗತ್ಯ : ಡಿಸಿ ಮಹಾಂತೇಶ್ ಬೀಳಗಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/07/dcsp_dvg_suddidina.jpg&description=ಕೊರೊನ ಮೂರನೇ ಅಲೆ ಸಂಭವ ಮುನ್ನೆಚ್ಚರಿಕೆ ಅಗತ್ಯ : ಡಿಸಿ ಮಹಾಂತೇಶ್ ಬೀಳಗಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/07/dcsp_dvg_suddidina.jpg&description=ಕೊರೊನ ಮೂರನೇ ಅಲೆ ಸಂಭವ ಮುನ್ನೆಚ್ಚರಿಕೆ ಅಗತ್ಯ : ಡಿಸಿ ಮಹಾಂತೇಶ್ ಬೀಳಗಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ: ಪಕ್ಕದ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತೀ ಹೆಚ್ಚು ಕೊರೊನ ಪ್ರಕರಣಗಳು ದಾಖಲಾಗುತ್ತಿದ್ದು, ಈ ರಾಜ್ಯಗಳೊಂದಿಗೆ ನಮ್ಮ ರಾಜ್ಯ ಗಡಿ ಹಂಚಿಕೊಂಡಿರುವುದರಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಇದು ಮೂರನೇ ಅಲೆಯ ಮುನ್ಸೂಚನೆಯಾಗಿದ್ದು ಎಚ್ಚರದಿಂದಿರಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಕೋವಿಡ್-19 ಎರಡನೇ ಅಲೆಯ ಸಂಪೂರ್ಣ ನಿಯಂತ್ರಣ ಹಾಗೂ ಮೂರನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗೆಗೆ ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಈಗಾಗಲೇ ಹೋಮ್ ಐಸೋಲೆಷನ್ ಸಂಪೂರ್ಣವಾಗಿ ನಿಲ್ಲಿಸಿದ್ದು ವರದಿಯಾಗುವ ಪ್ರಕರಣಗಳನ್ನು ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಕೆಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ವಿರೋಧ ವ್ಯಕ್ತಪಡಿಸುತ್ತಾರೆ. ಹಾಗಾಗಿ ಜಿಲ್ಲಾ ಮಟ್ಟದಲ್ಲಿ ಒಂದು ಕೋವಿಡ್ ಕೇರ್ ಸೆಂಟರ್ ತೆಗೆದು ಅವರುಗಳನ್ನು ಈ ಸೆಂಟರ್ಗಳಲ್ಲಿ ಉಪಚರಿಸಲಾಗುವುದು ಎಂದರು.
ಕೋವಿಡ್-19 ನಿಯಂತ್ರಿಸುವಲ್ಲಿ ಜಿಲ್ಲಾಡಳಿತದೊಂದಿಗೆ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ತಂಡಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಭಾವ್ಯ ಮೂರನೇ ಅಲೆ ಎದುರಾದಲ್ಲಿ ಅದನ್ನು ತಡೆಗಟ್ಟಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಕೋವಿಡ್ ಕರ್ತವ್ಯದ ವೈದ್ಯರು ಸಿಬ್ಬಂದಿಗೆ ತರಬೇತಿ ನೀಡಿ ಆತ್ಮಸ್ಥೈರ್ಯ ಮತ್ತಷ್ಟು ಹೆಚ್ಚಿಸಬೇಕು. ಜಿಲ್ಲಾಡಳಿತ, ಇಲಾಖೆಗಳ ಸಮನ್ವಯತೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮಕ್ಕಳಿಗೆ ಬರಬಹುದಾದ ಸೋಂಕನ್ನು ತಡೆಗಟ್ಟಲು ಸಜ್ಜಾಗಬೇಕು ಹಾಗೂ ಬೇಕಾದ ಎಲ್ಲಾ ವೈದ್ಯಕೀಯ ಸಲಕರಣೆಗಳನ್ನು ಮುಂಜಾಗ್ರತವಾಗಿ ಸಿದ್ಧಮಾಡಿಟ್ಟುಕೊಳ್ಳಬೇಕು ಎಂದರು.
ಇದನ್ನೂ ಓದಿ | ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಸಾಹೀರಾಬಾನು ಫಾರೂಕಿ
ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ಬರದಂತೆ ತಡೆಗಟ್ಟಬೇಕಾದ ಜವಾಬ್ದಾರಿ ಆಯಾ ಸ್ಥಳೀಯ ಮಟ್ಟದ ಅಧಿಕಾರಿಗಳದ್ದಾಗಿದ್ದು, ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ದಂಡ ವಿಧಿಸದಿರುವ ಕಾರಣ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರವಿಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು, ಧಾರ್ಮಿಕ ಸ್ಥಳಗಳಲ್ಲಿ ದರ್ಶನದ ಜೊತೆಗೆ ಸೇವೆ ಸಲ್ಲಿಸುವುದು ಹೀಗೆ ಬೇಜವ್ದಾರಿಯಿಂದ ನಿಯಮ ಉಲ್ಲಂಘಿಸಿ ನಡೆಯುತ್ತಿರುವುದರಿಂದ 3ನೇ ಅಲೆಯ ಅಪಾಯವನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ, ದಂಡ ವಿಧಿಸಬೇಕು ಎಂದು ತಿಳಿಸಿದರು.
ಮೊದಲನೇ ಅಲೆಯಲ್ಲಿ 1800 ಮಕ್ಕಳ ಪ್ರಕರಣಗಳು, 2ನೇ ಹಂತದಲ್ಲಿ 2,600 ಪ್ರಕರಣಗಳು ವರದಿಯಾಗಿದ್ದು, 3ನೇ ಅಲೆಯಲ್ಲಿ 4 ಸಾವಿರ ಮಕ್ಕಳ ಕೋವಿಡ್ ಪ್ರಕರಣಗಳು ವರದಿಯಾಗಬಹುದು ಎಂದು ಅಂದಾಜಿಸಿದ್ದು, ಈ ಪೈಕಿ 200 ಮಕ್ಕಳು ಆಸ್ಪತ್ರೆಗೆ ದಾಖಲಾಗಬಹುದು ಹಾಗೂ 40 ಮಕ್ಕಳು ಐಸಿಯುನಲ್ಲಿ ದಾಖಲಾಗಬಹುದು ಎಂದು ಅಂದಾಜಿಸಲಾಗಿದೆ. ಐಸಿಯುನಲ್ಲಿ ದಾಖಲಾಗುವ ಮಕ್ಕಳಿಗೆ ಬೇಕಾದ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
ಜಿಲ್ಲಾಸ್ಪತ್ರೆಯಲ್ಲಿ 30 ಕ್ಕಿಂತ ಹೆಚ್ಚು ಬೆಡ್ಗಳು, 36 ಐಸಿಯು ಪೆಡಿಯಾಟ್ರಿಕ್ ಬೆಡ್ಗಳಿವೆ. ಅಗತ್ಯವಿರುವ ವೆಂಟಿಲೇಟರ್ಸ್, ಐಸಿಯು ಬೆಡ್ಸ್, ಮಲ್ಟಿಪ್ಯಾರಾ ಮಾನಿಟರ್ ಮತ್ತು ಇನ್ನುಳಿದವುಗಳನ್ನು ತರಿಸಲು ಈಗಾಗಲೇ ಏಜೆನ್ಸಿ ಗುರುತಿಸಿದ್ದು 10 ದಿನದೊಳಗಾಗಿ ತರಿಸಲಾಗುವುದು ಎಂದರು.
ನಗರ ಪ್ರದೇಶದಲ್ಲಿ ನಡೆಯುವ ಸಂತೆ ಜಾತ್ರೆಗಳಲ್ಲಿ ಬಿಗಿ ಕ್ರಮ ಅನುಸರಿಸಿ ಕೋವಿಡ್ ನಿಯಮಾ ಪಾಲಿಸಲು ತಿಳಿಸಬೇಕು. ಒಂದು ವೇಳೆ ವಿರೋಧಿಸಿದರೆ ಪೊಲೀಸರ ಸಹಾಯದಿಂದ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು. ನಿನ್ನೆ ಜಿಲ್ಲೆಯಲ್ಲಿ ಕೇವಲ 4 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದರಿಂದ ಕೋವಿಡ್ ಇಲ್ಲವೆಂದು ಮೈಮರೆಯುವುದು ಬೇಡ. ಒಮ್ಮೆಲೆ ಹೆಚ್ಚು ಪ್ರಕರಣಗಳು ಬಂದಿರುವ ಉದಾಹರಣೆಗಳು ನಮ್ಮ ಮುಂದಿದೆ ಎಂದರು.
ದುರ್ಬಲ ವರ್ಗದ 17 ಸಾವಿರ ಅಪೌಷ್ಠಿಕ ಮಕ್ಕಳಪಟ್ಟಿ ನಮ್ಮಲ್ಲಿದ್ದು ಇವರಲ್ಲಿ 10 ಸಾವಿರ ಮಕ್ಕಳ ಪೋಷಕರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಉಳಿದ 7 ಸಾವಿರ ಮಕ್ಕಳ ಪೋಷಕರಿಗೂ 15 ದಿನದೊಳಗಾಗಿ ಆದ್ಯತೆಯ ಮೇಲೆ ಲಸಿಕೆ ನೀಡಲು ಕ್ರಮ ವಹಿಸಲು ಸೂಚಿಸಿದರು. ಕೈಗಾರಿಕ ವಲಯಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಹಾಗೂ ಅಂತರಾಜ್ಯದಿಂದ ಬರುವ ಲಾರಿ ಚಾಲಕ ಹಾಗೂ ನಿರ್ವಾಹಕರಿಗೆ ಅಗತ್ಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಮಾತನಾಡಿ, ರಾಜ್ಯದಲ್ಲಿ 3ನೇ ಅಲೆಯ ಮುನ್ಸೂಚನೆ ಕಂಡು ಬಂದಿದ್ದು ಮಕ್ಕಳ ಮೇಲೆ ತೀವ್ರವಾಗಿ ಪರಿಣಾಮ ಬೀರಲಿದೆ. ಇದಕ್ಕಾಗಿ ಪೋಷಕರು ಮಕ್ಕಳನ್ನು ಬಹಳ ಸುರಕ್ಷತೆಯಿಂದ ಕಾಪಾಡಿಕೊಳ್ಳಬೇಕಾಗಿದೆ. ಆದ್ದರಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮಕ್ಕಳ ಪೋಷಕರಿಗೆ ಸೋಂಕು ಹಾಗೂ ಲಸಿಕೆಯ ಬಗ್ಗೆ ಜಾಗೃತಿ ನೀಡಿ ಲಸಿಕೆ ಪಡೆಯಲು ಮನವೊಲಿಸಬೇಕು ಎಂದರು.
ಪ್ರತಿಯೊಂದು ತಾಲ್ಲೂಕು, ಗ್ರಾಮದ ವ್ಯಾಪ್ತಿಯ ಅಂಗನವಾಡಿಗೆ ಬರುವ ಪ್ರತಿಯೊಂದು ಮಗುವಿಗೂ ಹಾಗೂ ಮಕ್ಕಳ ಪೋಷಕರಿಗೂ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಲು ತಿಳಿಸಬೇಕು. ಅಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಹಾಯವನ್ನು ಪಡೆದುಕೊಂಡು ಮನೆ-ಮನೆಗೆ ಭೇಟಿ ನೀಡಿ ಪರೀಕ್ಷೆ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಗ್ರಾಮಗಳಲ್ಲಿ ನಡೆಯುವ ಸಭೆ ಸಮಾರಂಭ, ಮದುವೆ ಕಾರ್ಯಗಳಲ್ಲಿ ಸರ್ಕಾರದ ಆದೇಶದಂತೆ 100 ಕ್ಕಿಂತ ಹೆಚ್ಚಿನ ಜನರು ಪಾಲ್ಗೊಂಡಿರುವುದು ಕಂಡು ಬಂದಲ್ಲಿ ಕೂಡಲೆ ದಂಡ ವಿಧಿಸಿ ಪ್ರಕರಣ ದಾಖಲಿಸಿಬೇಕು. ಹಾಗೂ ಮದುವೆ ಕಾರ್ಯಕ್ರಮದಲ್ಲಿ ಚಿತ್ರೀಕರಿಸಲಾದ ವಿಡಿಯೋವನ್ನು ಸಂಬಂಧಿಸಿದ ಅಧಿಕಾರಿಗಳು ವೀಕ್ಷಿಸಿ ನಿಗದಿಗಿಂತ ಹೆಚ್ಚು ಜನ ಸೇರಿದಲ್ಲಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದರು.
ಸಾರ್ವಜನಿಕ ಸ್ಥಳಗಳಾದ ದಿನಸಿ ಅಂಗಡಿ, ಹಾಲಿನ ಡೈರಿ, ಮಾರುಕಟ್ಟೆ, ಹಾಗೂ ದೇವಸ್ಥಾನಗಳಲ್ಲಿ ಜನರು ಗುಂಪಿನಲ್ಲಿ ಸೇರುತ್ತಿದ್ದು, ಅದರಲ್ಲೂ ಶ್ರಾವಣ ಮಾಸದಲ್ಲಿ ಜನರು ದೇವಸ್ಥಾನಗಳಿಗೆ ಹೋಗುವುದು ಹೆಚ್ಚು. ಜನರು ಆದಷ್ಟು ಮುಂಜಾಗ್ರತ ಕ್ರಮಗಳನ್ನು ವಹಿಸಿದರೆ ಸೋಂಕನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಜನರು ಬೇಜವಾಬ್ದಾರಿಯಾಗಿ ವರ್ತಿಸಬಾರದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ. ರಿಷ್ಯಂತ್ ಮಾತನಾಡಿ, 3ನೇ ಅಲೆ ಬಂದೆ ಬರುತ್ತದೆ ಎಂಬುದು ಖಾತರಿಯಾಗಿದ್ದು, ಮಕ್ಕಳಿಗೆ ಬಂದರೆ ಪೋಷಕರು ಬಹಳಷ್ಟು ಆತಂಕಕ್ಕೊಳಗಾಗುತ್ತಾರೆ. ಸಾಮಾನ್ಯವಾಗಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಪ್ರಮಾಣದಲ್ಲಿರುತ್ತದೆ. ಅವರಲ್ಲಿ ಸೋಂಕು ತಗುಲಿದರೆ ಅದರೊಂದಿಗೆ ಹೋರಾಡುವಷ್ಟು ಶಕ್ತಿ ಅವರಲ್ಲಿ ಇರುವುದಿಲ್ಲ, ಇದರಿಂದಾಗಿ ಪೋಷಕರು ಬಹಳಷ್ಟು ಭಯಭೀತರಾಗುತ್ತಾರೆ. ಆದ್ದರಿಂದ ಆದಷ್ಟು ಜನರಲ್ಲಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಮಹಾನಗರಪಾಲಿಕೆಯ ಗಾಡಿಗಳಲ್ಲಿ ಹಾಗೂ ಪೊಲೀಸ್ ಗಸ್ತು ವಾಹನಗಳಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಧ್ವನಿ ವರ್ಧಕಗಳ ಮೂಲಕ ಅರಿವು ಮೂಡಿಸಬೇಕು ಎಂದರು.
ಈ ಬಗೆಗೆ ಅರಿವು ಮೂಡಿಸಿದ ನಂತರವೂ ಜನರು ಕ್ರಮಗಳನ್ನು ಉಲ್ಲಂಘಿಸಿದರೆ ಅವರಿಗೆ ದಂಡ ವಿಧಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಹಾಗೂ ದೇವಸ್ಥಾನಗಳು, ಸಾರ್ವಜನಿಕ ಸ್ಥಳಗಳಲ್ಲಿ ಗುಂಪು-ಗುಂಪಿನಲ್ಲಿ ಜನರು ಸೇರಿದರೆ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದ ಅವರು, ಹೆಚ್ಚು ಜನಜಂಗುಳಿ ಸೇರುವ ಮಾಹಿತಿಯನ್ನು ಮೊದಲೇ ಪಡೆದು ಆ ಸ್ಥಳಗಳಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದರು.
ಕೋವಿಡ್ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿ ಬಡ್ತಿಯೊಂದಿಗೆ ವರ್ಗಾವಣೆ ಹೊಂದಿರುವ ಪ್ರಮೋದ್ ನಾಯಕ್ ರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಡಿಹೆಚ್ಓ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್, ಆರ್ಸಿಹೆಚ್ ಡಾ.ಮೀನಾಕ್ಷಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
- ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಉಳಿದ ಸೇವೆಗಳಿಗೆ ಅನುಮತಿಯಿಲ್ಲದಿದ್ದರು ಹೆಚ್ಚು ಜನ ಸೇರುವ ವರದಿಯಿದ್ದು, ಸಂಬಂಧಿಸಿದ ಪೂಜಾ ಸ್ಥಳಗಳ ಮುಖ್ಯಸ್ಥರು ಜನಜಂಗುಳಿಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಎರಡು ಮೂರು ದಿನಗಳ ಗಡುವು ನೀಡಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ದೇವಸ್ಥಾನಗಳನ್ನು ಬಂದ್ ಮಾಡಿಸಲು ಆದೇಶ ಮಾಡಲಾಗುತ್ತದೆ.
| ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
- ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಮಳೆಯ ನಂತರ ಚಿಕನ್ಗುನ್ಯ, ಡೆಂಗ್ಯುನಂತಹ ಸಾಂಕ್ರಾಮಿಕ ರೋಗಗಳು ಹರಡುವ ಹಿನ್ನೆಲೆಯಲ್ಲಿ ನೀರು ನಿಲ್ಲುವ ಸ್ಥಳಗಳ ಸ್ವಚ್ಚತೆ, ಡಿಡಿಟಿ ಸಿಂಪರಣೆ ಮಾಡಲು ಸ್ಥಳೀಯ ಆಡಳಿತಗಳು ಗಮನಹರಿಸಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು.
| ಸಿಇಓ ವಿಜಯ ಮಹಾಂತೇಶ ದಾನಮ್ಮನವರ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.
ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.
ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.
ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.
ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ3 hours agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

