ದಿನದ ಸುದ್ದಿ
ಕೋವಿಡ್ ಸ್ಥಿತಿ-ಗತಿ; ಬುಧವಾರ, ಪ್ರಧಾನಮಂತ್ರಿ ಜೊತೆ ಸಮಾಲೋಚನೆ; ನೂತನ ಮಾರ್ಗಸೂಚಿ ಬಗ್ಗೆ ನಿರ್ಧಾರ : ಸಿಎಂ ಬೊಮ್ಮಾಯಿ
ಸುದ್ದಿದಿನ, ಬೆಂಗಳೂರು: ರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಡಿದ್ದು, ಬುಧವಾರ, ಪ್ರಧಾನಮಂತ್ರಿ ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 8-10 ದಿನಗಳಿಂದ ನೆರೆಯ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವುದು ಕಂಡುಬಂದಿದೆ. ಮುಂಜಾಗ್ರತೆ ವಹಿಸುವಂತೆ ಈಗಾಗಲೇ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದರು.
ಸಭೆಯ ಬಳಿಕ ರಾಜ್ಯದಲ್ಲಿನ ಕೋವಿಡ್ ನಿರ್ವಹಣೆಯ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಈ ಮಧ್ಯೆ ಹುಬ್ಬಳ್ಳಿ ಗಲಭೆ ಪ್ರಕರಣ, ಶಾಲೆಗಳಿಗೆ ಬೆದರಿಕೆ ಕರೆ, ಪಿಎಸ್‌ಐ ನೇಮಕಾತಿ ಅಕ್ರಮ ಮೊದಲಾದ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಎಲ್ಲ ವಿಚಾರಗಳಲ್ಲಿಯೂ ಪೊಲೀಸರು ಕಾನೂನಿನಡಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243