ದಿನದ ಸುದ್ದಿ
ಮೂರು ವಿಧದಲ್ಲಿ ಮತ ಎಣಿಕೆ ಸಿಬ್ಬಂದಿ
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆಗೆ ನಾಳೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮತ ಎಣಿಕೆ ಮೇ 13 ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಾಲ್ಕು ವಿವಿಧ ಸ್ಥಳಗಳಲ್ಲಿ ನಡೆಯಲಿದೆ.
ನಾಲ್ಕೂ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಮತ ಎಣಿಕೆ ಸಿಬ್ಬಂದಿ ಮೂರು ವಿಧದಲ್ಲಿ ಇದ್ದು, ಪ್ರತಿ ಟೇಬಲ್‌ಗೆ ಮೈಕ್ರೊ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಮೇ13 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರತಿ ಟೇಬಲ್‌ಗೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇರುತ್ತದೆ. ಎಣಿಕಾ ಮೇಲ್ವಿಚಾರಕರು ಮತ್ತು ಎಣಿಕಾ ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಬೆಂಗಳೂರು ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಡಾ.ದಯಾನಂದ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243