ದಿನದ ಸುದ್ದಿ

ಕೊರೋನಾ ಲಸಿಕೆ ಪಡೆದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಫೆ.8 ರಿಂದ ಆರಂಭವಾಗುವ ಎರಡನೇ ಹಂತದ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿಗಳು ಸ್ವತಃ ಲಸಿಕೆ ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಜಿಲ್ಲಾಧಿಕಾರಿಗಳಿಗೆ ಸಾತ್ ನೀಡಿದರು.

ಮೊದಲನೇ ಹಂತದ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಗಿಸಿ ಎರಡನೇ ಹಂತದ ಲಸಿಕೆ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯಲಿದ್ದು ಈ ಹಂತದಲ್ಲಿ ಪೊಲೀಸ್ ಇಲಾಖೆ, ಪಂಚಾಯಿತ್ ರಾಜ್ ಅಡಿಯಲ್ಲಿ ಬರುವ ಸ್ಥಳೀಯ ಆಡಳಿತ ಸಂಸ್ಥೆಗಳು, ನಗರ ಸ್ಥಳೀಯ ಆಡಳಿತ ಸಂಸ್ಥೆಗಳು, ಅಗ್ನಿಶಾಮಕದಳ, ಹೋಂಗಾಡ್ರ್ಸ್‍ಗಳಿಗೆ ನೀಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version