ದಿನದ ಸುದ್ದಿ
ದಾವಣಗೆರೆ | ಸೆ.17 ಕ್ಕೆ ಬೃಹತ್ ಲಸಿಕಾ ಮೇಳ, 1 ಲಕ್ಷ ಡೋಸ್ ಗುರಿ : ಜಿಲ್ಲಾಧಿಕಾರಿ ಮಹಾತೇಶ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಬೃಹತ್ ಲಸಿಕಾ ಮೇಳ ನಡೆಯಲಿದ್ದು 1 ಲಕ್ಷ ಜನರಿಗೆ ಕೊರೊನ ವ್ಯಾಕ್ಸಿನ್ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು
ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಲಸಿಕೆ ನೀಡುವ ಸಂಬಂಧ ನಡೆದ ಅಧಿಕಾರಿಗಳ ಸಭೆ ಯಲ್ಲಿ ಮಾತನಾಡಿದ ಅವರು ನೂರು ಆರೋಗ್ಯ ಸಂಸ್ಥೆಗಳ ಮೂಲಕ ಲಸಿಕೆ ನೀಡಲಾಗುತ್ತಿದ್ದು ಪಿ.ಹೆಚ್.ಸಿ.ಸಿ ಹೆಚ್ ಸಿ.ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ,ಇಎಸ್ಐ,ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ದಿನದಲ್ಲಿ 1 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.
ಅಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗುವ ಲಸಿಕೆ ಮೇಳದಲ್ಲಿ ಪ್ರತಿ 2 ಗಂಟೆಗೊಮ್ಮೆ ಮಾಹಿತಿ ತೆಗೆದುಕೊಳ್ಳಲಾಗುವುದು. ಹರಿಹರ ದ 31 ವಾರ್ಡಗಳಲ್ಲಿ 31 ತಂಡಗಳು ಕಾರ್ಯ ನಿರ್ವಹಿಸಲಿದ್ದು ದಾವಣಗೆರೆ ನಗರದ 45 ವಾರ್ಡಗಳಲ್ಲಿ 45 ತಂಡಗಳು ಕಾರ್ಯ ನಿರ್ವಹಿಸಲಿವೆ.
ಜಿಲ್ಲೆಯ 195 ಗ್ರಾ.ಪಂ ಗಳ ಕೇಂದ್ರ ಸ್ಥಾನಗಳಲ್ಲಿ 1 ತಂಡ ಕನಿಷ್ಠ 200 ಜನರಿಗೆ ಲಸಿಕೆ ನೀಡಲಿದೆ,ಈ ಸಂಬಂಧ ಈಗಾಗಲೇ ಎಲ್ಲಾ ತಹಶೀಲ್ದಾರ್,ಇಓಗಳು ,ಟಿ.ಹೆಚ್. ಓ,ಸಿಡಿಪಿಓ ಗಳಿಗೆ ತರಬೇತಿ ನೀಡಲಾಗಿದೆ.
ನಾಳೆ ತಾಲೂಕು ಮಟ್ಟದ ತರಬೇತಿ ನಡೆಯಲಿದ್ದು ಎಲ್ಲಾ ಬಿ.ಎಲ್.ಓ.ಗಳು ತಮ್ಮ ವ್ಯಾಪ್ತಿಯಲ್ಲಿ ಲಸಿಕೆ ಪಡೆದುಕೊಂಡಿಲ್ಲದವರ ಪಟ್ಟಿ ತಯಾರಿಸಲಿದ್ದಾರೆ.
ಗ್ರಾ.ಪಂ. ಮಟ್ಟದಲ್ಲಿ ಆಟೋ ಪ್ರಚಾರ ನಗರದಲ್ಲಿ ಕಸದ ಗಾಡಿಗಳಲ್ಲಿ ಪ್ರಚಾರ ವ್ಯವಸ್ಥೆ ಮಾಡಲಾಗುವುದು ಹಾಗೂ ಹಳ್ಳಿಗಳಲ್ಲಿ ಡಂಗೂರ ಬಾರಿಸಲು ಸೂಚಿಸಲಾಗಿದೆ ಎಂದರು
ವಿಶೇಷವಾಗಿ ದುಡಿಯುವ ಜನರಿರುವ ಪ್ರದೇಶಗಳಲ್ಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಹಾಗೂ ಬಡ ಜನರು ವಾಸಿಸುವ ಕಡೆ ಕಾರ್ಮಿಕ ಇಲಾಖೆ ವತಿಯಿಂದ ಹೆಚ್ಚಿನ ಪ್ರಚಾರ ನಡೆಸಲಾಗುವುದೆಂದರು. ಈ ಹಿಂದೆ ವ್ಯಾಕ್ಸಿನ್ ಗೆ ವಿರೋಧ ಮಾಡಿದ್ದ ಜಾಗಗಳಲ್ಲಿ ಜನರ ಮನವೊಲಿಸಲಾಗುವುದೆಂದರು.
ತಾಲ್ಲೂಕು ಹಂತದಲ್ಲಿ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಲಾಟರಿ,ಲಯನ್ಸ್,ರೆಡ್ ಕ್ರಾಸ್ ನಂತಹ ಸಂಸ್ಥೆಗಳು ಕೈ ಜೋಡಿಸಲಿವೆ. ಒಂದು ರೀತಿ ಚುನಾವಣೆ ನಡೆಸಿದ ರೀತಿಯಲ್ಲಿಯೇ ವ್ಯಾಕ್ಸಿನ್ ಮೇಳ ಯಶಸ್ವಿಗೊಳಿಸಲಾಗುವುದು ಎಂದರು
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್,ಜಿ.ಪಂ.ಸಿಇಓ ವಿಜಯ ಮಹಾಂತೇಶ ದಾನಮ್ಮನವರ್,ಡಿ.ಹೆಚ್.ಓ, ನಾಗರಾಜ್,ಆರ್ ಸಿ.ಹೆಚ್ ಅಧಿಕಾರಿ ಡಾ ಮೀನಾಕ್ಷಿ ,ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


