Connect with us

ದಿನದ ಸುದ್ದಿ

ಕೋವಿಡ್ ಮೊದಲ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲಾಡಿತದ ಸಿದ್ದತೆ ಪೂರ್ಣ; ಜಿಲ್ಲೆಗೆ ಸುಮಾರು 25 ಸಾವಿರ ಕೋವಿಸೀಲ್ಡ್ ಲಸಿಕೆ ಬರುವ ನಿರೀಕ್ಷೆ : ಜಿಲ್ಲಾಧಿಕಾರಿ ನಿತೇಶ ಪಾಟೀಲ

Published

on

ಸುದ್ದಿದಿನ,ಧಾರವಾಡ: ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕೈಗೊಳ್ಳಲಿರುವ ಮೊದಲ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲಾಡಿತವು ಆರೋಗ್ಯ ಇಲಾಖೆಯಿಂದ ಪೂರ್ಣಸಿದ್ಧತೆ ಮಾಡಿಕೊಂಡಿದ್ದು, ನೋಂದಾಯಿತ ಕೋವಿಡ್ ವಾರಿಯರ್ಸ್‍ಗಾಗಿ ಸುಮಾರು 25 ಸಾವಿರ ಕೋವಿಸೀಲ್ಡ್ ಲಸಿಕೆ ಜಿಲ್ಲೆಗೆ ಬರುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಅವರು ನಿನ್ನೆ (ಜ.12) ಸಂಜೆ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಜರುಗಿದ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮ ಕುರಿತು ಜಿಲ್ಲಾಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನೆವರಿ 13 ರಂದು ಬೆಳಗಾವಿಯ ಪ್ರಾದೇಶಿಕ ಲಸಿಕಾ ಕೇಂದ್ರದಿಂದ ರಸ್ತೆ ಮೂಲಕ ವಿಶೇಷ ಸುರಕ್ಷಿತ ವಾಹನದಲ್ಲಿ ಧಾರವಾಡಕ್ಕೆ ಆಗವಿಸುವ ಕೋವಿಸೀಲ್ಡ್ ಲಸಿಕಾ ಪೆಟ್ಟಿಗೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿರುವ ಜಿಲ್ಲಾ ಲಸಿಕಾ ಉಗ್ರಾಣದಲ್ಲಿ ಸಂಗ್ರಹಿಸಿ ಇಡಲಾಗುತ್ತದೆ ಎಂದು ಅವರು ತಿಳಿಸಿದರು.

ಜನೆವರಿ 16 ರ ಬೆಳಿಗ್ಗೆ ಪ್ರಧಾನ ಮಂತ್ರಿಗಳು ಆನ್‍ಲೈನ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು. ಅದರಲ್ಲಿ ನಮ್ಮ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯು ಸೇರಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಗಣ್ಯರು ಭಾಗವಹಿಸಲಿದ್ದಾರೆ.

ಜಿಲ್ಲೆಯಲ್ಲಿ ಅಂದು (ಜ.16) ಕಿಮ್ಸ್ ಸೇರಿದಂತೆ, ಕುಂದಗೋಳ, ಕಲಘಟಗಿ, ನವಲಗುಂದ ತಾಲೂಕಾ ಆಸ್ಪತ್ರೆ ಮತ್ತು ಧಾರವಾಡ ತಾಲೂಕಿನ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರ, ಧಾರವಾಡ ಪುರೋಹಿತನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮೊದಲ ಸುತ್ತಿನ ಲಸಿಕಾಕರಣದಲ್ಲಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಂದ ಈಗಾಗಲೇ ನೋಂದಾಯಿತರಾಗಿರುವ ಸುಮಾರು 25 ಸಾವಿರಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ನೀಡಲಾಗುತ್ತದೆ. ಲಸಿಕೆ ನೀಡಲು 33 ಖಾಸಗಿ ಆಸ್ಪತ್ರೆಗಳ 66 ಕೇಂದ್ರಗಳು ಮತ್ತು ಜಿಲ್ಲೆಯ ಎಲ್ಲ ಸರಕಾರಿ ಆಸ್ಪತ್ರೆಗಳು ಸೇರಿ 136 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ.

ವೈದ್ಯರು, ಆರೋಗ್ಯ ಕಾರ್ಯಕರ್ತರು, ಸಹಾಯಕರು ಸೇರಿ 5 ಜನರಿರುವ ಲಸಿಕಾ ತಂಡಗಳನ್ನು ರಚಿಸಲಾಗಿದ್ದು 136 ತಂಡಗಳ 680 ಜನ ಆರೋಗ್ಯ ಸಿಬ್ಬಂದಿ ಲಸಿಕಾ ಕಾರ್ಯವನ್ನು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರತಿ ತಂಡ ಹಾಗೂ ತಾಲೂಕಾ ಮಟ್ಟದಲ್ಲಿ ಮೇಲುಸ್ತುವಾರಿ ಹಾಗೂ ಮೇಲ್ವಿಚಾರಣೆಗಾಗಿ ತಹಸಿಲ್ದಾರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕಾಮಟ್ಟದ ಅಧಿಕಾರಿಗಳನ್ನು ಸುಪರವೈಜರಗಳನ್ನಾಗಿ ನೇಮಿಸಲಾಗಿದೆ. ಪ್ರತಿ ಲಸಿಕಾ ಕೇಂದ್ರದಲ್ಲಿ ಪ್ರತ್ಯೇಕವಾಗಿ ಮೂರು ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ.

ನೊಂದಾಯಿತರು ಆಗಮಿಸಿದಾಗ ನಿರೀಕ್ಷಣಾ ಕೊಠಡಿಯಲ್ಲಿ ನೋಂದಣಿ ಹಾಗೂ ದಾಖಲೆಗಳ ಪರಿಶೀಲನೆ, ಲಸಿಕಾ ಕೊಠಡಿಯಲ್ಲಿ ಲಸಿಕೆ ಹಾಕುವುದು ಮತ್ತು ಲಸಿಕೆ ಪಡೆದ ನಂತರ ಅವರ ಆರೋಗ್ಯ ಗಮನಿಸಲು ಸುಮಾರು 30 ನಿಮಿಷ ನಿಗಾ ಕೊಠಡಿಯಲ್ಲಿ ವಿಶ್ರಾಂತಿ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಒಂದು ವೇಳೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ತಕ್ಷಣ ತುರ್ತು ಚಿಕಿತ್ಸೆ ನೀಡಲು ವಿಶೇಷ ಆರೋಗ್ಯ ಸಲಕರಣೆ, ಔಷಧಿಗಳಿರುವ ಪೆಟ್ಟಿಗೆಗಳನ್ನು ಪ್ರತಿ ಕೇಂದ್ರಗಳಿಗೆ ನೀಡಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಅಂತವರನ್ನು ಗುರುತಿಸಲಾಗಿರುವ ಮುಖ್ಯ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ. ಎಸ್.ಎಂ. ಹೊನಕೇರಿ ಅವರು ಕೋವಿಡ್-19ರ ಲಸಿಕಾಕರಣ ಕಾರ್ಯಕ್ರಮವನ್ನು ಪ್ರಾತ್ಯಕ್ಷಿಕೆ ಮೂಲಕ ಸಭೆಗೆ ವಿವರಿಸಿ, ತಂಡ ಹಾಗೂ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ. ಸುಶೀಲಾ, ನಗರ ಉಪಪೊಲೀಸ ಆಯುಕ್ತ ರಾಮರಾಜನ್, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಡಬ್ಲು.ಎಚ್.ಓ. ಲಸಿಕಾ ವಿಭಾಗದ ಬೆಳಗಾವಿಯ ಅಧಿಕಾರಿ ಡಾ.ಸಿದ್ದಲಿಂಗಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಜಿಲ್ಲೆ ಸರ್ವೆಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಡಾ.ಶಶಿ ಪಾಟೀಲ, ಡಾ.ಕೆ.ಎನ್.ತನುಜಾ, ತಾಲುಕಾ ವೈಧ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಗಳ ವೈಧ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending