ದಿನದ ಸುದ್ದಿ

ದಾವಣಗೆರೆಯಲ್ಲಿಂದು 4 ಕೊರೊನಾ ಪಾಸಿಟಿವ್ ಕೇಸ್ ಪತ್ತೆ : ಒಟ್ಟು 63 ಆ್ಯಕ್ಟೀವ್ ಕೇಸ್

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಇಂದು ನಾಲ್ಕು ಕೊರೊನಾ ಸೋಂಕು ಪ್ರಕರಣ ವರದಿಯಾಗಿದೆ. ಈ ಮೂಲಕ ಸೋಂಕಿತರ ಸಕ್ರಿಯ ಪ್ರಕರಣ 63ಕ್ಕೆ ಏರಿದಂತಾಗಿದೆ.

ಗುರುವಾರ ಯಾವುದೇ ಪಾಸಿಟಿವ್ ಪ್ರಕರಣ ವರದಿಯಾಗಿರಲಿಲ್ಲ. ಜಿಲ್ಲಾ ಕೋವಿಡ್ ನಿಗದಿತ ಆಸ್ಪತ್ರೆಯಿಂದ ಗುಣಮುಖರಾದ 13 ಜನರನ್ನು ಬಿಡುಗಡೆಗೊಳಿಸಲಾಗಿತ್ತು. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡುಗೆ ನೀಡಿದ್ದರು. ಆದರೆ ಇಂದು ನಾಲ್ಕು ಪ್ರಕರಣಗಳು ಪತ್ತೆಯಾಗಿರುವುದು ಮತ್ತೆ ಬೆಣ್ಣೆನಗರಿಯ ಜನರಲ್ಲಿ ಆತಂಕ ತಂದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version