ದಿನದ ಸುದ್ದಿ

ಕರ್ನಾಟಕ ವಿಧಾನ ಪರಿಷತ್ತಿನ 4 ಸ್ಥಾನಗಳ ಮತಗಳ ಎಣಿಕೆ ಪ್ರಗತಿಯಲ್ಲಿ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

ಇಂದು ಬೆಳಗ್ಗೆ 8 ಗಂಟೆಯಿಂದ ಮೈಸೂರಿನ ಮಹಾರಾಣಿ ತಾಂತ್ರಿಕ ಕಾಲೇಜಿನಲ್ಲಿ ಎಣಿಕೆ ಆರಂಭವಾಗಿದ್ದರೆ, ಬೆಳಗಾವಿಯ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಎಣಿಕೆ ಬಿಗಿಭದ್ರತೆಯಲ್ಲಿ ನಡೆಯುತ್ತಿದೆ. ಎರಡೂ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಅವರುಗಳ ಸಮ್ಮಖದಲ್ಲಿ ಎಣಿಕೆ ಮುಂದುವರೆದಿದೆ ಎಂದು ನಮ್ಮ ಪ್ರತಿನಿಧಿಗಳು ವರದಿ ಮಾಡಿದ್ದಾರೆ.

ಇದಕ್ಕಾಗಿ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕಣದಲ್ಲಿ ನಾಲ್ಕು ಕ್ಷೇತ್ರಗಳಿಗೆ 49 ಅಭ್ಯರ್ಥಿಗಳು ಇದ್ದಾರೆ. ಮತಪತ್ರದ ಮೂಲಕ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ ಪ್ರಾಶಸ್ತ್ಯದ ಮತಗಳನ್ನೂ ಎಣಿಕೆ ಮಾಡಬೇಕಾಗಿರುವುದರಿಂದ ಫಲಿತಾಂಶ ಸಂಜೆ ಅಥವಾ ರಾತ್ರಿ ವೇಳೆಗೆ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version