Connect with us

ದಿನದ ಸುದ್ದಿ

ಕೋವಿಡ್ 2ನೇ ಅಲೆ ಹೆಚ್ಚು ಅಪಾಯಕಾರಿ : ಶ್ರಮ ವಹಿಸಿ ಕರ್ತವ್ಯ ನಿರ್ವಹಿಸುವಂತೆ ವೈದ್ಯರಲ್ಲಿ ಸಂಸದ ಜಿ.ಎಂ.ಸಿದ್ದೇಶ್ ಮನವಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಸುಗಮ ಆಕ್ಸಿಜನ್ ಪೂರೈಕೆ, ಬೆಡ್ ವ್ಯವಸ್ಥೆ ಮತ್ತು ಔಷಧೋಪಚಾರದ ಕುರಿತು ಚರ್ಚಿಸಲು ಸೋಮವಾರ ಜಿಲ್ಲಾಧಿಕಾರಿಗಳು, ಎಸ್‍ಪಿ ಹಾಗೂ ವೈದ್ಯರೊಂದಿಗೆ ಸಿ.ಜಿ ಆಸ್ಪತ್ರೆಯಲ್ಲಿ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ಸಭೆ ನಡೆಸಿದರು.

ಸಭೆಯಲ್ಲಿ ಅವರು ಮಾತನಾಡಿ, ಕಳೆದ ಬಾರಿಗಿಂತ ಕೋವಿಡ್ 2ನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಎದುರಿಸಲು ಎಲ್ಲ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳು ಮತ್ತು ವೈದ್ಯರಿಗೆ ಸೂಚನೆ ನೀಡಿದ ಅವರು ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ವೈದ್ಯರು ಶ್ರಮ ವಹಿಸಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.

ಭಾನುವಾರ 317 ಪಾಸಿಟಿವ್ ಕೇಸ್ ಬಂದಿದ್ದು, 02 ಮರಣ ಸಂಭವಿಸಿದೆ. 2148 ಸಕ್ರಿಯ ಪ್ರಕರಣಗಳಿವೆ. ಇಂದು 8 ರಿಂದ 10 ಸಾವಿರ ವಯಲ್ಸ್ ಕೋವಿಡ್ ಲಸಿಕೆ ಜಿಲ್ಲೆಗೆ ಸರಬರಾಜಾಗುತ್ತಿದ್ದು ನಾಳೆಯಿಂದ ಲಸಿಕೆ ಆರಂಭಿಸಬಹುದು ಎಂದರು.

ಇದನ್ನೂ ಓದಿ | ಸಾಹುಕಾರಿಕೆ ಎಂದರೆ..!

ಕೋವಿಡ್ ಪತ್ತೆ ಹಚ್ಚಲು ಸಿಟಿ ಸ್ಕ್ಯಾನ್ ಮಾಡಿಸುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಟಿ ಸ್ಕ್ಯಾನ್ ಕೇಂದ್ರದವರು ಸರ್ಕಾರ ನಿಗದಿಪಡಿಸಿಕ್ಕಿಂತ ಹೆಚ್ಚಿನ ದರ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ. ಇಂತಹ ತುರ್ತು ಪರಿಸ್ಥತಿಯಲ್ಲಿ ವೈದ್ಯರು ಹೀಗೆ ಜನರಿಂದ ಹೆಚ್ಚು ದರ ಪಡೆಯಬಾರದು. ನಿಗದಿತ ದರವನ್ನು ಬೋರ್ಡಿನಲ್ಲಿ ಹಾಕಬೇಕು. ಒಂದು ಪಕ್ಷ ಆ ದರಕ್ಕಿಂತ ಹೆಚ್ಚಿಗೆ ಪಡೆದರೆ ರೋಗಿಗಳಯ ಹೆಲ್ಪ್‍ಲೈನ್‍ಗೆ ಕರೆ ಮಾಡಿ ತಿಳಿಸಬೇಕೆಂದರು.

ಹಾಗೂ ಸ್ಕ್ಯಾನರ್ ಬಳಕೆ ಆದ ನಂತರ ಸ್ಯಾನಿಟೈಸ್ ಮಾಡಿ ಮತ್ತೆ ಬಳಸಬೇಕು ಎಂದ ಅವರು ಜಿಲ್ಲಾಧಿಕಾರಿಗಳಿಗೆ ಸಿಟಿ ಸ್ಕ್ಯಾನ್‍ಗೆ ಹೆಚ್ಚು ಹಣ ಪಡೆಯುವವರು ಹಾಗೂ ರೆಮಿಡಿಸಿವರ್ ಅಗತ್ಯವಿಲ್ಲದಿದ್ದರೂ ಈ ಲಸಿಕೆ ನೀಡುವುದನ್ನು ಪರಿಶೀಲಿಸಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ ಪ್ರಸ್ತುತ ಸದರನ್ ಗ್ಯಾಸ್ ಏಜೆನ್ಸಿಯವರು ಜಿಲ್ಲಾಸ್ಪತ್ರೆಗೆ 18.5 ಕೆ.ಎಲ್ ಆಕ್ಸಿಜನ್ ಪೂರೈಕೆ ಮಾಡುತ್ತಿದ್ದಾರೆ. ಪ್ರಸ್ತುತ ಆಕ್ಸಿಜನ್ ಕೊರತೆ ಇಲ್ಲ. ಆಕ್ಸಿಜನ್ ಬೆಡ್‍ಗಳ ಸಂಖ್ಯೆ ಹೆಚ್ಚಿಸುತ್ತಾ ಹೋದರೆ ಆಕ್ಸಿಜನ್ ಪ್ರೆಷರ್ ಕಡಿಮೆ ಆಗಲಿದ್ದು, ಘಟಕದ ಸಾಮಥ್ರ್ಯಕ್ಕನುಗುಣವಾಗಿ ಬೆಡ್ ವ್ಯವಸ್ಥೆ ಮಾಡಲಾಗಿದೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ರೆಮಿಡಿಸಿವರ್ ದಾಸ್ತಾನು ಇದೆ ಎಂದರು.

ಸಂಸದರು, ಮೆಡಿಕಲ್ ಆಕ್ಸಿಜನ್ ಪ್ಲಾಂಟ್‍ಗೆ ಹೆಚ್ಚುವರಿ ಆಕ್ಸಿಜನ್ ಪಡೆಯಲು ಹೆಚ್ಚುವರಿ ವಾಹನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಅವರು 15 ಹೆಚ್ಚುವರಿ ವೆಂಟಿಲೇಟರ್‍ಗಳ ನಿರ್ವಹಣೆಗೆ ನುರಿತ ಸಿಬ್ಬಂದಿ ನಿಯೋಜಿಸುವಂತೆ ತಿಳಿಸಿದರು.

ಇದೇ ವೇಳೆ ಜಿಲ್ಲಾಸ್ಪತ್ರೆಯ ಡಾ.ಗಿರೀಶ್ ಕೋವಿಡ್ ವಾರ್ಡ್ ನಿರ್ವಹಿಸುವ ವೈದ್ಯರ ತಂಡಗಳ ಸಂಖ್ಯೆಯನ್ನು 5 ರಿಂದ 6 ಕ್ಕೆ ಹೆಚ್ಚಿಸಬೇಕಿದ್ದು, ಇದಕ್ಕೆ ಅವಶ್ಯಕ ವೈದ್ಯರನ್ನು ಮೆಡಿಕಲ್ ಕಾಲೇಜು ಮತ್ತು ಇನ್‍ಟನ್ರ್ಸ್‍ಗಳನ್ನು ಪಡೆಯಬಹುದೆಂದರು.

ಶುಶ್ರೂಷಕರು ಮತ್ತು ಡಿ ಗ್ರೂಪ್‍ಗಳ ಅಗತ್ಯ ಸಹ ಇದ್ದು ಇವರನ್ನು ನೇಮಿಸುವಂತೆ ಶುಶ್ರೂಷಾಧಿಕಾರಿ ಮನವಿ ಮಾಡಿದರು.

ಪ್ರೋತ್ಸಾಹ ಧನ

ಬಾಪೂಜಿ ಆಸ್ಪತ್ರೆಯ ಡಾ.ರವಿಯವರು ವೈದ್ಯರು, ಇನ್‍ಟನ್ರ್ಸ್ ತಮ್ಮ ಜೀವದ ಭಯ ತೊರೆದು ಹಗಲು ರಾತ್ರಿ ಕೋವಿಡ್ ರೋಗಿಗಳನ್ನು ನೋಡಿಕೊಳ್ಳುತ್ತಿದ್ದು, ಇವರಿಗೆ ಪ್ರತಿದಿನ ರೂ.1 ಸಾವಿರದಂತೆ ಪ್ರೋತ್ಸಾಹಧನ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ತಮ್ಮ ಟ್ರಸ್ಟ್ ವತಿಯಿಂದ ರೂ.5 ಲಕ್ಷ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಮಹಾಪೌರ ವೀರೇಶ್ ಎಸ್.ಟಿ., ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್‍ನಾಯಕ್, ಡಿಹೆಚ್‍ಓ ಡಾ.ನಾಗರಾಜ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಜಯಪ್ರಕಾಶ್, ಡಿಎಸ್‍ಓ ಡಾ.ರಾಘವನ್, ಡಾ.ಶಶಿಧರ್, ಡಾ.ಗಿರೀಶ್, ಡಾ.ರವಿ ಮತ್ತಿತರೆ ತಜ್ಞ ವೈದ್ಯರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 197 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಎಷ್ಟಿವೆ ಗೊತ್ತಾ..?

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20, ಜಗಳೂರು 2, ಚನ್ನಗಿರಿ 13, ಹೊನ್ನಾಳಿ 11, ಹೊರ ಜಿಲ್ಲೆಯಿಂದ 09 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,905ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

ಸೋಮವಾರ 301 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವೆಗೆ ಒಟ್ಟು 26,495 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 304 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 3,106 ಸಕ್ರಿಯ ಕೇಸ್ ಗಳಿವೆ. 68 ವರ್ಷದ ಗೋಪನಾಳ ವೃದ್ಧ, ಹರಿಹರದ 25 ವರ್ಷದ ಯುವಕ, ದಾವಣಗೆರೆಯ 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು 2021 ರ ಏ.30 ರವರೆಗೆ ನೀಡಲಾಗಿತ್ತು. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇರುವ ಪ್ರಯುಕ್ತ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಸರ್ಕಾರದ ಸುತ್ತೋಲೆಯನ್ವಯ ಪ್ರಸಕ್ತ ಸಾಲಿನ ಜೂನ್ 30 ರವರೆಗೆ ವಿಸ್ತರಿಸಲಾಗಿದ್ದು ನಿಗದಿತ ದಿನಾಂಕದೊಳಗಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ ಈ ಸೌಲಭ್ಯವನ್ನು ಆಸ್ತಿ ಮಾಲೀಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಹರಿಹರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಲಸಿಕೆ ಹಾಕಿಸಿಕೊಂಡು ಎಲ್ಲರೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending