ದಿನದ ಸುದ್ದಿ

ಕೋವಿಡ್ – 19 | ರೆಡ್ ಝೋನ್ ಪಟ್ಟಿಯಲ್ಲಿ 14 ಜಿಲ್ಲೆಗಳ 29 ತಾಲೂಕುಗಳು

Published

on

ಸುದ್ದಿದಿನ,ಬೆಂಗಳೂರು: ಕೊರೊನಾ ಪೀಡಿತ ಭಾಗಗಳಿಗೆ ಹೊಸ ಮಾನದಂಡವನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಲಯಗಳ ವಿಂಗಡಣೆ ಮಾಡಲಾಗಿದೆ. ಹೊಸ ಪಟ್ಟಿಯಲ್ಲಿ ರೆಡ್ ಝೋನ್‍ಗಳ ಸಂಖ್ಯೆ 8 ರಿಂದ 14ಕ್ಕೆ ಏರಿಕೆಯಾಗಿದೆ.

ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳು ರಾಜ್ಯದ ರೆಡ್ ಝೋನ್‍ಗಳಾಗಿವೆ. ಒಟ್ಟಾರೆ ರಾಜ್ಯದ 14 ಜಿಲ್ಲೆಗಳ 29 ತಾಲೂಕುಗಳು ರೆಡ್‍ಝೋನ್‍ನಲ್ಲಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರ, ಗದಗ ತಾಲೂಕು, ಬಳ್ಳಾರಿ ಜಿಲ್ಲೆಯ ಹೊಸಪೇಟೆ, ಸಿರಗುಪ್ಪ, ಬಳ್ಳಾರಿ ತಾಲೂಕು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ ತಾಲೂಕು, ತುಮಕೂರು ತಾಲೂಕು, ಮೈಸೂರು ತಾಲೂಕು, ನಂಜನಗೂಡು, ಮಂಡ್ಯ ಜಿಲ್ಲೆಯ ಮಳವಳ್ಳಿ, ನಾಗಮಂಗಲ, ಮಂಡ್ಯ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ ತಾಲೂಕುಗಳು, ಬೀದರ್ ತಾಲೂಕು, ಕಲಬುರಗಿ ತಾಲೂಕು, ಶಹಾಬಾದ್ ತಾಲೂಕು, ವಿಜಯಪುರ ತಾಲೂಕು, ಬಾಗಲಕೋಟೆ ಜಿಲ್ಲೆಯ ಮುಧೋಳ, ಜಮಖಂಡಿ, ಬಾಗಲಕೋಟೆ ತಾಲೂಕು, ಬೆಳಗಾವಿ ಜಿಲ್ಲೆಯ ರಾಯಭಾಗ, ಹುಕ್ಕೇರಿ, ಬೆಳಗಾವಿ ತಾಲೂಕು, ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ ಪ್ರದೇಶಗಳು ಪಟ್ಟಿಯಲ್ಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version