ಕ್ರೀಡೆ
ಕ್ರೀಡಾಪಟುಗಳಿಗೆ ಕೋವಿಡ್ ನಿರೋಧಕ ಲಸಿಕೆ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿರುವ 18 ರಿಂದ 44 ವರ್ಷದೊಳಗಿನ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಕೋವಿಡ್-19 ನಿರೋಧಕ ಲಸಿಕೆಯನ್ನು ಆದ್ಯತೆಯ ಮೇರೆಗೆ ಒದಗಿಸಲು ಆದೇಶಿಸಲಾಗಿದ್ದು, ಕ್ರೀಡಾಪಟುಗಳು ಅಗತ್ಯ ದಾಖಲಾತಿಗಳೊಂದಿಗೆ ಜೂ.18 ರೊಳಗಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಕೋವಿಡ್-19 ನಿರೋಧಕ ಲಸಿಕೆ ಹಾಕಿಸಿಕೊಳ್ಳಬಯಸುವ ಕ್ರೀಡಾಪಟುಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಕ್ರೀಡಾ ಸಾಧನೆಯ ಪ್ರಮಾಣ ಪತ್ರಗಳೊಂದಿಗೆ ಜೂ.18 ರೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿಗೆ ಹಾಜರಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ಲಸಿಕೆ ನೀಡುವ ದಿನಾಂಕ ಮತ್ತು ಸ್ಥಳವನ್ನು ನಂತರ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243