Connect with us

ದಿನದ ಸುದ್ದಿ

ದಾವಣಗೆರೆ | ಕೋವಿಡ್ ಇರುವ ಮೂವರು ಗರ್ಭಿಣಿಯರ ಹೆರಿಗೆ

Published

on

ಸುದ್ದಿದಿನ, ದಾವಣಗೆರೆ : ಕೋವಿಡ್ ಇರುವ ಮೂವರು ಗರ್ಭಿಣಿಯರ ಪೈಕಿ ಎರಡು ಸಹಜ ಮತ್ತು ಒಂದು ಸಿಜೇರಿಯನ್ ಹೆರಿಗೆಯನ್ನು ಯಶಸ್ವಿಯಾಗಿ ನಡೆಸುವಲ್ಲಿ ನಮ್ಮ ವೈದ್ಯರು ಸಫಲರಾಗಿದ್ದಾರೆ. ಈವರೆಗೆ 6 ಕೊರೊನಾ ಪಾಸಿಟಿವ್ ಗರ್ಭಿಣಿಯರನ್ನು ಗುಣಪಡಿಸಲಾಗಿದೆ‌ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಈವರೆಗೆ ಜಿಲ್ಲೆಯಲ್ಲಿ 41 ಕಂಟೈನ್‍ಮೆಂಟ್ ಝೋನ್‍ಗಳಿದ್ದು ಈ ಪೈಕಿ 28 ದಿನಗಳ ಕಾಲ ಒಂದೂ ಹೊಸ ಕೋವಿಡ್ ಪ್ರಕರಣ ದಾಖಲಾಗದ 11 ಕಂಟೈನ್‍ಮೆಂಟ್ ಝೋನ್‍ಗಳನ್ನು ಡಿನೋಫೈ ಮಾಡಲಾಗಿದೆ. ಈ ಝೋನ್‍ಗಳಲ್ಲಿ ನಿರಂತರವಾಗಿ ಸಕ್ರಿಯ ಸರ್ವೆಲೆನ್ಸ್ ಕಾರ್ಯ ನಡೆಯುತ್ತಿದೆ. ಹೊಸ ಕಂಟೈನ್‍ಮೆಂಟ್ ಝೋನ್‍ಗಳಲ್ಲಿನ ಜನರ ಸ್ವಾಬ್ ಪರೀಕ್ಷೆ ನಡೆಸಲಾಗುವುದು. ಸೋಂಕಿತರ ಮೂಲ ಪತ್ತೆ ಕಾರ್ಯ ನಡೆದಿದೆ.

ಐಎಲ್‍ಐ ಮತ್ತು ಎಸ್‍ಎಆರ್‍ಐ ವ್ಯಾಪಕ ಪರೀಕ್ಷೆ ನಡೆಸಲಾಗುತ್ತಿದೆ. ಬಿಎಲ್‍ಓಗಳ ಮೂಲಕ ಸರ್ವೇ ಕಾರ್ಯ ನಡೆದಿದೆ. ತಾಲ್ಲೂಕು ಆರೋಗ್ಯಾಧಿಕಾರಿಗಳು, ಏರಿಯಾ ಮೆಡಿಕಲ್ ಆಫೀಸರ್, ಆರೋಗ್ಯ ಕಾರ್ಯಕರ್ತೆಯರ ಸರಪಳಿ ಮೂಲಕ ಸ್ವಾಬ್ ಸಂಗ್ರಹ ಆಗುತ್ತಿದ್ದು ಈ ಕಾರ್ಯಕ್ಕಾಗಿ ವಿಶೇಷ ತಂಡಗಳು ಮತ್ತು ವಾಹನಗಳನ್ನು ನೀಡಲಾಗಿದೆ.

ಜೊತೆಗೆ ದುರ್ಬಲ ವರ್ಗದ ಸರ್ವೇ ಮಾಡಲಾಗಿದ್ದು ಕೆಪಿಎಂಇ ಕಾಯ್ದೆಯಡಿ ಫಾರ್ಮಸಿಗಳಿಂದ ಕೆಮ್ಮು ಶೀತ ಜ್ವರಕ್ಕಾಗಿ ಮಾತ್ರೆ , ಔಷಧಿ ತೆಗೆದುಕೊಂಡವರ ಮಾಹಿತಿ ತೆಗೆದುಕೊಂಡು 35 ತಂಡಗಳನ್ನು ರಚಿಸಿ ಒಬ್ಬೊಬ್ಬರಿಗೆ 20 ರಿಂದ 25 ಆಸ್ಪತ್ರೆ ಮತ್ತು ಮೆಡಿಕಲ್ ಶಾಪ್ ವ್ಯಾಪ್ತಿ ನೀಡಿ ಅವರ ಸ್ವಾಬ್ ಪರೀಕ್ಷೆ ಮಾಡಿಸಲಾಗುತ್ತಿದೆ. ಕ್ಷೇತ್ರ ವಲಯದಲ್ಲಿ 10 ರಿಂದ 15 ದಿನಗಳ ಕಾಲ ಸ್ವಾಬ್ ಸಂಗ್ರಹದ ವಿಶೇಷ ಆಂದೋಲನ ಮಾಡಲಾಗುವುದು. ಈಗಾಗಲೇ ಹೊನ್ನಾಳಿ ಮತ್ತು ಚನ್ನಗಿರಿ ಕೊಳಗೇರಿಗಳಲ್ಲಿ ಸ್ವಾಬ್ ಸಂಗ್ರಹಿಸಲಾಗುತ್ತಿದೆ ಎಂದ ಅವರು ಪ್ರತಿಯೊಬ್ಬರೂ ಓಡಾಡುವಾಗ ವೈಯಕ್ತಿಕ ಎಚ್ಚರಿಕೆ ವಹಿಸಬೇಕೆಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending