Connect with us

ದಿನದ ಸುದ್ದಿ

ರಾಜ್ಯದಲ್ಲಿ ಮೇ ಅಂತ್ಯದೊಳಗೆ 60 ಲ್ಯಾಬ್‍

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ನಿಗ್ರಹ ಹಿನ್ನೆಲೆ ರಾಜ್ಯದಲ್ಲಿರುವ 60 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಪರೀಕ್ಷೆ ಲ್ಯಾಬ್ ಸ್ಥಾಪಿಸಲು ಸರ್ಕಾರ ಈಗಾಗಲೇ ಆದೇಶಿಸಿದ್ದು, ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಯಲ್ಲಿ 2 ಪರೀಕ್ಷಾ ಲ್ಯಾಬ್ ಸಿದ್ದಗೊಳ್ಳುವ ವಿಶ್ವಾಸವಿದೆ. ದಾವಣಗೆರೆಯ ಎಸ್‍ಎಸ್ ಹೈಟೆಕ್ ಆಸ್ಪತ್ರೆಯ ಪಿಸಿಆರ್ ಲ್ಯಾಬ್‍ನಲ್ಲಿ ಇಂದಿನಿಂದ ಕೋವಿಡ್ ಪರೀಕ್ಷೆ ಆರಂಭಗೊಳ್ಳಲಿದ್ದು, ಇಂದು ಅದಕ್ಕೆ ಚಾಲನೆ ನೀಡುತ್ತಿರುವುದು ಸಂತಸದ ವಿಷಯ‌ ಎಂದು‌ ‌ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಹೇಳಿದರು.

ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಡೀ ಜಗತ್ತನ್ನು ಕಣ್ಣಿಗೆ ಕಾಣದೊಂದು ವೈರಾಣು ನಡುಗಿಸುತ್ತಿದೆ. ವಿಶ್ವದಲ್ಲಿ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಕೊರೊನಾ ನಿಯಂತ್ರಣ ಮಾಡುತ್ತಾ ಇದೆ. ದೇಶದಲ್ಲಿ ಸುಮಾರು 60 ಸಾವಿರ ಪಾಸಿಟಿವ್ ಪ್ರಕರಣಗಳಿದ್ದು, ನಮ್ಮ ರಾಜ್ಯ 13 ನೇ ಸ್ಥಾನದಲ್ಲಿ ಇದೆ ಎಂದರು.

ಸಿ ಜಿ ಆಸ್ಪತ್ರೆಯಲ್ಲಿಯೂ ಕೋವಿಡ್ ಪರೀಕ್ಷೆ ಲ್ಯಾಬ್ ಕಾರ್ಯಾರಂಭಗೊಂಡಿದ್ದು ಭಾನುವಾರ ಆರ್‍ಟಿಪಿಸಿಆರ್ ಮಷೀನ್‍ಗಳನ್ನು ಅಳವಡಿಸಲು ತಿಳಿಸಿದ್ದೇನೆ. ಇನ್ನೊಂದು ಎರಡು ದಿನಗಳಲ್ಲಿ ಸಿಜಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟಿಂಗ್ ಲ್ಯಾಬ್ ಸಿದ್ದಗೊಳ್ಳಲಿದ್ದು ಇದರಿಂದ ಜಿಲ್ಲೆಗೆ ಅನುಕೂಲವಾಗಲಿದೆ. ಪರೀಕ್ಷೆಗಾಗಿ ಜನರು ದಿನಗಳಟ್ಟಲೆ ಕಾಯುವುದು ತಪ್ಪುತ್ತದೆ. ಖಾಸಗಿ ಲ್ಯಾಬ್‍ಗಳಿಗೆ ದರ ನಿಗದಿಗೊಳಿಸಿದ್ದು, ಸರ್ಕಾರದ ವತಿಯಿಂದಲೇ ಕಿಟ್‍ಗಳನ್ನು ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಪ್ರಾರಂಭದಲ್ಲಿ ರಾಜ್ಯದ ಕೇವಲ ಎರಡು ಲ್ಯಾಬ್‍ಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ದಿನಕ್ಕೆ 250 ರಿಂದ 300 ಟೆಸ್ಟ್ ಮಾತ್ರ ಮಾಡಲಿಕ್ಕೆ ಸಾಧ್ಯವಾಗುತ್ತಿತ್ತು. ಇದೀಗ ಸುಮಾರು 30 ಲ್ಯಾಬ್‍ಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಮೇ ಅಂತ್ಯದೊಳಗೆ 60 ಲ್ಯಾಬ್‍ಗಳು ಕಾರ್ಯ ನಿರ್ವಹಿಸಲಿದ್ದು ದಿನವೊಂದಕ್ಕೆ ಸುಮಾರು 5 ರಿಂದ 5,500 ಟೆಸ್ಟ್‍ಗಳು ಮಾಡಲು ಸಾಧ್ಯವಾಗಲಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending