Connect with us

ದಿನದ ಸುದ್ದಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಕೌನ್ಸಿಲಿಂಗ್

Published

on

ಸುದ್ದಿದಿನ,ದಾವಣಗೆರೆ : ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.

ಈ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಶಾಲಾ ಆಯ್ಕೆಗಾಗಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಜೂನ್ 12 ರಂದು ಬೆಳಿಗ್ಗೆ 10 ಗಂಟೆಗೆ, ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಜೂನ್ 13 ರಂದು ಬೆಳಿಗ್ಗೆ 10 ಗಂಟೆಗೆ ತುಂಗಭದ್ರ ಸಭಾಂಗಣ, ಜಿಲ್ಲಾಡಳಿತ ಭವನ, ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ ಇಲ್ಲಿ ಕಡ್ಡಾಯವಾಗಿ ಕೌನ್ಸಿಲಿಂಗ್‍ನಲ್ಲಿ ಭಾಗವಹಿಸಬೇಕು. ಈ ದಿನಾಂಕಗಳಂದು ಕೌನ್ಸಿಲಿಂಗ್‍ನಲ್ಲಿ ಭಾಗವಹಿಸದೇ ಇರುವ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending