ಕ್ರೀಡೆ
ಕೊರೋನಾ ಪಾಸಿಟಿವ್ : ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

ಸುದ್ದಿದಿನ ಡೆಸ್ಕ್ : ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು “ವೈದ್ಯಕೀಯ ಸಲಹೆಯ ಮೇರೆಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದಕ್ಕಾಗಿ ನಾನು ಆಸ್ಪತ್ರೆಗೆ ದಾಖಲಿಸಲಾಗಿದ್ದೇನೆ ಎಂದು ಶುಕ್ರವಾರ ಹೇಳಿದ್ದಾರೆ. ಅವರಿಗೆ ಕಳೆದ ವಾರ ಕೊರೋನಾ ಪಾಸಿಟಿವ್ ಬಂದಿತ್ತು.
ನಿಮ್ಮ ಶುಭಾಶಯಗಳು ಮತ್ತು ಪ್ರಾರ್ಥನೆಗಳಿಗೆ ನನ್ನ ಧನ್ಯವಾದಗಳು. ವೈದ್ಯಕೀಯ ಸಲಹೆಯಡಿಯಲ್ಲಿ ಮುನ್ನೆಚ್ಚರಿಕೆಯಾಗಿ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವೇ ದಿನಗಳಲ್ಲಿ ಗುಣಮುಖನಾಗಿ ಮನೆಗೆ ಮರಳುವ ಭರವಸೆ ಇದೆ. ಎಲ್ಲರೂ ಕಾಳಜಿ ವಹಿಸಿ ಮತ್ತು ಸುರಕ್ಷಿತವಾಗಿರಿ. ವಿಶ್ವಕಪ್ ಗೆದ್ದ 10 ನೇ ವಾರ್ಷಿಕೋತ್ಸವದಲ್ಲಿರುವ ಎಲ್ಲಾ ಭಾರತೀಯರಿಗೆ ಮತ್ತು ನನ್ನ ತಂಡದ ಆಟಗಾರರಿಗೆ ಶುಭಾಶಯಗಳು ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ.
Thank you for your wishes and prayers. As a matter of abundant precaution under medical advice, I have been hospitalised. I hope to be back home in a few days. Take care and stay safe everyone.
Wishing all Indians & my teammates on the 10th anniversary of our World Cup 🇮🇳 win.
— Sachin Tendulkar (@sachin_rt) April 2, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ

ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್‌ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್‌ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್‌ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್‌ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್‌ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್‌ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್‌ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್‌ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೇಸಿಗೆ ವಾಲಿಬಾಲ್ ತರಬೇತಿ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.
ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ17 hours ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ17 hours ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ17 hours ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ17 hours ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ17 hours ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ