Connect with us

ದಿನದ ಸುದ್ದಿ

ಕೊರೋನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನು ಕೊಪ್ಪಳಕ್ಕೆ ಕರೆತಂದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

Published

on

ಸುದ್ದಿದಿನ,ಕೊಪ್ಪಳ : ಲಾಕ್‌ಡೌನ್ ಸಂದರ್ಭದಲ್ಲಿ ಅನುಮತಿ ಪಡೆಯದೇ ಸೋಂಕಿತರ ಪ್ರಾಥಮಿಕ ಸಂಪರ್ಕವಿದ್ದ ವ್ಯಕ್ತಿಯನ್ನು ಕೊಪ್ಪಳಕ್ಕೆ ಕರೆತಂದಿರುವ ಅಪರಾಧದ ಹಿನ್ನೆಲೆಯಲ್ಲಿ ನಗರದ ಗುರುಬಸವ ಹೊಳಗುಂದಿ ಇವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿದ್ದು, ನಗರದ ತಹಶೀಲ್ದಾರರು, ವೈದ್ಯಾಧಿಕಾರಿಗಳಿಗೆ ತಿಳಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ಕೊರೋನಾ ವೈರಸ್ ಸೋಂಕು ದೃಢಪಟ್ಟಿರುವ ಕೆಎ-ಪಿ194(ಧಾರವಾಡ) ಇವರು ಮಾ.19 ರಂದು ವಿ.ಆರ್.ಎಲ್ ಟ್ರಾವೆಲ್ಸ್ ಬಸ್ ಮೂಲಕ ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿರುತ್ತಾರೆ. ಇವರ ಸೀಟ್ ಸಂಖ್ಯೆ ಯು-1 ಆಗಿದ್ದು, ಶಿಖಾ ಶೇಖ್ (29) ಎಂಬುವವರು ಕೆಎ-ಪಿ194 ಇವರ ಜೊತೆಗೆ ಒಂದೇ ಬಸ್ಸಿನಲ್ಲಿ ಪ್ರಯಾಣಿಸಿರುತ್ತಾರೆ. ಇವರ ಸೀಟ್ ಸಂಖ್ಯೆ ಎಲ್-11 ಆಗಿರುತ್ತದೆ. ಶಿಖಾ ಶೇಖ್ ಇವರು ಕೆಎ-ಪಿ194 ಇವರ ಪ್ರಾಥಮಿಕ ಸಂಪರ್ಕವನ್ನು ಹೊಂದಿರುತ್ತಾರೆ.

ಇವರು ಮಾ.20 ರಂದು ಆಟೋ ಮೂಲಕ ಹುಬ್ಬಳ್ಳಿಯಲ್ಲಿ ಪರಿಚಯಸ್ಥರ ಮನೆಗೆ ತಲುಪಿ ತಮ್ಮ ಪರಿಚಯಸ್ಥೆ ಹುಬ್ಬಳ್ಳಿಯ ಲಕ್ಷ್ಮೀಭಟ್ ಅವರ ಮನೆಯಲ್ಲಿ ತಂಗಿದ್ದರು. ಏ.13 ರಂದು ಸಾಯಂಕಾಲ 5.30 ರಿಂದ 5.45ಕ್ಕೆ ಶಿಖಾ ಶೇಖ್ ಅವರು ಸ್ಕೂಟಿ ವಾಹನದ ಜೊತೆಗೆ ಹಾಲಿನ ಡೈರಿ ವಾಹನದಲ್ಲಿ ಹುಬ್ಬಳ್ಳಿಯಿಂದ ಪ್ರಯಾಣಿಸಿ ರಾತ್ರಿ ಸುಮಾರು 8.30ಕ್ಕೆ ಕೊಪ್ಪಳಕ್ಕೆ ತಲುಪಿ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಕದಂಬ ನಗರ ನಿವಾಸಿ ಶಾಂತಾರಾಮ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಶಿಖಾ ಶೇಖ್ ಅವರನ್ನು ವಿಚಾರಿಸಲಾಗಿ ಗುರುಬಸವ ಹೊಳಗುಂದಿ ಇವರು ಮುಂಬೈಗೆ ಹೋಗಲು ಪಾಸ್ ಕೊಡಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಕೊಪ್ಪಳಕ್ಕೆ ಬರುವಂತಾಯಿತು ಎಂದು ಹೇಳಿಕೆಯನ್ನು ನೀಡಿರುತ್ತಾರೆ. ಇದೇ ಏ.14 ರಂದು ಗುರುಬಸವ ಹೊಳಗುಂದಿರವರು ಶಿಖಾ ಶೇಖ್ ಇವರನ್ನು ಸ್ಕೂಟಿ ವಾಹನದಲ್ಲಿ ಕರೆದುಕೊಂಡು ಪೊಲೀಸ್ ಕೇಂದ್ರ ಕಚೇರಿಗೆ ಬಂದಿರುತ್ತಾರೆ. ಪೊಲೀಸ್‌ರವರು ಆಸ್ಪತ್ರೆಗೆ ತೆರಳಲು ತಿಳಿಸಿರುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿಪ್ರಾಯದಂತೆ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ.

ಶಾಂತಾರಾಮ ಹಾಗೂ ಅವರ ಕುಟುಂಬದ ಸದಸ್ಯರನ್ನು ಸಹ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್‌ನ್ನು ಮಾಡಲಾಗಿದೆ. ನಂತರ ಗುರುಬಸವ ಹೊಳಗುಂದಿ ಇವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಮಾಡಲು ಹೋದಾಗ ಪ್ರತಿರೋಧಿಸಿದ್ದರಿಂದ ಇವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನವನ್ನು ನೀಡಲಾಗಿದೆ.

ಈ ಕುರಿತು ವಿವರಗಳನ್ನು ಧಾರವಾಡ ಜಿಲ್ಲಾಡಳಿತಕ್ಕೆ ತಿಳಿಸಲಾಗುವುದು ಹಾಗೂ ಅವರ ಕುಟುಂಬದ ಸದಸ್ಯರ ಜೊತೆಗೆ ಯಾವುದೇ ಸಂಕರ್ಪ ಹೊಂದಿದ್ದಲ್ಲಿ ಅಂತಹ ವ್ಯಕ್ತಿಗಳು ತಮ್ಮ ಮನೆಯಿಂದ ಹೊರಗೆ ಬಾರದೇ ಕಡ್ಡಾಯವಾಗಿ ಮನೆಯಲ್ಲಿಯೇ ಇರತಕ್ಕದ್ದು ಹಾಗೂ ಕೆಮ್ಮು, ನೆಗಡಿ, ಉಸಿರಾಟ ಸಂಬಂಧಿತ ಖಾಯಿಲೆಗಳ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆಯನ್ನು ಪಡೆಯಬೇಕು.

ಹೆಚ್ಚಿನ ವಿವರಕ್ಕೆ ಕೊರೋನಾ ಸಹಾಯವಾಣಿ: 104 ಮತ್ತು ದೂ.ಸಂ.08539-225001 ಗೆ ಕರೆ ಮಾಡಿ ಸೂಕ್ತ ಮಾರ್ಗದರ್ಶನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending