ದಿನದ ಸುದ್ದಿ

ದಾವಣಗೆರೆ | ಕೊರೋನಾ ಸೋಂಕಿತ ವ್ಯಕ್ತಿಯ ಪ್ರವಾಸ ಇತಿಹಾಸ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗ ನಿಯಂತ್ರಣಕ್ಕೆ ಸಂಬಂಧಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿರುತ್ತದೆ. ಈ ಆದೇಶ ಹಾಗೂ ಸುತ್ತೋಲೆಯಂತೆ ಜಿಲ್ಲಾಡಳಿತದಿಂದಲೂ ಸಹ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಸಹ ದಾವಣಗೆರೆ ನಗರದಲ್ಲಿ ಮಾ.27 ರಂದು ಒಂದು ಪಾಸಿಟಿವ್ ಪ್ರಕರಣವು ದೃಡಪಟ್ಟಿರುತ್ತದೆ.

ಈ ವ್ಯಕ್ತಿಯ ಪ್ರವಾಸ ಇತಿಹಾಸ ಪರಿಶೀಲಿಸಿದಾಗ ಇವರು ಮಾ.18 ರಂದು ಬೆಂಗಳೂರಿನಿಂದ ಬೆಳಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ರಾಜಹಂಸ ಬಸ್ ಸಂಖ್ಯೆ ಕೆಎ-57, ಎಫ್.3802ರಲ್ಲಿ ದಾವಣಗೆರೆಗೆ ಪ್ರಯಾಣಿಸಿರುತ್ತಾರೆ. ಅಂದು ಈ ಬಸ್ಸಿನಲ್ಲಿ ಪ್ರಯಾಣಿಸಿದ ಸಹ ಪ್ರಯಾಣಿಕರು ಈ ಕೂಡಲೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆಗೆ ಒಳಪಡಲು ಈ ಮೂಲಕ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳಲಾಗಿದೆ.ಹಾಗೂ ಕೊಡಲೇ ಆರೋಗ್ಯ ಇಲಾಖೆ ಸಹಾಯವಾಣಿ ಸಂಖ್ಯೆ 104ಕ್ಕೆ ಕರೆ ಮಾಡಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version