ದಿನದ ಸುದ್ದಿ
ದಾವಣಗೆರೆಯಲ್ಲಿ ಕೊರೋನಾ ಸೃಷ್ಟಿಸಿದ ಆತಂಕ; ‘ಹಸಿರು ಸಂಭ್ರಮ’ ಕಳೆಯಲು ಜಿಲ್ಲಾಡಳಿತ ಕಾರಣವಾಯಿತೆ ?
ಸುದ್ದಿದಿನ ವಿಶೇಷ, ದಾವಣಗೆರೆ: ಕಳೆದ ಮೂರು ದಿನಗಳ ಹಿಂದೆ ಜಿಲ್ಲೆಯ ಜನರಲ್ಲಿದ್ದ ನಿರಾಳತೆ, ಸಂಭ್ರಮ ಈಗ ಮಾಯವಾಗಿದೆ. ಸದ್ಯ ದಾವಣಗೆರೆಯಲ್ಲಿ ಮತ್ತೆ ಬರೊಬ್ಬರಿ ಎಂಟು ಕೊರೋನಾದ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಶುಕ್ರವಾರ ಕರೋನಾ ಪೀಡಿತ ವೃದ್ಧ ಮೃತಪಟ್ಟಿದ್ದಾನೆ. ಈ ಸನ್ನಿವೇಶಗಳ ಸೃಷ್ಟಿಗೆ ಜಿಲ್ಲಾಡಳಿತವೇ ಕಾರಣವಾಯಿತೇ ಎಂಬ ಅನುಮಾನ ಜನರಲ್ಲಿ ಮೂಡಿವೆ.
ಲಾಕ್ ಡೌನ್ ಆರಂಭದಲ್ಲಿ ಜಿಲ್ಲೆಯಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದ್ದರೂ ಅದು ತನ್ನ ಕಬಂದಬಾಹು ಚಾಚದಂತೆ ನೋಡಿಕೊಳ್ಳುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿತ್ತು. ಬರೋಬ್ಬರಿ 28 ದಿನ ಪೂರೈಸುವ ಮೂಲಕ ಹಸಿರು ವಲಯಕ್ಕೆ ಎಂಟ್ರಿ ಕೊಟ್ಟಿತ್ತು. ಈ ಕಾರಣಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರ ಕಾರ್ಯಕ್ಕೆ ಶ್ಲಾಘನೆ ಕೂಡ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರು ಅಧಿಕಾರಿಗಳ ಕಾರ್ಯದ ಬಗ್ಗೆ ಜಿಲ್ಲೆಯ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಸಂಭ್ರಮ ಹೆಚ್ಚು ದಿನ ಉಳಿಯಲಿಲ್ಲ !
ದಾವಣಗೆರೆ ಜಿಲ್ಲೆ ಹಸಿರು ವಲಯಕ್ಕೆ ಸೇರಿದ ಕೂಡಲೇ ಜಿಲ್ಲೆಯ ಜನ ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದರು. ಆದರೆ ಆ ಸಂಭ್ರಮ ಒಂದು ದಿನವೂ ಉಳಿಯಲಿಲ್ಲ. ಸರ್ಕಾರಿ ಆಸ್ಪತ್ರೆಯೊಂದರ ನರ್ಸ್ ಒಬ್ಬೊರಿಗೆ ಕೊರೋನ ಇರುವುದು ದೃಢಪಡುವ ಮೂಲಕ ಸಂಭ್ರಮ ಮಾಯವಾಯಿತು. ನಂತರ 69 ವರ್ಷದ ವೃದ್ಧರಲ್ಲಿ ಸೋಂಕು ಪತ್ತೆಯಾಯಿತು. ಅದಾದ ನಂತರ ಒಂದೇ ದಿನ ಒಂದೇ ಕುಟುಂಬದ 6 ಜನರಲ್ಲಿ ಮಹಾಮಾರಿ ಕರೋನಾ ಸೋಂಕು ಕಾಣಿಸಿಕೊಡ್ಡಿದ್ದು, ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿತು.
ಜನ ಸಮುದಾಯಕ್ಕೆ ಹರಡಿತೇ ಮಹಾಮಾರಿ ಕರೋನಾ ?
ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಜನ ಸಮುದಾಯಕ್ಕೆ ಹರಡಿಯೇ ಎಂಬ ಆತಂಕ ಮೂಡಿಸಿದೆ. ಶುಕ್ರವಾರ ಮೃತಪಟ್ಟ ವೃದ್ಧರಿಗೆ ಕರೋನಾ ಹೇಗೆ ಬಂತು ಎಂಬುದನ್ನು ಪತ್ತೆಹಚ್ಚುವಲ್ಲಿ ಜಿಲ್ಲಾಡಳಿತ ಹೆಚ್ಚು ತಲೆಕೆಡಿಸಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕರೋನಾದಿಂದ ಮೃತಪಟ್ಟ ವೃದ್ಧ ಬೇರೆ ಪ್ರದೇಶದಿಂದ ಬಂದಿರಲಿಲ್ಲ. ಆತ ವ್ಯಾಪಾರಿಯಾಗಿದ್ದು, ಇಲ್ಲೇ ಇದ್ದ ಎಂದು ಹೇಳಲಾಗುತ್ತಿದೆ. ಅಂದರೆ ಆತನಿಗೆ ಹೇಗೆ ಹರಡಿತು ಸೋಂಕು ಎಂಬ ಯಕ್ಷ ಪ್ರಶ್ನೆ ಎದುರಾಗಿದೆ.
ಜಿಲ್ಲಾಡಳಿತ ಕೊನೆಯಲ್ಲಿ ಹಾದಿ ತಪ್ಪಿತೇ ?
ಲಾಕ್ ಡೌನ್ ಆರಂಭದಲ್ಲಿ ಕೈಗೊಂಡಿದ್ದ ಬಿಗಿ ಭದ್ರತೆ ಕೊನೆಯಲ್ಲಿ ಕಾಣೆಯಾಯಿತು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಜಿಲ್ಲೆಯ ಕೆಲವು ಜನರು ಕೂಡ ಆಡಳಿತ ವ್ಯವಸ್ಥೆಗೆ ಸಹಕಾರ ನೀಡದೇ ಬೇಕಾಬಿಟ್ಟಿಯಾಗಿ ಹೊರಗಡೆ ಸಂಚರಿಸುದ್ದು ಸಂಷ್ಟದ ಪರಿಸ್ಥಿತಿಗೆ ಕಾರಣವಾಯಿತು ಎಂಬ ಅಪವಾದದ ಮಾತು ಕೇಳಿ ಬರುತ್ತಿವೆ. ಹೊರಗಡೆಯಿಂದ ಬರುವ ಚೆಕ್ ಪೋಸ್ಟ್ ಗಳಲ್ಲಿ ಆರಂಭದಲ್ಲಿ ತೆಗೆದುಕೊಂಡಿದ್ದ ಕಠಿಣ ನಿಲುವನ್ನು ಜಿಲ್ಲಾಡಳಿತ ಸಡಿಲಿಸಬಾರದಿತ್ತು. ಜೊತೆಗೆ ಜಿಲ್ಲೆಯ ಜನರು ಕೂಡಾ ಜಿಲ್ಲಾಡಳಿತ ಹಾಗೂ ಪೊಲೀಸ್ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡಬೇಕಿತ್ತು ಎಂದು ಪ್ರಜ್ಞಾವಂತ ನಾಗಕರಿಕರು ಹೇಳುತ್ತಿದ್ದಾರೆ.
ಜಿಲ್ಲೆಯಲ್ಲಿ ಈ ವರೆಗಿನ ಕೊರೊನಾ ಸ್ಥಿತಿಗತಿ
- ಪಿ-556 ರಿಂದ ಈ ದಿನ ಹೊಸ ಪಿ-580, ಪಿ-581, ಪಿ-582, ಪಿ-583, ಪಿ-584 ಪ್ರಾಥಮಿಕ ಸಂಪರ್ಕದಿಂದ 5 ಪ್ರಕರಣಗಳು ಖಚಿತಪಟ್ಟಿದ್ದು, ಚಿಕಿತ್ಸೆಗಾಗಿ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುತ್ತಾರೆ. (ಪಿ-556 ಶುಕ್ರವಾರ ಮೃತ ಪಟ್ಟಿದ್ದಾರೆ.)
- ಪಿ-556 ಪ್ರಕರಣದಿಂದ ಒಟ್ಟು 12 ಪ್ರಾಥಮಿಕ ಸಂಪರ್ಕ ಮತ್ತು 17 ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ.
- ಪಿ-533 ರಿಂದ ಪಿ-585 ಈ ದಿನ ಹೊಸ ಪ್ರಕರಣವು ಪ್ರಾಥಮಿಕ ಸಂಪರ್ಕದಿಂದ ಖಚಿತಪಟ್ಟಿದ್ದು, ಚಿಕಿತ್ಸೆಗಾಗಿ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಪಿ-533 ಪ್ರಕರಣದಿಂದ ಒಟ್ಟು 25 ಪ್ರಾಥಮಿಕ ಸಂಪರ್ಕ ಮತ್ತು 45 ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ.
- ಪಿ-533 ಮತ್ತು ಪಿ-556 ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದವರ ಗಂಟಲು ದ್ರವದ ಮಾದರಿಗಳನ್ನು ತೆಗೆದುಕೊಂಡಿದ್ದು, ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಘೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
- ಜಾಲಿನಗರ ಹಾಗೂಬಾಷಾ ನಗರ ಪ್ರದೇಶವನ್ನು ಕಂಟೈನ್‍ಮೆಂಟ್ ಝೋನ್ ಎಂದು ಪರಿಗಣಿಸಲಾಗಿದೆ. ಸುತ್ತಲಿನ 5 ಕಿ.ಮೀ ಪ್ರದೇಶವನ್ನು ಬಫರ್ ಝೋನ್ ಎಂದು ಪರಿಗಣಿಸಿ ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳನ್ವಯ ಸರ್ವೇ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ.
- ಖಚಿತಪಟ್ಟ ಪ್ರಕರಣಗಳು ಬಂದಿರುವ ಬಾಷಾನಗರ ಎಪಿಸೆಂಟರ್ ಕಂಟೈನ್‍ಮೆಂಟ್ ಝೋನ್‍ನಲ್ಲಿ ಈ ದಿನ 909 ಮನೆಗಳಿಂದ 4553 ಜನರನ್ನು ಸಂದರ್ಶಿಸಿ ಫ್ಲೂ (IಐI) ಸಮೀಕ್ಷೆಯನ್ನು ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ 28 ತಂಡಗಳಿಂದ ನಡೆಸಲಾಯಿತು. ಈ ದಿನ ಲಕ್ಷಣಗಳು ಇರುವ ಯಾವುದೇ ವ್ಯಕ್ತಿಗಳು ಇರುವುದಿಲ್ಲ. ಸಂಚಿತ ಮನೆಗಳು : 909, ಜನಸಂಖ್ಯೆ : 4553, ಲಕ್ಷಣಗಳು ಇರುವ ಯಾವುದೇ ವ್ಯಕ್ತಿಗಳು ಕಂಡುಬಂದಿರುವುದಿಲ್ಲ.
- ಖಚಿತಪಟ್ಟ ಪ್ರಕರಣಗಳು ಬಂದಿರುವ ಜಾಲಿನಗರ ಎಪಿಸೆಂಟರ್‍ನ ಕಂಟೈನ್‍ಮೆಂಟ್ ಝೋನ್‍ನಲ್ಲಿ ಈ ದಿನ 1023 ಮನೆಗಳಿಂದ 4142 ಜನರನ್ನು ಸಂದರ್ಶಿಸಿ ಫ್ಲೂ (IಐI) ಸಮೀಕ್ಷೆಯನ್ನು ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ 28 ತಂಡಗಳಿಂದ ನಡೆಸಲಾಯಿತು. ಈ ದಿನ ಲಕ್ಷಣಗಳು ಇರುವ ಯಾವುದೇ ವ್ಯಕ್ತಿಗಳು ಇರುವುದಿಲ್ಲ. ಸಂಚಿತ ಮನೆಗಳು : 1023, ಜನಸಂಖ್ಯೆ : 4142, ಲಕ್ಷಣಗಳು ಇರುವ ಯಾವುದೇ ವ್ಯಕ್ತಿಗಳು ಕಂಡುಬಂದಿರುವುದಿಲ್ಲ.
- ದುರ್ಬಲ ಆರೋಗ್ಯವಿರುವವರ ಸಮೀಕ್ಷೆಯನ್ನು ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯವರಿಂದ ನಡೆಸಿ ಫ್ಲೂ ಲಕ್ಷಣಗಳು ಕಂಡು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್
ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
http://Visit : www.suddidina.com
ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ
ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ
ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.
ಅವಧಿ ಮೀರಿದ ಅಣಬೆ ಪತ್ತೆ
ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.
ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.
ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ
ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ದಿನದ ಸುದ್ದಿ
ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು
ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.
ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್ ಅವರ ಮನವಿ ವಿಶೇಷ ಗಮನ ಸೆಳೆದಿದೆ.
ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ
ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.
ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.
30 ವರ್ಷಗಳ ಸಿನಿ ಪಯಣದ ನೆನಪು
ಕನ್ನಡ ಚಿತ್ರರಂಗಕ್ಕೆ ಸುದೀಪ್ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.
“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್ ಡೈಲಾಗ್ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.
https://x.com/KicchaSudeep/status/2092857077706506638
“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”
ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.
“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

ದಿನದ ಸುದ್ದಿ
ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು
ಸುದ್ದಿದಿನ,ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.
ವೈರಲ್ ವಿಡಿಯೋದಲ್ಲಿ ಗೀತು ಮೋಹನ್‌ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್‌ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.
http://Visit : www.suddidina.com
‘ಸ್ಕ್ರಿಪ್ಟ್‌ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ
ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್‌ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.
ಸಾಮಾನ್ಯವಾಗಿ ದೊಡ್ಡ ಬಜೆಟ್‌ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.
https://x.com/alpasankhyata/status/2092620787698094334
‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?
‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.
ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್‌ವರ್ಲ್ಡ್ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ
ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.
ಸದ್ಯ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ


