ದಿನದ ಸುದ್ದಿ

ದಾವಣಗೆರೆ | ಕೋವಿಡ್ ಪರೀಕ್ಷೆ ಕುರಿತು ಮಹತ್ವದ ಸಭೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಎಸ್‍ಎಸ್ ಹೈಟೆಕ್ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ದಾವಣಗೆರೆಯಲ್ಲಿ ಪ್ರತಿದಿನ ಸಂಗ್ರಹಿಸಲಾಗುತ್ತಿರುವ ಕೋವಿಡ್ ಸ್ವಾಬ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವ ಮತ್ತು ಈ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಲ್ಯಾಬ್‍ಗಳಿಗೆ ಕಳುಹಿಸುವ ಬಗ್ಗೆ ಡಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಹಾಗೂ ಎಸ್‍ಎಸ್ ಹೈಟೆಕ್ ಆಸ್ಪತ್ರೆಯ ಪಿಸಿಆರ್ ಲ್ಯಾಬ್‍ನಲ್ಲಿ ಕೋವಿಡ್ ಪರೀಕ್ಷೆ ನಡೆಸುವ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಎಸ್‍ಪಿ ಹನುಮಂತರಾಯ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಸ್‍ಎಸ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಪ್ರಸಾದ್, ಎಸ್‍ಎಸ್‍ಐಎಂಎಸ್ ನಿರ್ದೇಶಕ ಡಾ.ಕಾಳಪ್ಪನವರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್ ಡಾ.ಸುಭಾಷ್‍ಚಂದ್ರ, ಡಿಎಸ್‍ಓ ಡಾ.ರಾಘವನ್, ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಇತರೆ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version