Connect with us

ದಿನದ ಸುದ್ದಿ

ದಾವಣಗೆರೆ | ಮೊದಲನೇ ಹಂತದ ಕೋವಿಡ್ ಲಸಿಕಾಕರಣಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಚಾಲನೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿ ಶನಿವಾರದಂದು ಸಂಭ್ರಮದ ವಾತಾವರಣ ಏರ್ಪಟ್ಟಿತ್ತು. ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೋವಿಡ್ ಲಸಿಕೆ ನೀಡಲು ಎಲ್ಲ ರೀತಿಯ ಪೂರಕ ಸಿದ್ದತೆಯೊಂದಿಗೆ ವೈದ್ಯರು, ಶುಶ್ರೂಷಕರು ಸಜ್ಜಾಗಿದ್ದರು.

ಬೆಳಿಗ್ಗೆ ರಾಷ್ಟ್ರದ ಪ್ರಧಾನಮಂತ್ರಿಯವರಾದ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಲಸಿಕಾಕರಣದ ಕುರಿತು ಭಾಷಣ ಮುಗಿಸಿ, ಲಸಿಕಾಕರಣಕ್ಕೆ ಸಾಂಕೇತಿಕ ಚಾಲನೆ ನೀಡಿದ ನಂತರ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಸಂಸದರು, ಶಾಸಕರು ಮತ್ತು ಅಧಿಕಾರಿಗಳು ಕೋವಿಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.

ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಡೀ ದೇಶವನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ಸಮರದ ವಿರುದ್ದ ಹೋರಾಟ ಮಾಡಿದ ಸಂಕಷ್ಟದ ಸಮಯ, ಅದರ ವಿರುದ್ದ ಹೋರಾಡಿದ ಸೇನಾನಿಗಳ ಕಾರ್ಯವನ್ನು, ದೇಶವಾಸಿಗಳ ಸಹಕಾರವನ್ನು ಸ್ಮರಿಸಿದ ಅವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಲಸಿಕಾಕರಣ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ದೇಶ ಕೊರೊನಾ ಮುಕ್ತವಾಗಲಿದೆ ಎಂದು ಆಶಾಭಾವನೆಯನ್ನು ವ್ಯಕ್ತಿಪಡಿಸಿ, ಕಾರ್ಯಕ್ರಮದ ಯಶಸ್ಸಿಗೆ ಹಾರೈಸಿದರು.

ಪ್ರಧಾನಮಂತ್ರಿಗಳ ಭಾಷಣ ಮುಗಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೂ ಮೊದಲನೇ ಸೆಷನ್‍ನಲ್ಲಿ ಲಸಿಕೆ ಪಡೆಯಲು ಪಾಲ್ಗೊಂಡಿದ್ದ ವೈದ್ಯರು, ಶುಶ್ರೂಷಕರು, ಲ್ಯಾಬ್ ಟೆಕ್ನೀಷಿನ್, ಡಿ ಗ್ರೂಪ್ ನೌಕರರಿಗೆ ಧೈರ್ಯ ಹೇಳಿ ಹುರಿದುಂಬಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದರಾದ ಜಿ.ಎಂ ಸಿದ್ದೇಶ್ವರ ಮಾತನಾಡಿ, ಇಂದು ನಮ್ಮ ರಾಷ್ಟ್ರದ ಪ್ರಧಾನ ಮಂತ್ರಿಯವರು ಇಡೀ ದೇಶವನ್ನುದ್ದೇಶಿಸಿ ಮಾತನಾಡಿ ಕೊರೊನಾ ಲಸಿಕಾಕರಣಕ್ಕೆ ಚಾಲನೆ ನೀಡಿದ್ದಾರೆ. ಇದೀಗ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಭಾಷಣ ಕೇಳಿದ ನಂತರ ನಮ್ಮ ಜಿಲ್ಲೆಯಲ್ಲಿಯೂ ಇಂದು ಸಾಂಕೇತಿಕವಾಗಿ ಲಸಿಕಾಕರಣಕ್ಕೆ ಚಾಲನೆ ನೀಡಲಾಗಿದೆ.

ಜಿಲ್ಲೆಯ ಏಳು ಕೇಂದ್ರಗಳಲ್ಲಿ ಇಂದು ಲಸಿಕಾಕರಣ ನಡೆಯುತ್ತಲಿದೆ. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುತ್ತಿದೆ. ಯಾವುದೇ ಭಯಕ್ಕೆ ಒಳಗಾಗದೇ ಲಸಿಕೆಯನ್ನು ಪಡೆಯಬಹುದಾಗಿದ್ದು ಕೇಂದ್ರ ಸರ್ಕಾರದ ಈ ಲಸಿಕಾ ಕಾರ್ಯಕ್ರಮ ಸಂಪೂರ್ಣ ಯಶಸ್ಸು ಕಾಣಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮಂತ್ರಿಗಳು ಕೊರೊನಾ ಲಸಿಕಾಕರಣ ಕುರಿತು ಭಾಷಣ ಮಾಡಿ, ಲಸಿಕಾ ಕರಣಕ್ಕೆ ಚಾಲನೆ ನೀಡಿದ ತಕ್ಷಣ ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ ಜಿಲ್ಲೆಯ ಏಳು ಕೇಂದ್ರಗಳಲ್ಲಿ ಲಸಿಕಾಕರಣಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

18 ವರ್ಷ ಮೇಲ್ಪಟ್ಟ, ಯಾವುದೇ ಇತರೆ ಕಾಯಿಲೆಗಳ ಗಂಭೀರತೆ ಇಲ್ಲದ ತಲಾ ನೂರು ಆರೋಗ್ಯ ಕಾರ್ಯಕರ್ತ ಫಲಾನುಭವಿಗಳ ಪಟ್ಟಿ ಈಗಾಗಲೇ ತಯಾರಿಸಿದ ಪ್ರಕಾರ ಇಂದು ಲಸಿಕಾರಕರಣ ಮಾಡಲಾಗುತ್ತಿದೆ. ಮೊದಲನೇ ಹಂತದಲ್ಲಿ 6876 ಸರ್ಕಾರಿ, 12194 ಖಾಸಗಿ ಸೇರಿದಂತೆ ಒಟ್ಟು 19070 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಪಟ್ಟಿ ತಯಾರಿಸಿಡಲಾಗಿದೆ.

ಯಾವುದೇ ರೀತಿಯ ಭಯವಿಲ್ಲದೇ, ನಿರಾತಂಕವಾಗಿ ಲಸಿಕೆ ಪಡೆಯಬಹುದಾಗಿದ್ದು, ಕೋವ್ಯಾಕ್ಸಿನ್‍ಗೆ ಸಂಬಂಧಿಸಿದಂತೆ ಯಾರೂ ಕೂಡ ಸುಳ್ಳು ಸುದ್ದಿ, ವದಂತಿಗಳಿಗೆ ಕಿವಿಗೊಡಕೂಡದು. ಯಾರಾದರೂ ಒಂದು ಪಕ್ಷ ಯಾರಾದರೂ ಸುಳ್ಳುಸುದ್ದಿ, ವದಂತಿಗಳನ್ನು ಹಬ್ಬಿಸಿದರೆ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಂದು ಜಿಲ್ಲಾ ಚಿಗಟೇರಿ ಆಸ್ಪತ್ರೆ, ಬಾಪೂಜಿ/ಜೆಜೆಎಂಸಿ ಕಾಲೇಜು, ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರು ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಗಳೂತು ತಾಲ್ಲೂಕಿನ ಬಿಳಿಚೋಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದು ಕೋವಿಡ್ ಲಸಿಕೆಯಾದ ಕೋವಿಶೀಲ್ಡ್ ನೀಡಿಕೆಗೆ ಚಾಲನೆ ನೀಡಿಲಾಗಿದೆ ಮೊದಲನೇ ಸೆಷನ್‍ನಲ್ಲಿ ಪ್ರತಿ ಕೇಂದ್ರಗಳಲ್ಲಿ ತಲಾ ನೂರು ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಲಸಿಕಾಕರಣ ಕಾರ್ಯಕ್ರಮ ಶಾಂತ ರೀತಿಯಲ್ಲಿ ನಡೆಯಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಯಾರೂ ಕೂಡ ಲಸಿಕಾಕರಣ ಕುರಿತು ಅನಗತ್ಯ ಗೊಂದಲ ಸೃಷ್ಟಿಸಬಾರದು. ಸುಳ್ಳು ಸುದ್ದಿ, ವದಂತಿಗೆ ಎಡೆ ಮಾಡಿದರೆ ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಮುಂದಿನ ದಿನಗಳಲ್ಲಿ ಕೋವಿಡ್‍ನಿಂದ ಆಗಬಹುದಾದ ಸಾವು ನೋವು ಮತ್ತು ಸಮುದಾಯ ಹರಡುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ಜಾರಿಗೆ ತಂದಿದೆ. ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು ಜಿಲ್ಲೆಯಲ್ಲಿ ಒಟ್ಟು 36 ಕೇಂದ್ರಗಳಲ್ಲಿ 19070 ಜನರಿಗೆ ಲಸಿಕೆ ನೀಡಲಾಗುವುದು. ಒಟ್ಟು 108 ನುರಿತ ಲಸಿಕಾಕಾರರು ಲಸಿಕೆ ನೀಡುವರು ಎಂದರು.

ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ ಮಾತನಾಡಿ, ಏಳು ಕೇಂದ್ರಗಳಲ್ಲಿ ಒಟ್ಟು 30 ನುರಿತ ಲಸಿಕಾರರು ಲಸಿಕೆ ನೀಡುವರು. ಆನ್‍ಲೈನ್‍ನಲ್ಲಿ ಲಸಿಕೆ ಪಡೆಯುವವರ ಒಪ್ಪಿಗೆ ಪತ್ರವನ್ನು ಅಪ್‍ಲೋಡ್ ಮಾಡಿದ ನಂತರ ಲಸಿಕೆ ನೀಡಲಾಗುವುದು. ಲಸಿಕೆಗೆ ಮುನ್ನ ಅವರೊಂದಿಗೆ ಆಪ್ತಸಮಾಲೋಚನೆ ನಡೆಸಿ, ಲಸಿಕೆ ನೀಡಿದ ನಂತರ ವಿಶ್ರಾಂತಿ ಕೊಠಡಿಯಲ್ಲಿ ಅವರನ್ನು ಅರ್ಧ ಗಂಟೆ ಅಬ್ಸವರ್ಷೇನ್‍ಲ್ಲಿಟ್ಟು ಕಳುಹಿಸಿಕೊಡಲಾಗುವುದು. ಎಲ್ಲ ಲಸಿಕಾ ಕೇಂದ್ರಗಳಲ್ಲಿ ಅಡ್ಡ ಪರಿಣಾಮಗಳೇನಾದರೂ ಸಂಭವಿಸಿದರೆ ಅಗತ್ಯವಾಗಿ ಬೇಕಾದ ಔಷಧೋಪಚಾರದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಡಾ.ಶಶಿಧರ್ ಕೋವಿಶೀಲ್ಡ್ ಲಸಿಕೆ ಪಡೆದ ನಂತರ ಮಾತನಾಡಿ, ಲಸಿಕೆ ಪಡೆದ ನಂತರ ಯಾವುದೇ ಭಯವಾಗಲೀ, ಅಡ್ಡ ಪರಿಣಾಮವಾಗಲೀ ನನಗೆ ಆಗಿಲ್ಲ. ನಿರಾತಂಕವಾಗಿ ಎಲ್ಲರೂ ಲಸಿಕೆ ಪಡೆಯಬಹುದು. ಮೊದಲಿಗೆ ನನಗೆ ಕೌನ್ಸಲಿಂಗ್ ರೂಂನಲ್ಲಿ ಕೌನ್ಸಲಿಂಗ್ ಮಾಡಿ ನಂತರ ನನ್ನ ಒಪ್ಪಿಗೆ ಪತ್ರ ವೆಬ್‍ಪೋರ್ಟಲ್‍ನಲ್ಲಿ ಅಪ್‍ಲೋಡಿದ ನಂತರ ಲಸಿಕೆ ನೀಡಲಾಯಿತು. ನಂತರ ವಿಶ್ರಾಂತಿ ಕೊಠಡಿಯಲ್ಲಿ ಅರ್ಧ ಗಂಟೆ ಅಬ್ಸರ್ವೇಷನ್ ಮಾಡಿದ ನಂತರ ಹೊರಗೆ ಬಂದಿದ್ದೇನೆ. ಆರಾಮಾಗಿದ್ದೇನೆ ಎಂದರು.

ಲಸಿಕೆ ಪಡೆದ ಆಸ್ಪತ್ರೆಯ ಡಿ ಗ್ರೂಪ್ ನೌಕರ ರಾಜಾಭಕ್ಷ ಮಾತನಾಡಿ, ನಾನು ಮೊದಲನೇ ಹಂತದಲ್ಲಿ ಮೊದಲನೇ ದಿನವೇ ಲಸಿಕೆ ಪಡೆಯುತ್ತಿರುವುದು ಖುಷಿಯಾಗಿದೆ. ಲಸಿಕಾ ಪ್ರಕ್ರಿಯೆಯಲ್ಲಿ ಯಾವುದೇ ಭಯ ಆಗಲಿಲ್ಲ. ಲಸಿಕೆ ಪಡೆದು ಅರ್ಧ ಗಂಟೆ ನಂತರವೂ ಆರಾಮಾಗಿದ್ದೇನೆ. ಯಾರೂ ಯಾವುದೇ ರೀತಿಯ ಆತಂಕ್ಕೆ ಒಳಗಾಗದೇ ಧೈರ್ಯವಾಗಿ ಲಸಿಕೆ ಪಡೆಯಬಹುದೆಂದರು.

ಚಿಗಟೇರಿ ಆಸ್ಪತ್ರೆಯಲ್ಲಿ ಲಸಿಕಾಕರಣ ಚಾಲನೆ ವೇಳೆ ಡಾ. ಶಶಿಧರ್, ಡಾ.ಸಂಜಯ್, ಡಾ.ಯತೀಶ್, ಶುಶ್ರೂಷಕರಾದ ಗುಣೇಶ್ವರಿ, ಅಂಬುಜಾಕ್ಷಿ, ಶಿವಲೀಲಮ್ಮ.ಜಿ.ಎಸ್, ಶಾಂತಿ, ಆಶಾ ಕಾಂಬ್ಳಿ, ಲ್ಯಾಬ್ ಟೆಕ್ನೀಷಿಯನ್ ಕರಿಬಸಪ್ಪ, ಡಿ ಗ್ರೂಪ್ ನೌಕರರಾದ ರಾಜಾಭಕ್ಷ, ರವಿರಾಜ್ ಇತರರು ಲಸಿಕೆ ಹಾಕಿಸಿಕೊಂಡರು. ಮೊದಲ ಲಸಿಕೆ ಪಡೆದ ಡಾ.ಶಶಿಧರ್ ಮತ್ತು ಎರಡನೇ ಲಸಿಕೆ ಪಡೆದ ಡಿ ಗ್ರೂಪ್ ನೌಕರ ರಾಜಭಕ್ಷ ಇವರನ್ನು ಗೌರವಿಸಲಾಯಿತು.

ಈ ವೇಳೆ ದಾವಣಗೆರೆ ತಹಶೀಲ್ದಾರ್ ಗಿರೀಶ್, ಡಿಹೆಚ್‍ಓ ಡಾ.ನಾಗರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್, ತಾಲ್ಲೂಕು ವೈದ್ಯಾಧಿಕಾರಿ, ಇತರೆ ವೈದ್ಯರು, ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending