ರಾಜಕೀಯ
ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ..!
ಸುದ್ದಿದಿನ ಡೆಸ್ಕ್ : ಇನ್ನು ಕೆಲವು ನಿಮಿಷಗಳಲ್ಲಿ (11ಗಂಟೆಗೆ) ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರದ ಚೊಚ್ಚಲ ಬಜೆಟ್ ಅನ್ನು ಹಣಕಾಸು ಸಚಿವ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿರುವ ಎಚ್ ಡಿ ಕುಮಾರಸ್ವಾಮಿ ಮಂಡಿಸಲು ಸಕಲ ತಯಾರಿಯೊಂದಿಗೆ ಸಿದ್ಧರಾಗಿದ್ದಾರೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ರಾಜ್ಯದ ಜನತೆಗೆ, ವಿಶೇಷವಾಗಿ ರೈತರಿಗೆ ಅಭಿವೃದ್ಧಿಗೆ ಮಹತ್ತರವಾದ ಯೋಜನೆಗಳನ್ನು ನೀಡುವುದಾಗಿ ಹೇಳಿದ್ದವು. ಪ್ರಣಾಳಿಕೆಯ ಎಷ್ಟು ಭರವಸೆಗಳನ್ನು ಈಡೇರಿಸುತ್ತವೆಯೋ ಇನ್ನು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.