Connect with us

ದಿನದ ಸುದ್ದಿ

ಚುನಾವಣೆ ; ಜಿಲ್ಲೆಗಳ ಈ ಕೇಂದ್ರಗಳಲ್ಲಿ ಮತ ಎಣಿಕೆ ನಡಯಲಿದೆ

Published

on

ಸುದ್ದಿದಿನ ಡೆಸ್ಕ್ : ಕಳೆದ 10 ರಂದು ನಡೆದ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತಗಳ ಎಣಿಕೆ ನಾಳೆ ಆರಂಭವಾಗಲಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಎಣಿಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ಎಲ್ಲ ಜಿಲ್ಲೆಗಳ ಜಿಲ್ಲಾ ಕೇಂದ್ರದಲ್ಲಿ ಮತಗಳ ಎಣಿಕೆ ನಡೆಯಲಿದೆ. ಬೆಳಗಾವಿಯಲ್ಲಿ ರಾಣಿ ಪಾರ್ವತಿ ದೇವಿ ಕಾಲೇಜ್‌ನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ, ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾದಗಿರಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಲಬುರಗಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಮತ ಎಣಿಕೆಗೆ ಸಿದ್ಧತೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಬೀದರ್‌ನ ಬಿವಿಬಿ ಕಾಲೇಜಿನಲ್ಲಿ, ರಾಯಚೂರಿನಲ್ಲಿ ಎಲ್‌ವಿಡಿ ಕಾಲೇಜ್ ಕ್ಯಾಂಪಸ್, ಕೊಪ್ಪಳದಲ್ಲಿ ಗವಿಸಿದ್ದೇಶ್ವರ ವಿಜ್ಞಾನ, ಕಲಾ ವಾಣಿಜ್ಯ ಕಾಲೇಜಿನಲ್ಲಿ ಹಾಗೂ ಗದಗ್‌ನಲ್ಲಿ ಜಗದ್ಗರ ತೊಂಟದಾರ್ಯ ಇಂಜಿನಿಯರಿಂಗ್ ಕಾಲೇಜ್, ಧಾರವಾಡದ ಕೃಷಿ ವಿಶ್ವವಿದ್ಯಾಲಯ, ಉತ್ತರ ಕನ್ನಡದ ಕುಮಟಾದ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜು, ಹಾವೇರಿಯಲ್ಲಿ ದೇವಿಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್, ವಿಜಯನಗರ ಜಿಲ್ಲೆಯ ಹೊಸಪೇಟೆ ಪ್ರೌಢದೇವರಾಜ ವಿಜ್ಞಾನ ಸಂಸ್ಥೆ, ಬಳ್ಳಾರಿ ರಾವ್ ಬಹದ್ದೂರಿ ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜ್, ಚಿತ್ರದುರ್ಗದ ಸರ್ಕಾರಿ ವಿಜ್ಞಾನದ ನೂತನ ಕಟ್ಟಡದಲ್ಲಿ, ದಾವಣಗೆರೆಯ ಶಿವಗಂಗೋತ್ರಿ ದಾವಣೆಗೆರೆ ವಿಶ್ವವಿದ್ಯಾಲಯ, ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜು, ಉಡುಪಿಯ ಬ್ರಹ್ಮಗಿರಿಯ ಸಮೂಹ ಸಂಸ್ಥೆಯಲ್ಲಿ, ಚಿಕ್ಕಮಗಳೂರು ಇಂದಾವರ ದೊಡ್ಡ ಸಿದ್ದಲಿಂಗೇಗೌಡ ಕಾಲೇಜ್, ತುಮಕೂರಿನ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್, ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ವಿಶ್ವವಿದ್ಯಾಲಯದ ಕಲಾ ಕಾಲೇಜಿನಲ್ಲಿ ಮತಗಳ ಎಣಿಕೆ ನಡೆಯಲಿದೆ.

ಚಿಕ್ಕಬಳ್ಳಾಪುರದ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ, ಕೋಲಾರದ ಸರ್ಕಾರಿ ವಿದ್ಯಾರ್ಥಿಗಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ಕಡೆ ಮತಗಳ ಎಣಿಕೆ ನಡೆಯಲಿದೆ. ಬಸವನಗುಡಿಯಲ್ಲಿ ಬಿಎಂಎಸ್ ಮಹಿಳಾ ಕಾಲೇಜು, ಮೌಂಟ್ ಕಾರ್ಮಲ್ ಕಾಲೇಜ್, ಎಸ್‌ಎಸ್‌ಆರ್‌ಎಂವಿ ಪಿಯು ಕಾಲೇಜು, ಬೆಂಗಳೂರು ನಗರ ಜಿಲ್ಲೆಯ ಮತಗಳ ಎಣಿಕೆ ಸೆಂಜೊಸೆಫ್ ಇಂಡಿಯನ್ ಹೈಸ್ಕೂಲ್, ಬೆಂಗಳೂರು ಗ್ರಾಮಾಂತರ ಮತಗಳ ಎಣಿಕೆ ದೇವನಹಳ್ಳಿ ಪಟ್ಟಣದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ನಡೆಯಲಿದೆ.

ರಾಮನಗರ ಜಿಲ್ಲೆಯ ಮತಗಳ ಎಣಿಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ರಾಮನಗರದಲ್ಲಿ ನಡೆಯಲಿದೆ. ಮಂಡ್ಯದ ಮತಗಳ ಎಣಿಕೆ ಮಂಡ್ಯ ವಿಶ್ವವಿದ್ಯಾಲಯ, ಹಾಸನದ ಮತಗಳ ಎಣಿಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಹಾಸನ್, ದಕ್ಷಿಣ ಕನ್ನಡ ಮತಗಳ ಎಣಿಕೆ ಸೂರತ್ಕಲ್‌ನ ನ್ಯಾಷನಲ್ ಇನ್ಸೂಟೂಟ್ ಆಫ್ ಟೆಕ್ನಾಲಜಿಯಲ್ಲಿ, ಕೊಡಗಿನಲ್ಲಿ ಸೆಂಜೊಸೆಫ್ ಕಾಲೇಜಿನಲ್ಲಿ ಹಾಗೂ ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ಹಾಗೂ ಚಾಮರಾಜನಗರದ ಎಣಿಕೆ ಬಿದರಾಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತಗಳ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚುನಾವಣಾ ಫಲಿತಾಂಶವನ್ನು https://results.eci.gov.in/
ವೀಕ್ಷಿಸಬಹುದು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಎಲ್ಲ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ 3 ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳು ಸ್ಟ್ರಾಂಗ್ ರೂಂ ಕೇಂದ್ರಗಳಿಗೆ ಭೇಟಿ ನೀಡಿ ಸುರಕ್ಷತೆಯನ್ನು ಪರಿಶೀಲಿಸಿದರು. ನಾಳೆ 34 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ನಾಳೆಯೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending