ದಿನದ ಸುದ್ದಿ
ದಾವಣಗೆರೆ | ಈವರೆಗೆ ಕೋವಿಡ್ ಟೆಸ್ಟ್ ಗೆ ಒಳಪಟ್ಟವರು ಎಷ್ಟು ಜನ ಗೊತ್ತಾ..? ಓದಿ ಈ ಸುದ್ದಿ
ಸುದ್ದಿದಿನ, ದಾವಣಗೆರೆ : ಜಾಲಿನಗರ ಒಟ್ಟು 127 ರಲ್ಲಿ 97 ರೋಗಿಗಳು ಗುಣಮುಖರಾಗಿದ್ದು, ಇನ್ನು 9 ಕೆಸ್‍ಗಳು ಮಾತ್ರ ಬಾಕಿ ಉಳಿದಿವೆ. ಜಿಲ್ಲೆಯಲ್ಲಿ ಕೋವಿಡ್ 19 ಲ್ಯಾಬ್ ಉದ್ಘಾಟನೆಯಾಗಿದೆ. ಒಟ್ಟು ನಾವು ಈವರೆಗೆ 12.116 ಮಂದಿಯನ್ನು ಟೆಸ್ಟ್ಗೆ ಒಳಪಡಿಸಿದ್ದೇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ರಾಘವನ್ ತಿಳಿಸಿದರು.
ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಯೋಜಿಸಲಾಗಿದ್ದ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಲೆ ನೋವು, ಜ್ವರ ಮತ್ತು ಕೆಮ್ಮಿನ ಲಕ್ಷಣಗಳಿರುವವರು ಒಟ್ಟು 6.000 ಮಂದಿ ಟೆಸ್ಟಗೆ ಒಳಪಡಿಸಿದ್ದೇವೆ. ಒಟ್ಟು ಈಗ 36 ಸಕ್ರಿಯ ಕೇಸ್‍ಗಳು ಇವೆ. ಅದರಲ್ಲಿ 90 ವರ್ಷದ ವೃದ್ದರೊಬ್ಬರಿಗೆ ಸೋಂಕು ತಗುಲಿದ್ದು, ಅವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳಲಾಗುತ್ತದೆ ಎಂದರು.
ಭಾನುವಾರ ಬಸವರಾಜ ಪೇಟೆ ಒರ್ವ ವ್ಯಕ್ತಿಗೆ ಕೊರೊನಾ ಸೋಂಕು ಕಂಡು ಬಂದಿದ್ದು,ಅವರ ಕುಂಟುಬದ 16 ಮಂದಿ ಕ್ವಾರಂಟೈನ್‍ಗೆ ಒಳಪಡಿಸಿದ್ದು, ಯಾರಿಗೂ ಸಹ ಸೋಂಕು ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಗಳೂರಿನ ಟ್ರಾಫಿಕ್‌ಗೆ ಬಿಗ್ ರಿಲೀಫ್! ವರ್ಷಾಂತ್ಯಕ್ಕೆ STRR ಸಂಚಾರ ಮುಕ್ತ: ನಗರ ದಟ್ಟಣೆ ಶೇ.40ರಷ್ಟು ಇಳಿಕೆ ನಿರೀಕ್ಷೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ನಗರ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವಂತೆ ವಾಹನ ದಟ್ಟಣೆಯ ಸಮಸ್ಯೆಯೂ ಹೆಚ್ಚುತ್ತಿದೆ. ಅದರಲ್ಲೂ ಹೊರರಾಜ್ಯಗಳಿಂದ ನಗರವನ್ನು ದಾಟಿ ಸಾಗುವ ಭಾರಿ ವಾಹನಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದ ಒತ್ತಡವನ್ನು ಮತ್ತಷ್ಟು ಹೆಚ್ಚಿಸುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೈಗೆತ್ತಿಕೊಂಡಿರುವ ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆ ಇದೀಗ ಅಂತಿಮ ಹಂತ ತಲುಪಿದೆ.
ಹೈಲೈಟ್ಸ್: |
|
ಒಟ್ಟು 288 ಕಿ.ಮೀ. ಉದ್ದದ STRR ಬೆಂಗಳೂರು ಸುತ್ತಲಿನ ಪ್ರಮುಖ ನಗರ ಹಾಗೂ ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸಲಿದೆ. ಇದರಲ್ಲಿ ಕರ್ನಾಟಕದ ವ್ಯಾಪ್ತಿಯಲ್ಲಿ 243 ಕಿ.ಮೀ. ಮತ್ತು ತಮಿಳುನಾಡಿನಲ್ಲಿ 45 ಕಿ.ಮೀ. ರಸ್ತೆ ನಿರ್ಮಾಣವಾಗುತ್ತಿದೆ. ಒಟ್ಟು ಆರು ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಂಡಿರುವ ಯೋಜನೆಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಸುಮಾರು ಶೇ.95ರಷ್ಟು ಕೆಲಸ ಮುಗಿದಿದೆ.
http://Visit : www.suddidina.com
ಪ್ರಮುಖ ವಿಭಾಗಗಳ ಕಾಮಗಾರಿ ಬಹುತೇಕ ಪೂರ್ಣ
ದೊಡ್ಡಬಳ್ಳಾಪುರ-ಹೊಸಕೋಟೆ ನಡುವಿನ 38 ಕಿ.ಮೀ. ವಿಭಾಗದ ಕಾಮಗಾರಿ ಶೇ.99.20ರಷ್ಟು ಪೂರ್ಣಗೊಂಡಿದೆ. ದಾಬಸ್‌ಪೇಟೆ-ದೊಡ್ಡಬಳ್ಳಾಪುರ ಬೈಪಾಸ್ ನಡುವಿನ 42 ಕಿ.ಮೀ. NH648 ವಿಭಾಗದ ನಿರ್ಮಾಣವೂ ಪೂರ್ಣಗೊಂಡಿದೆ. ಕರ್ನಾಟಕ-ತಮಿಳುನಾಡು ಗಡಿಯ 21 ಕಿ.ಮೀ. ಉದ್ದದ ಗ್ರೀನ್‌ಫೀಲ್ಡ್ ಹೆದ್ದಾರಿ ಕಾಮಗಾರಿ ಶೇ.94.89ರಷ್ಟು ಮುಗಿದಿದ್ದು, ನವೆಂಬರ್ ವೇಳೆಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆಯಿದೆ.
ತಮಿಳುನಾಡು ಭಾಗದಲ್ಲೂ ಶೇ.91.32ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕೆಲಸವನ್ನು ಸೆಪ್ಟೆಂಬರ್‌ನಲ್ಲಿ ಮುಗಿಸುವ ಗುರಿ ಹೊಂದಲಾಗಿದೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಸಂಪರ್ಕಿಸುವ ಸುಮಾರು 7 ಕಿ.ಮೀ. ಭಾಗದ ಕಾಮಗಾರಿಯೂ ಪೂರ್ಣಗೊಂಡಿದೆ.
₹14,655 ಕೋಟಿ ವೆಚ್ಚದ ಬೃಹತ್ ಯೋಜನೆ
STRR ನಿರ್ಮಾಣಕ್ಕಾಗಿ ಒಟ್ಟು ₹14,655 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಕರ್ನಾಟಕ ವ್ಯಾಪ್ತಿಯ ಭೂಸ್ವಾಧೀನಕ್ಕೆ ತಗಲುವ ₹6,117 ಕೋಟಿಯಲ್ಲಿ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತಿದೆ. ಈಗಾಗಲೇ ₹518.32 ಕೋಟಿ ಬಿಡುಗಡೆ ಮಾಡಲಾಗಿದೆ. ತಮಿಳುನಾಡು ಭಾಗದ ಭೂಸ್ವಾಧೀನ ಸೇರಿದಂತೆ ಉಳಿದ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ.
ಮುಂದಿನ ಹಂತದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಆರು ಪಥಗಳ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಸ್ತಾವನೆಗಳನ್ನು PPPAC ಮೌಲ್ಯಮಾಪನ ಮಾಡಿದೆ. ಇದರಿಂದ ಮುಂದಿನ ಹಂತದ ಕಾಮಗಾರಿಗಳಿಗೂ ವೇಗ ಸಿಗುವ ನಿರೀಕ್ಷೆಯಿದೆ.
ನಗರದೊಳಗಿನ ವಾಹನ ದಟ್ಟಣೆ ಇಳಿಕೆ
STRR ಸಂಪೂರ್ಣವಾಗಿ ಕಾರ್ಯನಿರ್ವಹಿಸಲು ಆರಂಭಿಸಿದ ಬಳಿಕ ಹೊರರಾಜ್ಯಗಳಿಂದ ಬರುವ ಭಾರಿ ವಾಹನಗಳು ಬೆಂಗಳೂರು ನಗರ ಪ್ರವೇಶಿಸದೇ ನೇರವಾಗಿ ರಿಂಗ್ ರಸ್ತೆಯ ಮೂಲಕ ಸಾಗಬಹುದು. ದೊಡ್ಡಬಳ್ಳಾಪುರ, ಹೊಸಕೋಟೆ, ಆನೇಕಲ್, ನೆಲಮಂಗಲ ಸೇರಿದಂತೆ ಪ್ರಮುಖ ಹೊರವಲಯ ಪ್ರದೇಶಗಳನ್ನು ಸಂಪರ್ಕಿಸುವ ಈ ರಸ್ತೆ ನಗರ ಸಂಚಾರದ ಮೇಲಿನ ಒತ್ತಡವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ.
ನಗರದೊಳಗಿನ ಸಂಚಾರ ದಟ್ಟಣೆ ಶೇ.40ರಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ. ವಾಹನಗಳ ಪ್ರಯಾಣದ ಸಮಯ ಹಾಗೂ ಇಂಧನ ಬಳಕೆ ಇಳಿಯುವುದರ ಜೊತೆಗೆ ವಾಯು ಮತ್ತು ಶಬ್ದ ಮಾಲಿನ್ಯವೂ ಕಡಿಮೆಯಾಗಬಹುದು. ಕೈಗಾರಿಕೆಗಳು, ಲಾಜಿಸ್ಟಿಕ್ಸ್ ಮತ್ತು ಪೂರೈಕೆ ಸರಪಳಿಗೂ STRR ಹೊಸ ವೇಗ ನೀಡುವ ಸಾಧ್ಯತೆಯಿದೆ.

ದಿನದ ಸುದ್ದಿ
ವಿಭಿನ್ನ ಪ್ರಯೋಗಕ್ಕೆ ಸುದೀಪ್ ಫಿದಾ; ‘ಟಾಕ್ಸಿಕ್’ ವಿರುದ್ಧದ ಟೀಕೆಗಳ ನಡುವೆ ಯಶ್‌ಗೆ ಭರ್ಜರಿ ಬೆಂಬಲ
ಸುದ್ದಿದಿನ,ಸಿನಿಮಾ: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಯಾದ ಬಳಿಕ ನಿರೀಕ್ಷೆಗಿಂತ ಹೆಚ್ಚಾಗಿ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಈ ಪ್ಯಾನ್ ವರ್ಲ್ಡ್ ಸಿನಿಮಾ ಬಿಡುಗಡೆಯಾದ ದಿನದಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಅಭಿಪ್ರಾಯಗಳು ಜೋರಾಗಿವೆ. ಬಿಗ್ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಚಿತ್ರಕ್ಕೆ ಬಾಕ್ಸ್ ಆಫೀಸ್‌ಗಿಂತಲೂ ಸದ್ಯ ನೆಗೆಟಿವ್ ರಿವ್ಯೂಗಳು ದೊಡ್ಡ ಚರ್ಚೆಯ ವಿಷಯವಾಗಿವೆ.
ಹೈಲೈಟ್ಸ್ |
|
http://Visit : www.suddidina.com
ಮೊದಲ ದಿನವೇ ಭರ್ಜರಿ ಓಪನಿಂಗ್
ಆಗಸ್ಟ್ 26ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ತೆರೆಕಂಡ ‘ಟಾಕ್ಸಿಕ್’, ಮೊದಲ ದಿನ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಆರಂಭ ಕಂಡಿದೆ. ಆರಂಭಿಕ ಹಂತದಲ್ಲೇ ₹101 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎಂಬ ವರದಿಗಳು ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿವೆ. ಆದರೆ ಎರಡನೇ ಹಾಗೂ ಮೂರನೇ ದಿನಗಳಲ್ಲಿ ಗಳಿಕೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, ಸಿನಿಮಾ ಮಂದಗತಿಯಲ್ಲಿ ಸಾಗುತ್ತಿರುವ ಚರ್ಚೆ ಆರಂಭವಾಗಿದೆ.
ಚಿತ್ರದ ಕಥೆ, ನಿರೂಪಣೆ ಹಾಗೂ ಕೆಲವು ಪ್ರಯೋಗಾತ್ಮಕ ಅಂಶಗಳ ಬಗ್ಗೆ ಪ್ರೇಕ್ಷಕರಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವರು ಚಿತ್ರವನ್ನು ಮೆಚ್ಚಿಕೊಂಡಿದ್ದರೆ, ಇನ್ನೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ರಿವ್ಯೂಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ದ್ವಿಪಾತ್ರದಲ್ಲಿ ಯಶ್ ಅಬ್ಬರ
ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ನಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿಭಿನ್ನ ಶೈಲಿ, ಪಾತ್ರ ವಿನ್ಯಾಸ ಮತ್ತು ಕಥೆಯನ್ನು ಕಟ್ಟಿಕೊಟ್ಟಿರುವ ರೀತಿಯೂ ಸಿನಿಮಾದ ಪ್ರಮುಖ ಚರ್ಚೆಯ ಅಂಶಗಳಾಗಿವೆ.
ಆದರೆ, ನಿರೀಕ್ಷೆಗಳು ದೊಡ್ಡ ಮಟ್ಟದಲ್ಲಿದ್ದ ಕಾರಣ ಸಿನಿಮಾ ಕುರಿತ ಟೀಕೆಗಳೂ ಅಷ್ಟೇ ತೀವ್ರವಾಗಿವೆ. ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಮತ್ತೊಬ್ಬ ಸ್ಟಾರ್ ನಟ ಕಿಚ್ಚ ಸುದೀಪ್, ಯಶ್ ಅವರ ಪ್ರಯತ್ನವನ್ನು ಮುಕ್ತವಾಗಿ ಮೆಚ್ಚಿಕೊಂಡಿದ್ದಾರೆ.
“ಔಟ್ ಆಫ್ ದಿ ಬಾಕ್ಸ್ ಚಿಂತಿಸಿದ್ದೀರಿ”
‘ಟಾಕ್ಸಿಕ್’ ವೀಕ್ಷಿಸಿದ ಬಳಿಕ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಯಶ್ ಅವರನ್ನು ಉದ್ದೇಶಿಸಿ ಮೆಚ್ಚುಗೆಯ ಮಾತುಗಳನ್ನು ಹಂಚಿಕೊಂಡಿದ್ದಾರೆ. ಹಿಂದಿನ ಬ್ಲಾಕ್‌ಬಸ್ಟರ್ ಯಶಸ್ಸಿನ ಸೂತ್ರವನ್ನೇ ಮುಂದುವರಿಸದೆ, ಹೊಸ ಪ್ರಯೋಗಕ್ಕೆ ಮುಂದಾಗಿರುವುದು ಧೈರ್ಯದ ನಿರ್ಧಾರ ಎಂದು ಅವರು ಹೇಳಿದ್ದಾರೆ.
ಹೊಸ ರೀತಿಯಲ್ಲಿ ಯೋಚಿಸಲು ಕೇವಲ ಕಲ್ಪನೆ ಸಾಕಾಗುವುದಿಲ್ಲ. ಅದಕ್ಕೆ ವಿಭಿನ್ನ ಮನಸ್ಥಿತಿ, ದೃಢ ನಂಬಿಕೆ ಮತ್ತು ಮುಖ್ಯವಾಗಿ ಗಟ್ಸ್ ಬೇಕು ಎಂದು ಸುದೀಪ್ ಅಭಿಪ್ರಾಯಪಟ್ಟಿದ್ದಾರೆ.
“ವಿಶಿಷ್ಟ ಹಾಗೂ ಶ್ಲಾಘನೀಯ ಪ್ರಯತ್ನ”
‘ಟಾಕ್ಸಿಕ್’ ಒಂದು ವಿಶಿಷ್ಟ ಹಾಗೂ ಶ್ಲಾಘನೀಯ ಪ್ರಯತ್ನ ಎಂದು ಬಣ್ಣಿಸಿರುವ ಸುದೀಪ್, ಚಿತ್ರದ ಹಲವು ಭಾಗಗಳು ಪ್ರೇಕ್ಷಕರಲ್ಲಿ ಕುತೂಹಲ, ಚರ್ಚೆ ಮತ್ತು ಸಂವಾದಕ್ಕೆ ಅವಕಾಶ ಮಾಡಿಕೊಟ್ಟಿವೆ ಎಂದು ಹೇಳಿದ್ದಾರೆ. ಹಳೆಯ ಸಾಂಪ್ರದಾಯಿಕ ಶೈಲಿಯಿಂದ ಹೊರಬಂದು ಹೊಸ ಸಾಹಸಕ್ಕೆ ಕೈಹಾಕಿದ್ದಕ್ಕಾಗಿ ಯಶ್ ಅವರನ್ನು ಅಭಿನಂದಿಸಿ, “ಒಳ್ಳೆಯದಾಗಲಿ ಗೆಳೆಯ” ಎಂದು ಶುಭ ಹಾರೈಸಿದ್ದಾರೆ.
ಸುದೀಪ್ ಅವರ ಈ ಮಾತುಗಳು ಹೊರಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಟಾಕ್ಸಿಕ್’ ಕುರಿತ ಚರ್ಚೆ ಮತ್ತಷ್ಟು ವೇಗ ಪಡೆದುಕೊಂಡಿದೆ. ನೆಗೆಟಿವ್ ರಿವ್ಯೂಗಳ ನಡುವೆಯೇ ಯಶ್‌ಗೆ ಸುದೀಪ್ ನೀಡಿರುವ ಬೆಂಬಲ ಅಭಿಮಾನಿಗಳ ಗಮನ ಸೆಳೆದಿದೆ.
https://x.com/KicchaSudeep/status/2093329559211106527

ದಿನದ ಸುದ್ದಿ
ಶನಿವಾರ ಕಲಬುರಗಿ ಪಾಲಿಕೆಯ ಹೊಸ ಮೇಯರ್, ಉಪ ಮೇಯರ್ ಆಯ್ಕೆ: ಯಾರಿಗೆ ಒಲಿಯಲಿದೆ ಅಧಿಕಾರದ ಪಟ್ಟ?
ಸುದ್ದಿದಿನ, ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಶನಿವಾರ ನಡೆಯಲಿರುವ ಚುನಾವಣೆಯಲ್ಲಿ ಮೇಯರ್ ಸ್ಥಾನವನ್ನು ಬಿಸಿಎ ವರ್ಗಕ್ಕೆ ಹಾಗೂ ಉಪ ಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ. ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ.

http://Visit : www.suddidina.com
ಆಡಳಿತಾರೂಢ ಕಾಂಗ್ರೆಸ್ ಪಾಲಿಕೆಯಲ್ಲಿ ಅಗತ್ಯ ಬಹುಮತದ ಸಂಖ್ಯಾಬಲ ಹೊಂದಿರುವುದರಿಂದ ಅಧಿಕಾರ ಉಳಿಸಿಕೊಳ್ಳುವ ವಿಚಾರದಲ್ಲಿ ದೊಡ್ಡ ಆತಂಕವಿಲ್ಲ. ಆದರೆ ಮೇಯರ್ ಮತ್ತು ಉಪ ಮೇಯರ್ ಸ್ಥಾನ ಯಾರಿಗೆ ನೀಡಬೇಕು ಎಂಬುದೇ ಈಗ ಪಕ್ಷದೊಳಗಿನ ಪ್ರಮುಖ ಚರ್ಚೆಯಾಗಿದೆ. ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖ ಪದಾಧಿಕಾರಿಗಳು ಶುಕ್ರವಾರ ಸಭೆ ನಡೆಸಿದ್ದು, ಶನಿವಾರ ಬೆಳಗ್ಗೆ ಅಭ್ಯರ್ಥಿಗಳ ಕುರಿತು ಅಂತಿಮ ಸ್ಪಷ್ಟತೆ ಮೂಡುವ ಸಾಧ್ಯತೆಯಿದೆ.
ಕಾಂಗ್ರೆಸ್ ಸಂಖ್ಯಾಬಲ 35ಕ್ಕೆ
ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ ತನ್ನ 28 ಸದಸ್ಯರ ಜತೆಗೆ ಸಂಸದ ರಾಧಾಕೃಷ್ಣ ದೊಡ್ಡಮನಿ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಶಾಸಕರಾದ ಅಲ್ಲಮಪ್ರಭು ಪಾಟೀಲ್ ಮತ್ತು ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ ಹಾಗೂ ಡಾ. ಚಂದ್ರಶೇಖರ ಪಾಟೀಲ್ ಹುಮನಾಬಾದ್ ಅವರ ಮತದಾನದ ಹಕ್ಕಿನಿಂದ ಒಟ್ಟು 35 ಮತಗಳ ಬಲ ಹೊಂದಿದೆ.
ಇದರಿಂದ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಮೇಲುಗೈ ದೊರೆಯುವಂತಾಗಿದೆ. ಆದರೂ ಪಕ್ಷದೊಳಗಿನ ಆಕಾಂಕ್ಷಿಗಳ ಸಂಖ್ಯೆ ಹಾಗೂ ಸ್ಥಳೀಯ ರಾಜಕೀಯ ಸಮೀಕರಣಗಳು ಅಭ್ಯರ್ಥಿ ಆಯ್ಕೆಯನ್ನು ಕುತೂಹಲಕರವಾಗಿಸಿವೆ.
ಬಿಜೆಪಿಗೂ ಗಮನಾರ್ಹ ಸಂಖ್ಯಾಬಲ
ಇನ್ನೊಂದೆಡೆ ಬಿಜೆಪಿ 22 ಸದಸ್ಯರು ಹಾಗೂ ಒಬ್ಬರನ್ನು ಸೇರಿಸಿ 23ರ ಸಂಖ್ಯಾಬಲ ಹೊಂದಿದೆ. ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಶಶೀಲ್ ನಮೋಶಿ ಹಾಗೂ ಶಾಸಕ ಬಸವರಾಜ ಮತ್ತಿಮಡು ಅವರ ಮತದಾನದ ಹಕ್ಕು ಸೇರಿ ಬಿಜೆಪಿಯ ಒಟ್ಟು ಬಲ 26ಕ್ಕೆ ತಲುಪುತ್ತದೆ.
ಈ ನಡುವೆ ಜೆಡಿಎಸ್‌ನ ನಾಲ್ವರು ಸದಸ್ಯರ ಮತಗಳು ನಿರ್ಣಾಯಕವಾಗುವ ಸಾಧ್ಯತೆಯೂ ಇದೆ. ಅವರು ಯಾವ ನಿಲುವು ತೆಗೆದುಕೊಳ್ಳುತ್ತಾರೆ ಎಂಬುದು ಚುನಾವಣಾ ದಿನದವರೆಗೂ ಕುತೂಹಲ ಮೂಡಿಸಿದೆ.
ಮಧ್ಯಾಹ್ನ 3.30ಕ್ಕೆ ಚುನಾವಣೆ
ಇಂದಿರಾ ಸ್ಮಾರಕ ಭವನದಲ್ಲಿ ಶನಿವಾರ ಮಧ್ಯಾಹ್ನ 3.30ಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಅಪರ ಜಿಲ್ಲಾಧಿಕಾರಿಗಳ ಮುಂದೆ ಬೆಳಗ್ಗೆ 10 ಗಂಟೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಸಂಬಂಧಿಸಿದ ಮತದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ.
ಎಸ್‌ಐಆರ್ ಪ್ರಕ್ರಿಯೆ ಹಾಗೂ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಆಗಸ್ಟ್ 8ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು. ಇದೀಗ ಹೊಸ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಪಾಲಿಕೆ ರಾಜಕೀಯ ಮತ್ತೆ ರಂಗೇರಿದೆ.
ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಂಸದ ರಾಧಾಕೃಷ್ಣ ದೊಡ್ಡಮನಿ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಆಕಾಂಕ್ಷಿಗಳು, ಪದಾಧಿಕಾರಿಗಳ ಸಭೆ ನಡೆದಿದೆ. ಪಾಲಿಕೆಯಲ್ಲಿ ಪಕ್ಷ ಬಹುಮತ ಹೊಂದಿದೆ. ಆಕಾಂಕ್ಷಿಗಳು ಹೆಚ್ಚಿದ್ದರೂ ಸಮಗ್ರ ಚರ್ಚೆ ಬಳಿಕ ಹಿರಿಯರ ಮಾರ್ಗದರ್ಶನದಂತೆ ಸೂಕ್ತ ವ್ಯಕ್ತಿಗಳನ್ನು ಗುರುತಿಸಲಾಗುವುದು.
- ಜಗದೇವ ಗುತ್ತೇದಾರ್ ಜಿಲ್ಲಾಧ್ಯಕ್ಷ, ಕಾಂಗ್ರೆಸ್

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ3 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ4 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ3 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ4 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ4 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ4 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ


