ದಿನದ ಸುದ್ದಿ
ಕೊರೋನಾ ಆಸ್ಪತ್ರೆಯಲ್ಲೊಬ್ಬ ಯೋಗಗುರು ಚಾಂದಪಾಶಾ..!
ಸುದ್ದಿದಿನ,ಬಳ್ಳಾರಿ: ಕೊರೊನಾ ಸೊಂಕಿತರಾಗಿ ಬಳ್ಳಾರಿಯ ವಿಮ್ಸ್ ಸರಕಾರಿ ದಂತ ಮಹಾವಿದ್ಯಾಲಯದಲ್ಲಿ 8 ದಿನಗಳ ಹಿಂದೆ ದಾಖಲಾಗಿರುವ ಕಂಪ್ಲಿ ಪುರಸಭೆಯ ಸದಸ್ಯ ಚಾಂದಪಾಶಾ ಅವರು ಸೊಂಕಿತರಿಗೆ ಯೋಗಾಸನದ ವಿವಿಧ ಭಂಗಿಗಳು ಹಾಗೂ ಸೂರ್ಯನಮಸ್ಕಾರಗಳನ್ನು ಕಲಿಸುವುದರ ಜತೆಗೆ ನೈತಿಕ ಸ್ಥೈರ್ಯ ತುಂಬುವುದರ ಮೂಲಕ ಗಮನಸೆಳೆಯುತ್ತಿದ್ದಾರೆ.
ಆತ್ಮಸ್ಥೈರ್ಯವೇ ಸರ್ವಸ್ವ;ಧೈರ್ಯವೇ ಮುಖ್ಯ. ನೊಂದು ಈ ಕೊರೊನಾ ಚಿಕಿತ್ಸೆಗೆ ಸೊಂಕಿತರಾಗಿ ಬರಬೇಡಿ ಪಿಕ್ನಿಕ್ ಅಂತ ತಿಳಿದುಕೊಂಡು ಅರಾಮವಾಗಿ ಬನ್ನಿ;ಏನು ಆಗಲ್ಲ ಬಿ ಹ್ಯಾಪಿಯಾಗಿರಿ ಎಂದು ಹೊಸದಾಗಿ ಬರುವ ಸೊಂಕಿತರಲ್ಲಿ ಹಾಗೂ ಊಟ-ನೀರು ಸೇವಿಸದೇ ಮುಂದೇನು ನಮ್ಮಗತಿ ಅಂತ ಸೊಂಕಿತರ ವಾರ್ಡ್ನಲ್ಲಿ ತಲೆಮೇಲೆ ಕೈಯೆತ್ತಿ ಕುಳಿತವರಿಗೆ ಸ್ಪೂರ್ತಿಯ ಮಾತುಗಳನ್ನಾಡಿ, ಅವರಿಗೆ ಪ್ರತಿನಿತ್ಯ ಬೆಳಗ್ಗೆ ಯೋಗಾಸನದ ವಿವಿಧ ಭಂಗಿಗಳನ್ನು ಕಲಿಸಿಕೊಡುತ್ತಿದ್ದಾರೆ ಮತ್ತು ಸೂರ್ಯನಮಸ್ಕಾರದ ಮಹತ್ವದ ಬಗ್ಗೆ ತಿಳಿಸಿಕೊಡುವುದರ ಜತೆಗೆ ಸಂಸ್ಕೃತ ಶ್ಲೋಕಗಳನ್ನು ಪಠಿಸುತ್ತಿರುವುದು ವಿಶೇಷ!.
ತಾವು ಅಲ್ಪಸಂಖ್ಯಾತ ಸಮುದಾಯದವರಲ್ಲವೇ ಎಂದು ಪ್ರಶ್ನಿಸಿದ್ದಕ್ಕೆ ಮೊದಲು ನಾನು ಭಾರತೀಯ; ನನಗೆ ಯಾವುದೇ ಧರ್ಮವಿಲ್ಲ ಎಂದು ಹೇಳುವ ಚಾಂದಪಾಶಾ ಕಳೆದ 8 ದಿನಗಳಿಂದಲೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಯೋಗ ಹಾಗೂ ಸೂರ್ಯನಮಸ್ಕಾರ ಕಲಿಸುವುದರ ಜತೆಗೆ ತನ್ನೊಂದಿಗೆ ಚಿಕಿತ್ಸೆಗೆ ದಾಖಲಾಗಿರುವವರಿಗೆ ಸ್ವತಃ ತನ್ನದೇ ಖರ್ಚಿನಲ್ಲಿ ಕಷಾಯಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಖರೀದಿಸಿ ತನ್ನ ಕೈಯಾರೆ ಪ್ರತಿನಿತ್ಯ ಕಷಾಯ ಸಿದ್ದಪಡಿಸಿ 50 ಜನರಿಗೆ ಕುಡಿಸುತ್ತಿದ್ದಾರೆ.
14 ವರ್ಷಗಳಿಂದಲೂ ಈ ರೀತಿಯ ಯೋಗಾಸನ ಮತ್ತು ಸೂರ್ಯನಮಸ್ಕಾರ ಹಾಗೂ ವಿವಿಧ ರೀತಿಯ ಸಂಸ್ಕøತ ಶ್ಲೋಕಗಳನ್ನು ಪಠಿಸುತ್ತಿದ್ದೇನೆ. ಈ ಕೊರೊನಾವೇನು ದೊಡ್ಡ ರೋಗವಲ್ಲ. ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೇವೆ ಎಂದು ತಿಳಿಸುವ ಚಾಂದಪಾಶಾ ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಕೊರೊನಾ ಮಾರಿಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಚಾಂದಪಾಶಾ ಅವರು ಇಲ್ಲಿ ದಾಖಲಾಗಿನಿಂದ ಇಲ್ಲಿಯವರೆಗೆ ಸೊಂಕಿತರಿಗೆ ಯೋಗಾಸನದ ವಿವಿಧ ಭಂಗಿಗಳನ್ನು ಹಾಗೂ ಸೂರ್ಯನಮಸ್ಕಾರ ಕಲಿಸಿಕೊಡುತ್ತಿದ್ದಾರೆ. ಆಗಾಗ ಸಂಸ್ಕøತ ಶ್ಲೋಕಗಳನ್ನು ಪಠಿಸುತ್ತಿದ್ದಾರೆ. ಜೊತೆಗೆ ಇಲ್ಲಿರುವ ಎಲ್ಲರಿಗೂ ತನ್ನ ಕೈಯಾರೇ ಕಷಾಯ ತಯಾರು ಮಾಡಿ ಒದಗಿಸುತ್ತಿದ್ದಾರೆ.
ಇಲ್ಲಿ ದಾಖಲಾಗಿರುವ ಎಲ್ಲರಿಗೂ ಆತ್ಮಸ್ಥೈರ್ಯದ ಮಾತುಗಳನ್ನಾಡುವ ಮೂಲಕ ಅವರನ್ನು ಚಿಂತೆಯಿಂದ ವಿಮುಕ್ತಿ ಮಾಡಿಸಿ ಅವರನ್ನು ಸಂತೋಷದಿಂದ ಇರುವಂತೆ ಮಾಡುತ್ತಿದ್ದಾರೆ. ನಿಜಕ್ಕೂ ಈ ವ್ಯಕ್ತಿ ಅದ್ಭುತಸ್ಪೂರ್ತಿ ನಮಗೆಲ್ಲರಿಗೂ ಎಂದು ವಿಮ್ಸ್ ಸರಕಾರಿ ದಂತ ಮಹಾವಿದ್ಯಾಲಯದ ಕೋವಿಡ್ ನೋಡಲ್ ಅಧಿಕಾರಿ ಡಾ.ರಾಘವೇಂದ್ರ ಅವರು ಸಂತಸ ವ್ಯಕ್ತಪಡಿಸುತ್ತಾರೆ.
ಚಾಂದಪಾಶಾ ಅವರು ವಿವಿಧ ಯೋಗಾಸನದ ಭಂಗಿಗಳ ವಿಡಿಯೋ ಗಮನಿಸಿದೆ ಹಾಗೂ ಅವರಾಡುವ ಸ್ಪೂರ್ತಿಯುತ ಮಾತುಗಳನ್ನ ಆಲಿಸಿದೆ ತುಂಬಾ ಸಂತೋಷವಾಯ್ತು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಿಳಿಸಿದರು.
–ವಿಶೇಷ ವರದಿ
ರಾಮಲಿಂಗಪ್ಪ ಬಿ.ಕೆ
ಹಿರಿಯ ಸಹಾಯಕ ನಿರ್ದೇಶಕರು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಳ್ಳಾರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ22 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

