Connect with us

ದಿನದ ಸುದ್ದಿ

ದಾವಣಗೆರೆ | ಕೊರೊನಾ ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆ, ನಾಳೆಯಿಂದ 144 ಸೆಕ್ಷನ್ ಜಾರಿ : ಏನಿರತ್ತೆ,ಏನಿರಲ್ಲ ಓದಿ ಈ ಸುದ್ದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್‍ನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಒಂದು ವಾರ ಮಾ.18 ರಿಂದ 24 ರವರೆಗೆ ಹಲವು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲೆಯಾದ್ಯಮತೆ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾ ಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವಂತಹ ಸಾಧ್ಯತೆಗಳಿದ್ದು, ಇಂತಹ ಸಂದರ್ಭಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಮಾ.18 ರಿಂದ 24 ರವರೆಗೆ ದಾವಣಗೆರೆ ಜಿಲ್ಲೆಯಾಯಂತ ನಡೆಯಲಿರುವ ಜಾತ್ರೆ, ಸಂತೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾ ಕೂಟ ಹಾಗೂ ಯಾವುದೇ ಧಾರ್ಮಿಕ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.

ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ನಿರ್ಬಂಧಿಸುವುದು ಅವಶ್ಯವೆಂದು ಕಂಡು ಬಂದಿರುವುದರಿಂದ ಸಿಆರ್‍ಪಿಸಿ 1973 ರ ಕಲಂ 144 ರನ್ವಯ ಮಾ.18 ರಿಂದ 24 ರವರೆಗೆ ಜಿಲ್ಲೆಯಾದ್ಯಮತ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೆಧಿಸಿ, ನೀಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಆದೇಶವು ಅಂತ್ಯಕ್ರಿಯೆ, ಮೆರವಣಿಗೆ ಮತ್ತು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲವೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending