ದಿನದ ಸುದ್ದಿ

ಕಲಬುರಗಿಯಲ್ಲಿ ಮತ್ತೆ ಒಂದು ವಾರಗಳ‌ ಕಾಲ‌ ಲಾಕ್ ಡೌನ್ ವಿಸ್ತರಿಸಿ ಡಿ.ಸಿ.ಆದೇಶ

Published

on

ಸುದ್ದಿದಿನ,ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ರವಿವಾರ ಆದೇಶ ಹೊರಡಿಸಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ ಅನ್ವಯವಾಗುವುದಿಲ್ಲ.

ಅಲ್ಲದೆ ಭಾನುವಾರದ ಲಾಕ್ ಡೌನ್ ಗೂ ಈ ಆದೇಶ ಅನ್ವಯಿಸುವುದಿಲ್ಲ ಎಂದು ಡಿ.ಸಿ.ಶರತ್ ಬಿ. ಅವರು ಆದೇಶದಲ್ಲಿ‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version