ದಿನದ ಸುದ್ದಿ
ಕೋವಿಡ್ ಸೋಂಕು ; ಆತಂಕ ಬೇಡ : ಸಿಎಂ ಬೊಮ್ಮಾಯಿ
ಸುದ್ದಿದಿನ, ವಿಜಯಪುರ : ರಾಜ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ವರದಿಯಾದರೂ ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆ ಕೊಡಗನೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಕೋವಿಡ್ ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಯಲಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಯಿಂದ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243