ರಾಜಕೀಯ
ಕೋವಿಡ್ 19 | ‘ರಾಷ್ಟ್ರೀಯ ವಿಪ್ಪತ್ತು’ ಎಂದು ಘೋಷಿಸುವಂತೆ ಕೆಪಿಸಿಸಿ ಮನವಿ : ಕೆಪಿಸಿಸಿ ಸಲ್ಲಿಸಿದ :ಮನವಿ ಪತ್ರ’ ಮಿಸ್ ಮಾಡ್ದೆ ಓದಿ
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಕೆಪಿಸಿಸಿ ವತಿಯಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಮನವಿ ಪತ್ರ ಸಲ್ಲಿಸಿದರು.
ಕೆಪಿಸಿಸಿ ಸಲ್ಲಿಸಿದ ಮಾನವಿ ಪತ್ರದಲ್ಲಿನ ಅಂಶಗಳು
- WHO ಮಾರ್ಗಸೂಚಿಯ ಪ್ರಕಾರ ಕೊರೋನಾ ರೋಗ ನಿಯಂತ್ರಣಕ್ಕೆ ಪ್ರಾಥಮಿಕವಾಗಿ 10 ಲಕ್ಷ ಜನಸಂಖ್ಯೆಗೆ 10 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಬೇಕಾಗಿರುತ್ತದೆ. ಆದರೆ ಇಲ್ಲಿಯವರೆಗೂ ನಮ್ಮ ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಪ್ರತಿ 10 ಲಕ್ಷಕ್ಕೆ ಕೇವಲ 152 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದರೂ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಒಟ್ಟು 12 ಲಕ್ಷ ಕಿಟ್‌ಗಳ ಅಗತ್ಯವಿದ್ದು, ಈಗ ಕೇವಲ 2,27,000 ಕಿಟ್‍ಗಳಿವೆ, 5,46,721 ಎನ್-95 ಮಾಸ್ಕ್‌ಗಳು ಮತ್ತು 2,79,999 ಹೈಡ್ರಾಕ್ಸಿಕ್ಲೋರಾಕ್ಸಿನ್ ಮಾತ್ರೆಗಳಿವೆ. ಇವು ಯಾವುದಕ್ಕೂ ಸಾಲುವುದಿಲ್ಲ ಎಂಬಂತಾಗಿದೆ. ರಾಜ್ಯದಲ್ಲಿರುವ 18 ಕೊರೊನಾ ಪರೀಕ್ಷೆ ಲ್ಯಾಬ್‍ಗಳಲ್ಲಿ 9 ಲ್ಯಾಬ್‍ಗಳು ಬೆಂಗಳೂರಿನಲ್ಲಿಯೇ ಇವೆ.
- ವಿಶ್ವವ್ಯಾಪಿಯಾಗಿ ಹರಡಿರುವ ಕೊರೊನಾ ರೋಗವನ್ನು “ರಾಷ್ಟ್ರೀಯ ವಿಪತ್ತು” ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಲು ಮತ್ತು ಕೊರೋನಾ ರೋಗ ನಿವಾರಣೆ ಹಾಗೂ ಲಾಕ್‍ಡೌನ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಎಲ್ಲಾ ರೀತಿಯ ಆರ್ಥಿಕ ಹಾಗೂ ಇನ್ನಿತರ ಸಹಾಯ ನೀಡಲು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರು, ಕೂಲಿಕೆಲಸಗಾರರು ಹಾಗೂ ಬಡವರಿಗೆ ತಲಾ ಪ್ರತಿ ತಿಂಗಳು ಕನಿಷ್ಠ 10 ಕೆ.ಜಿ. ಅಕ್ಕಿ, ಹಾಲು, 2 ಲೀಟರ್ ಅಡುಗೆ ಎಣ್ಣೆ, ತರಕಾರಿ ಮುಂತಾದ ಅಗತ್ಯ ಪದಾರ್ಥಗಳನ್ನು ಪ್ರತಿ ತಿಂಗಳ ಮೊದಲ ವಾರ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.
- ಕೊರೋನಾ ರೋಗ ಹರಡುವಿಕೆಯಲ್ಲಿ ಧರ್ಮವನ್ನು ಎಳೆದುಕೊಂಡು, ಒಂದು ಕೋಮಿನ ಜನರನ್ನು ಗುರಿಯಾಗಿಸಿ ಅವರ ವಿರುದ್ಧ ಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸಿದ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿರುವುದು ಖಂಡನೀಯ. ತಕ್ಷಣ ಸರ್ಕಾರ ತನ್ನ ನಿರ್ಧಾರ ಬದಲಿಸಿ, ಕೋಮುಪ್ರಚೋದನೆ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಸರ್ಕಾರದಿಂದ ಹಂಚಿಕೆ ಮಾಡುತ್ತಿರುವ ಆಹಾರ ಪದಾರ್ಥಗಳ ಕಿಟ್ ಮೇಲೆ ಆಡಳಿತ ಪಕ್ಷದ ನಾಯಕರುಗಳು ತಮ್ಮ ಪಕ್ಷದ ಚಿನ್ಹೆ ಹೊಂದಿರುವ ಲೇಬಲ್‍ಗಳನ್ನು ಅಂಟಿಸಿ ಮತದಾರರನ್ನು ಓಲೈಸಿಕೊಳ್ಳುವ ಹೀನ ರಾಜಕೀಯ ಪ್ರವೃತ್ತಿಯನ್ನು ತೋರುತ್ತಿದ್ದಾರೆ. ಇಂತಹ ಸರ್ಕಾರಿ ಸೌಲಭ್ಯಗಳ ದುರುಪಯೋಗವನ್ನು ತಡೆಯಬೇಕು.
- ಲಾಕ್‍ಡೌನ್ ಅವಧಿಯಲ್ಲಿ ನರೇಗಾ ಯೋಜನೆಯನ್ನು ಸ್ಥಗಿತಗೊಳಿಸಿದ ಕಾರಣ ನೋಂದಾಯಿತ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ, ಹಾಗಾಗಿ ಇವರಿಗೆ ಲಾಕ್‍ಡೌನ್ ಅವಧಿಯ ದಿನಗೂಲಿಯನ್ನು ಬ್ಯಾಂಕ್ ಖಾತೆಗಳಿಗೆ ಸರ್ಕಾರ ಜಮಾ ಮಾಡಬೇಕು ಮತ್ತು ಕೂಡಲೇ ನರೇಗಾ ಯೋಜನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೆಲಸಕ್ಕೆ ಅವಕಾಶ ಮಾಡಿಕೊಡಬೇಕು. ಜೀವ ಮತ್ತು ಜೀವನವನ್ನು ಉಳಿಸಿ, ಬೆಳೆಸಲು, ಹದಗೆಟ್ಟಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೂಡಲೇ ರಾಜಕೀಯ ತಜ್ಞರು, ಆರ್ಥಿಕ ತಜ್ಞರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳ ನಾಯಕರಗಳನ್ನು ಒಳಗೊಂಡಿರುವ ಕಾರ್ಯಪಡೆಯನ್ನು ರಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.
- ಕೊರೊನಾ ರೋಗದ ಕಾರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಈ ಆತಂಕವನ್ನು ದೂರ ಮಾಡಲು ಸರ್ಕಾರ ಕೂಡಲೇ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳ ಹಾಗೂ ಪರೀಕ್ಷೆ ದಿನಾಂಕಕ್ಕೆ ಸಂಬಂಧಪಟ್ಟ ಸೂಕ್ತ ಮಾಹಿತಿ ನೀಡಬೇಕು.
ಈ ಎಲ್ಲಾ ಅಂಶಗಳನ್ನು ಒಳಗೊಂಡಿದೆ ಕೆಪಿಸಿಸಿ ಮನವಿ ಪತ್ರ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.
ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
-
ದಿನದ ಸುದ್ದಿ5 days ago
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
-
ದಿನದ ಸುದ್ದಿ4 days ago
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
-
ದಿನದ ಸುದ್ದಿ6 days ago
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
-
ದಿನದ ಸುದ್ದಿ5 days ago
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
-
ದಿನದ ಸುದ್ದಿ4 days ago
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು
-
ದಿನದ ಸುದ್ದಿ5 days ago
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ