ದಿನದ ಸುದ್ದಿ
ಕೋವಿಡ್-19 ಹಿನ್ನೆಲೆ ಸರಳ ಮತ್ತು ಮಾಲಿನ್ಯರಹಿತ ದೀಪಾವಳಿ ಆಚರಣೆಗೆ ಮಾರ್ಗಸೂಚಿಗಳು
ಸುದ್ದಿದಿನ,ದಾವಣಗೆರೆ : ನ.14 ರಿಂದ 17 ರವರೆಗೆ ದೀಪಾವಳಿ ಹಬ್ಬ ಆಚರಣೆ ಇದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಮತ್ತು ಮಾಲಿನ್ಯ ರಹಿತವಾಗಿ ಆಚರಿಸುವ ಸಂಬಂಧ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿ ಎಲ್ಲಾ ಇಲಾಖಾ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕೆಂದು ಆದೇಶಿಸಿದೆ.
ದಿ ಎಕ್ಸ್‍ಪ್ಲೊಸಿವ್ ರೂಲ್ಸ್ 2008 ನಿಯಮ 84 ರ ಪ್ರಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಮಾತ್ರ ಜಿಲ್ಲಾಡಳಿತವು ನಿಗದಿಪಡಿಸುವ ಸ್ಥಳದಲ್ಲಿ ಅಲ್ಪ ಪ್ರಮಾಣದಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿತ ಅವಧಿಗೆ ಮಾತ್ರ ತಾತ್ಕಾಲಿಕ ಪರವಾನಿಗೆಯನ್ನು ನೀಡಲಾಗುತ್ತಿರುತ್ತದೆ ಮತ್ತು ಸ್ಪೋಟಕ ಇಲಾಖೆ, ಮಂಗಳೂರು ಅವರಿಂದ ಪಡೆದ ಪರವಾನಿಗೆದಾರರು ಸಹ ಹಬ್ಬದ ಸಮಯದಲ್ಲಿ ಜಿಲ್ಲಾಡಳಿತವು ಸೂಚಿಸುವ ಸ್ಥಳದಲ್ಲಿ ಪಟಾಕಿ ಮಾರಾಟವನ್ನು ಮಾಡುತ್ತಿರುತ್ತಾರೆ.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೋಂಕಿನ ಸರಪಳಿಯನ್ನು ಕತ್ತರಿಸಲು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುತ್ತದೆ.
ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರನ್ವಯ ದೀಪಾವಳಿ ಹಬ್ಬ ಆಚರಣೆ ಹಾಗೂ ಹಬ್ಬದಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಮಾರಾಟ ಮಾಡುವುದು ಮತ್ತು ಸಿಡಿಸುವ ಕುರಿತು ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಈ ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಿದ್ದು ಈ ಮಾರ್ಗಸೂಚಿಗಳು ಹಬ್ಬದ ಆಚರಣೆ ಮುಗಿಯುವವರೆಗೆ ಮಾತ್ರ ಜಾರಿಯಲ್ಲಿರುತ್ತದೆ.
ಈ ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ತಾಲ್ಲೂಕು ಆಡಳಿತ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾ.ಪಂ ಮತ್ತು ಸಂಬಂಧಿಸಿದ ಇಲಾಖೆ/ಪ್ರಾಧಿಕಾರಗಳು ಅನುಷ್ಟಾನಗೊಳಿಸಬೇಕೆಂದು ಆದೇಶಿಸಿರುತ್ತಾರೆ.
ಮಾರ್ಗಸೂಚಿಗಳು
- ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು.
- ಪಟಾಕಿ ಮಾರಾಟದ ಮಳಿಗೆಗಳನ್ನು ನ.1 ರಿಂದ 17 ರವರೆಗೆ ಮಾತ್ರ ತೆರೆದಿರತಕ್ಕದ್ದು.
- ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಗಳನ್ನು ತೆರೆಯಬಾರದು.
- ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ/ಪ್ರಾಧಿಕಾರಗಳು ಅನುಮತಿಸತಕ್ಕದ್ದು.
- ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು.
- ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.
- ಪಟಾಕಿ/ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸತಕ್ಕದ್ದು.
- ಪಟಾಕಿ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು.
- ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಸಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ/ಕಾರ್ಪೊರೇಷನ್/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
- ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

-
ದಿನದ ಸುದ್ದಿ7 days agoದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days agoಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
-
ದಿನದ ಸುದ್ದಿ7 days agoಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
-
ದಿನದ ಸುದ್ದಿ7 days agoಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ22 minutes agoಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

