ದಿನದ ಸುದ್ದಿ
ಕೋವಿಡ್ 19 | ‘ಗ್ರೀನ್ ಝೋನ್’ ಸನಿಹಕ್ಕೆ ದಾವಣಗೆರೆ..!
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಒಟ್ಟು ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಮೂವರು ಸಹ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 17ಕ್ಕೆ 28 ದಿನಗಳು ಮುಗಿಯಲಿದ್ದು, ಯಾವುದೇ ಹೊಸ ಪ್ರಕರಣಗಳು ಕಂಡುಬರದಿದ್ದಲ್ಲ್ಲಿ ಜಿಲ್ಲೆಯು ಗ್ರೀನ್ ಜೋನ್‍ಗೆ ಸೇರ್ಪಡೆಯಾಗಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ರೈತರಿಗೆ ಮಾರುಕಟ್ಟೆ ಒದಗಿಸುವ ಕುರಿತು ಕರೆಯಲಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243