ದಿನದ ಸುದ್ದಿ
ರಾಜ್ಯದ ಈ ಜಿಲ್ಲೆಯಲ್ಲಿ ಕೊರೋನಾದಿಂದ ಮೃತ ಪಟ್ಟವರ ಸಂಖ್ಯೆ ತುಂಬಾ ಕಡಿಮೆ..!
ಸುದ್ದಿದಿನ,ಉಡುಪಿ, : ಕೋವಿಡ್ 19 ನಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವವರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಇಡೀ ರಾಜ್ಯದಲ್ಲಿ ಈ ಸಾಧನೆ ಮಾಡಿರುವ 3 ಜಿಲ್ಲೆಗಳಲ್ಲಿ ಉಡುಪಿ ಒಂದಾಗಿದೆ, ಆದರೆ ಉಳಿದ 2 ಜಿಲ್ಲೆಗಳಲ್ಲಿ ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ, ಸಾವಿನ ದವಡೆಯಲ್ಲಿದ್ದ ರೋಗಿಗಳನ್ನು , ಬೇರೆಡೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ಅಂತಹ ರೋಗಿಗಳಿಗೆ , ಇಲ್ಲೇ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ, ಇದಕ್ಕೆ ಮುಖ್ಯ ಮುಖ್ಯ ಕಾರಣ ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿರ್ಸ್ ಗಳು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಅವರು ಶನಿವಾರ, ಉಡುಪಿಯ ಶಾಮಿಲಿ ಸಭಾಂಗಣದಲ್ಲಿ , ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿರ್ಸ್ ಗಳು, ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಒತ್ತಡಗಳಿಗೆ ಒಳಗಾಗದೇ, ಮನೋಸ್ಥೆರ್ಯದಿಂದ ಕೆಲಸ ನಿರ್ವಹಿಸುವ ಕುರಿತು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಫ್ರಂಟ್ಲೈನ್ ವಾರಿರ್ಸ್ ಗಳಾಗಿ, ಸರ್ಕಾರಿ ವೈದ್ಯರು , ಆರೋಗ್ಯ ಇಲಾಖೆಯ ಅಧಿಕಾರಿಗಳು,ವಿವಿಧ ಇಲಾಖೆಯ ಅಧಿಕಾರಿಗಳು , ಜಿಲ್ಲಾ ಎಕ್ಸ್ಪರ್ಟ್ ತಂಡದ ವೈದ್ಯರುಗಳು , ತಹಸೀಲ್ದಾರ್ ಗಳು, ಕಾರ್ಯ ನಿರ್ವಹಣಾಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ, ರೋಗಿಗಳ ಜೀವ ಉಳಿಸಲು ಆದ್ಯತೆ ನೀಡಿದ್ದರಿಂದ , ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಕಡಿಮೆಯಾಗಿದೆ, ಇದಕ್ಕೆ ಇವರೆಲ್ಲರ ಪರಿಶ್ರಮವೇ ಕಾರಣ, ಅಲ್ಲದೇ ಕೊರೋನಾ ವಾರಿರ್ಸ್ ಗಳ ಸುರಕ್ಷತೆಗೆ ಸಹ ಹೆಚ್ಚಿನ ಮುಂಜಾಗ್ರತೆ ವಹಿಸಿದ್ದು, ಇದುವರೆಗೆ ಕೊರೋನಾ ವಾರಿರ್ಸ್ ಮರಣ ಹೊಂದಿಲ್ಲ. ಖಾಸಗಿ ಆಸ್ಪತ್ರೆಗಳ ಸಹಕಾರ ಉತ್ತಮವಾಗಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೋವಿಡ್ ಆರಂಭದಿ0ದಲೂ ಲಾಕ್ ಡೌನ್, ಲಾಕ್ ಡೌನ್ ತೆರವು, ಹೊರ ದೇಶ, ರಾಜ್ಯಗಳಿಂದ ಬಂದ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸುವುದು, ಅವರ ಆರೋಗ್ಯ ತಪಾಸಣೆ, ವಲಸೆ ಕಾರ್ಮಿಕರ ಸುರಕ್ಷತೆ ಈ ಎಲ್ಲಾ ಸಮಸ್ಯೆಗಳನ್ನ್ಲು ಅತ್ಯಂತ ಶಿಸ್ತಿನಿಂದ , ದೈರ್ಯದಿಂದ ಎದುರಿಸಿದ್ದೇವೆ, ಹಲವು ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ನಡೆದರೂ ಸಹ , ಟೀಕೆಗಳಿಗೆ ವಿಚಲಿತರಾಗದೇ ಕೆಲಸ ಮಾಡಿರುವುದರಿಂದ , ಪ್ರಸ್ತುತ ಕೋವಿಡ್ ಲಕ್ಷಣಗಳಿರುವ ರೋಗಿಗಳ ಸಂಖ್ಯೆ ಕಡಿಮೆಯಾಗಿದೆ.
ತೀರ ವಿಷಮ ಪರಿಸ್ಥಿತಿಯಲ್ಲಿರುವ ರೋಗಿಗಳ ಸಂಖ್ಯೆ ಸಹ ಕಡಿಮೆಯಾಗಿದೆ, ಜಿಲ್ಲಾಡಳಿತಕ್ಕೆ ಅತ್ಯಂತ ಕಷ್ಟಕರವಾಗಿದ್ದ ಕಾರ್ಯಗಳನ್ನು ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಸಹಕಾರದಿಂದ ಯಶಸ್ವಿಯಾಗಿ ನಿಭಾಯಿಸಲಾಗಿದೆ , ಕೊರೋನ ಸಂಕಷ್ಟ ಕಾಲದಲ್ಲೂ ಸಹ ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳನ್ನು ಒದಗಿಸುತ್ತಿದ್ದು, ಕಂದಾಯ ಇಲಾಖೆಯ ಸೇವೆಗಳನ್ನು ನೀಡುವಲ್ಲಿ ಕಳೆದ 12 ತಿಂಗಳಿ0ದ ರಾಜ್ಯದಲ್ಲೇ ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ ದಿನ ಅನಾರೋಗ್ಯದ ಕಾರಣ , ಕೋವಿಡ್ ವಿರುದ್ದ ಹೋರಾಟದಲ್ಲಿ ಕಾರ್ಯ ನಿರ್ವಹಿಸಿದ ಸಾಧಕರಿಗೆ ಜಿಲ್ಲಾಡಳಿತ ನೀಡಿದ ಪ್ರಶಸ್ತಿ ಸ್ವೀಕರಿಸದ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ ಭಟ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮಾಹೆಯ ಉಪ ಕುಲಪತಿ ಲೆ.ಜನರಲ್ ಡಾ.ವೆಂಕಟೇಶ್, ರೋ.ಅಭಿನಂದನ ಶೆಟ್ಟಿ ಜಿಲ್ಲೆಯಲ್ಲಿ ಕೋವಿಡ್ ಫ್ರಂಟ್ಲೈನ್ ವಾರಿರ್ಸ್ ಗಳು, ಆತ್ಮಸ್ಥೆöÊರ್ಯದಿಂದ ಯಾವುದೇ ಸಂದರ್ಭದಲ್ಲಿ ಸವಾಲುಗಳಿಗೆ ದೃತಿಗೆಡದೇ , ಕಾರ್ಯನಿರ್ವಹಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಹೆಚ್ಓ ಡಾ.ಸುಧೀರ್ ಚಂದ್ರ ಸೂಡಾ, ಕೆಎಂಸಿ ಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ ಭಟ್ ಸ್ವಾಗತಿಸಿದರು, ಡಾ. ಪ್ರೇಮಾನಂದ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ3 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ3 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

