Connect with us

ದಿನದ ಸುದ್ದಿ

ಅಸಲಿಗೆ ಭಾರತಕ್ಕೆ ಕೊರೋನಾ ಎಂಟ್ರಿ ಆಗಿದ್ದು ಹೇಗೆ..!?

Published

on

  • ಬಿಂದು ಶ್ರೀ‌ ಗೌಡ

COVID ಅನ್ನುವ ಮಾರಿ December ತಿಂಗಳಲ್ಲಿ ಚೈನಾ ದೇಶದಲ್ಲಿ ಕಾಣಿಸಿಕೊಂಡಾಗ ಎಚ್ಚೆತ್ತುಕೊಳ್ಳದ ನಮ್ಮ ಭಾರತ ಹಲವಾರು ಸಾವಿರಾರು ಜನ ಸೇರುವ ಕಾರ್ಯಕ್ರಮಗಳನ್ನು ಮಾಡಿದೆ ಮಾಡ್ತಾ ಇತ್ತು ಅದರ ಸಂಪೂರ್ಣ ಮಾಹಿತಿ ಮತ್ತು ಪಟ್ಟಿ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು ಕೂಡ. covid ಅನ್ನು ಗಂಭೀರವಾಗಿ ಪರಿಗಣಿಸದೆ ಟ್ರಂಪ್ ಕಾರ್ಯಕ್ರಮದ ಜೊತೆ ಜೊತೆಗೆ ಫ್ಲೈಟ್ ನಲ್ಲಿ ಬಂದಂತ ವಿದೇಶಿಗರು ಸೇರಿದಂತೆ ನಮ್ಮದೇ ದೇಶದ ಪ್ರಜೆಗಳು ಅಲ್ಲಿಂದ ಇಲ್ಲಿಗೆ ಬರುವಾಗ ಸರಿಯಾದ ತಪಾಸಣೆ ಮಾಡದೇ ಅವರನ್ನು ಸರ್ಕಾರಿ ಕ್ವಾರಂಟೇನ್ ಮಾಡದೇ ಮನೆಗೆ ಕಳುಹಿಸಿ ಮತ್ತೊಂದು ತಪ್ಪು ಮಾಡಿಬಿಟ್ಟರು.

ಇಷ್ಟೆಲ್ಲಾ ಆಗುವ ಹೊತ್ತಿಗೆ ಮಾರ್ಚ್ ತಿಂಗಳು ಬಂದೆ ಬಿಟ್ಟಿತ್ತು December ಇಂದ ಫೆಬ್ರವರಿ ತನಕ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕ ಶ್ರಿ ರಾಹುಲ್ ಗಾಂಧಿ ಅವರು ಈ ಬಗ್ಗೆ ಎಚ್ಚರಿಸಿದರು ಕ್ಯಾರೇ ಅನ್ನದ ಕೇಂದ್ರ ಸರ್ಕಾರ ಯುದ್ದ ಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ ಕುತ್ತಿಗೆಗೆ ಬಂದಾಗ ತತ್ ಕ್ಷಣಕ್ಕೆ ಅಂದರೆ ನಾಲಕ್ಕೆ ನಾಲ್ಕು ಘಂಟೆಗೆ ದೇಶ ಲಾಕ್ ಡೌನ್ ಆಗುತ್ತದೆ ಎಂಬ ಬಾಂಬ್ ಸಿಡಿಸಿದ್ದು ನಿಜವಾಗಿಯೂ ಒಂದು ದೇಶದ ಪರಿಸ್ಥಿತಿ ಅರಿಯದೆ ಆರ್ಥಿಕ ಪರಿಸ್ಥಿತಿ ಅರಿಯದೆ ತೆಗೆದುಕೊಂಡ ಮೂರ್ಖ ನಿರ್ಧಾವಾಗಿದ್ದು ಸುಳ್ಳಲ್ಲ.

ಇನ್ನುಳಿದ ಹಾಗೆ ವಾರಕ್ಕೊಂದು ಟಾಸ್ಕ್ ಕೊಟ್ಟು ಹೋದ ದೇಶದ ಪ್ರಧಾನಿಯವರು ಇದರ ಮುಂದಿನ ಭಾಗ ಏನಾಗುತ್ತದೆ ಎಂಬ ಊಹೆಯೂ ಇಲ್ಲದೆ ಚಪ್ಪಾಳೆ ತಟ್ಟಿ ಅಂದರು ಅದನ್ನು ತಪ್ಪಾಗಿ ಅರ್ಥೈಸಿಕೊಂಡ ನಮ್ಮ ದೇಶದ ಕೆಲವು ಪ್ರಜ್ಜೆಗಳು ಮಹಾ ಯುದ್ದ ಗೆದ್ದವರಂತೆ ತಟ್ಟೆ ಲೋಟ ಜೊತೆ ಜಾಗಟೆ ಬಾರಿಸಿಕೊಂಡು ನೂರು ನೂರು ಜನ ಗುಂಪು ಕಟ್ಟಿ ಬೀದಿಗೆ ಬಂದದ್ದು ಇಡಿ ಪ್ರಪಂಚವೇ ಕೇಕೆ ಹಾಕುವಂತೆ ಇತ್ತು.

ಇಷ್ಟೆಲ್ಲಾ ಆಗುವುದರೊಳಗೆ covid ಅದಾಗಲೇ ದೇಶವ್ಯಾಪಿ ಹರಡಿತ್ತು ಅನ್ನುವ ಸತ್ಯ ಎಲ್ಲರಿಗೂ ತಿಳಿದಿದ್ದರೂ ಕೇಂದ್ರ ಸರ್ಕಾರ ಬೇಜವಾಬ್ದಾರಿ ತನವನ್ನ ಜನರು ವಿರೋಧಿಸಲು ಟೀಕಿಸಲು ಆರಂಭಿಸುತ್ತಿದ್ದಂತೆ ಕೆಲವೊಂದಷ್ಟು ಮಾಧ್ಯಮಗಳು (ಅರ್ಥ ಮಾಡಿಕೊಳ್ಳಿ ) ಪೇಯ್ಡ್ ಮೀಡಿಯಾಗಳು ಜನರ ಗಮನವನ್ನು ಬೇರೆಡೆ ಸೆಳೆಯಲು ಉಪಯೋಗಿಸಿದ ಅಸ್ತ್ರವೆ ತಬ್ಲಿಗ್ ಜಮಾತ್ ನ ಕಾರ್ಯಕ್ರಮ ಮಾಧ್ಯಮಗಳು ಹೇಗೆ ಬಿಂಬಿಸಿದವು ಎಂದರೆ covid ಚೈನಾ ಇಂದ ಬಂದದ್ದು ಎನ್ನುವುದನ್ನೇ ಭಾರತದ ಜನ ಮರೆಯುವಂತೆ ಮಾಡಿಬಿಟ್ಟರು.

ಈ ಸುದ್ದಿಯನ್ನು ಕೇಳಿದಂತೆ ಜನರು ಧರ್ಮವನ್ನು ಧರ್ಮದ ಜನರನ್ನು ದ್ವೇಷಿಸುವ ರೀತಿ ಮಾಡಿಬಿಟ್ಟಿತು. ಈ ರೀತಿ ಕೇಂದ್ರದ ಬೇಜವಾಬ್ದಾರಿ ತನ. ವೈಫಲ್ಯವನ್ನು ಪ್ರಶ್ನಿಸುವ ಧೈರ್ಯ ತೋರದ ಮಾಧ್ಯಮಗಳು ಒಂದು ಸಮುದಾಯವನ್ನು ಇದಕ್ಕೆ ಬಲಿ ಕೊಡಲು ಎತ್ನಿಸಿದ್ದು ಇಡಿ ಪತ್ರಿಕೋದ್ಯಮ ಮತ್ತು ಮಾಧ್ಯಮ ತಲೆ ತಗ್ಗಿಸುವಂತದ್ದು ಎಂದು ಹೇಳಲು ಯಾವುದೇ ಅಂಜಿಕೆಯೂ ಇಲ್ಲ.ಹಾಗೊಂದು ವೇಳೆ ಈ ಕಾರ್ಯಕ್ರಮದಿಂದ covid ಬಂದಿದ್ದೆ ಆದಲ್ಲಿ ಇದಕ್ಕೆ ಮುಂಚೆ ಆದಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದವರು ಹೊಣೆಯಾಗುವುದಿಲ್ಲವೆ ಎಂಬುದನ್ನು ಪ್ರಜ್ಞಾವಂತರು ಪ್ರಶ್ನಿಸಬೇಕಾಗುತ್ತದೆ.

December ನಲ್ಲಿ ಕಾಣಿಸಿಕೊಂಡ covid ಹೀಗಿದ್ದೂ ತಬ್ಲಿಗ್ ಜಮಾತ್ ಕಾರ್ಯಕ್ರಮ ನಡೆಸಲು ಅನುಮತಿ ಕೊಟ್ಟವರು ಯಾರು..? ಕೊಟ್ಟ ನಂತರ ತಪಾಸಣೆ ಮಾಡದೇ ಅವರನ್ನು ಒಳಗಡೆ ಬಿಟ್ಟುಕೊಂಡದ್ದು ಯಾರು ಮತ್ತು ಯಾಕೆ ಅನ್ನುವ ಹಲವಾರು ಪ್ರಶ್ನೆಗಳು ಇಂದಿಗೂ ಉತ್ತರಕ್ಕಾಗಿ ಕಾಯುತ್ತಿದೆ ಇಂತಹ ಪ್ರಶ್ನೆಗಳನ್ನು ಮಾಡಬೇಕಾದ ಮಾಧ್ಯಮದವರು ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಅವರ ಮೇಲೆ ದ್ವೇಷ ಹುಟ್ಟುವಂತ ಸುದ್ದಿ ಪ್ರಸಾರ ಮಾಡಿದ್ದು ಅಕ್ಷಮ್ಯ ಅಪರಾಧ.

ಇದೇ ರೀತಿ ಮಧ್ಯಪ್ರದೇಶದ IAS ಅಧಿಕಾರಿಣಿ ಪಲ್ಲವಿ ಜೈನ್ ಅವರು, ವಿದೇಶದಿಂದ ಮರಳಿದ್ದ ತಮ್ಮ ಮಗನಿಗೆ ಕೊರೋನಾ ಸೋಂಕು ಇರುವ ನಿಜವನ್ನು ಮುಚ್ಚಿಟ್ಟು ಆತ ಕ್ವಾರಂಟೈನ್ ಅನುಭವಿಸುವುದನ್ನು ತಪ್ಪಿಸಲು ಸುಳ್ಳು ಹೇಳಿ ಆತನನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಆತನಿಂದ ಇವರಿಗೂ ಸೋಂಕು ತಗುಲಿದರೂ ಸೆಲ್ಫ್ ಕ್ವಾರಂಟೈನ್ ಗೆ ಒಳಪಡದೆ ಒಂದು ಸಭೆ ನಡೆಸಿ ಆ ಸಭೆಯಲ್ಲಿ ನೆರೆದಿದ್ದ ಸುಮಾರು 100 ಜನ ಅಧಿಕಾರಿಗಳಿಗೆ ಸೋಂಕು ಹರಡಲು ಕಾರಣರಾಗಿದ್ದಾರೆ.ಈಗ ಅವರೆಲ್ಲರೂ ಕ್ವಾರಂಟೈನ್ ನಲ್ಲಿ ಇದ್ದಾರೆ. ಈ ವಿಷಯವನ್ನು ಯಾಕೆ ಮಾಧ್ಯಮ ಸುದ್ದಿ ಮಾಡಲಿಲ್ಲ , ಸುದ್ದಿ ಮಾಡಿದ್ರೂ ಇದಕ್ಕೆ ಯಾಕೆ ಧರ್ಮದ ಬಣ್ಣ ಬಳಿಯಲಿಲ್ಲ ಅನ್ನೋದನ್ನ ಯೋಚನೆ ಮಾಡಬೇಕಾಗುತ್ತದೆ.

  • ನೆನಪಿರಲಿ ತಬ್ಲಿಗ್ ಜಮಾತ್ ವಿರುದ್ಧ ಸುಳ್ಳು ಸುದ್ದಿ ಮಾಡಿದ ಝೀ ನ್ಯೂಸ್ ಕ್ಷಮೆ ಯಾಚಿಸಿದೆ.
  • ನೆನಪಿರಲಿ ತಬ್ಲಿಗ್ ಜಮಾತ್ ಕಾರ್ಯಕ್ರಮ ಹಾಜರಾಗಿದ್ದ 100 ಜನ ಕಾಶ್ಮೀರ್ ಪ್ರಜೆಗಳಲ್ಲಿ 100 ಕೂಡ ನೆಗಟಿವ್ report ಬಂದಿದೆ.
  • ನೆನಪಿರಲಿ covid ಭಾರತಕ್ಕೆ ಬರಲು ಅನುವು ಮಾಡಿಕೊಟ್ಟಿದ್ದು ಕೇಂದ್ರ ಸರ್ಕಾರದ ಬೇಜಾವಾಬ್ದಾರಿ, ಅಸಡ್ಡೆ , ವಿಶೇಷ ವಿಮಾನಗಳ ಪ್ರಜೆಗಳು, ಏರ್ಪೋರ್ಟ್ ನಲ್ಲಿ ಸರಿಯಾದ ತಪಾಸಣೆ ಮಾಡದಿರುವುದು ಮತ್ತು ಕ್ವಾರಂಟೈನ್ ನಲ್ಲಿ ಇರಿಸಿಕೊಳ್ಳಬೇಕಾದವರನ್ನು ಕೇವಲ ಸೀಲ್ ಹೊಡೆದು ಮನೆಗೆ ಕಳುಹಿಸಿದ್ದು , ಸೀಲ್ ಹೊಡೆಸಿಕೊಂಡವರು ಮನೆಯಲ್ಲಿ ಕೂರದೆ ಬೀದಿ ಬೀದಿ ಸುತ್ತಿದ್ದು ಇದರಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ ಎಲ್ಲರೂ ಇದ್ದಾರೆ ಅನ್ನೋದನ್ನ ಮಾಧ್ಯಮ ಅರಿತುಕೊಳ್ಳಬೇಕು.
    ಮತ್ತು ತಪ್ಪು ಯಾರೇ ಮಾಡಿದ್ರೂ ತಪ್ಪೇ ಅದನ್ನ ಕೇವಲ ಧರ್ಮಾಧಾರಿತವಾಗಿ ಬಿಂಬಿಸುವುದು , ಅಥವಾ ಒಬ್ಬರು ಇಬ್ಬರು ಮಾಡಿದ ತಪ್ಪಿಗೆ ಐಡಿ ಸಮುದಾಯವನ್ನು ದೂಷಿಸುವುದು ತಪ್ಪು.

ಕೊನೆಯದಾಗಿ covid ದೇಶಕ್ಕೆ ಕಾಲಿಡಲು ಮೊದಲ ಕಾರಣ ಕೇಂದ್ರ ಸರ್ಕಾರದ ಬೇಜವಾಬ್ದಾರಿ ಅನ್ನೋದಂತು ಸುಳ್ಳಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

Published

on

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ ಚಿಕಿತ್ಸೆಗಳು ನೋವು ಕಡಿಮೆ ಮಾಡುವುದರ ಜೊತೆಗೆ, ರೋಗಿಗಳು ಮತ್ತೆ ಸ್ವತಂತ್ರವಾಗಿ ನಡೆಯಲು, ದಿನನಿತ್ಯದ ಚಟುವಟಿಕೆಗಳಿಗೆ ಮರಳಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ನೆರವಾಗುತ್ತಿವೆ ಎಂದು ಮಣಿಪಾಲ್ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಲೋಕೇಶ್ ಎ. ವೀರಪ್ಪ ತಿಳಿಸಿದರು.

ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ‌ ಮಾತನಾಡಿದ ಅವರು
‘ಆರೋಗ್ಯಕರ ವಯೋವೃದ್ಧತೆ: ಅಸ್ತಿ ಸಮಸ್ಯೆಗಳ ನಿರ್ವಹಣೆ ಮತ್ತು ಪರಿಣಾಮಕಾರಿ ಚಿಕಿತ್ಸಾ ವಿಧಾನಗಳು ಕುರಿತು ಮೂಳೆ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು.

ಇಂದಿನ ದಿನಗಳಲ್ಲಿ ಮೊಣಕಾಲು, ಸೊಂಟ ಮತ್ತು ಭುಜ ಸಂಧಿ ಸಮಸ್ಯೆಗಳು, ವಿಶೇಷವಾಗಿ ವಯೋವೃದ್ಧರಲ್ಲಿ ಹೆಚ್ಚುತ್ತಿವೆ. ‘ಇಂದು ಜನರು ಕೇವಲ ನೋವು ನಿವಾರಣೆಯನ್ನು ಮಾತ್ರ ಬಯಸುವುದಿಲ್ಲ. ಅವರು ಸುಲಭವಾಗಿ ನಡೆಯಲು, ಮೆಟ್ಟಿಲೇರಲು, ಮತ್ತೆ ಕೆಲಸಕ್ಕೆ ಹೋಗಲು, ಪ್ರವಾಸ ಮಾಡಲು ಮತ್ತು ಚುರುಕಿನ ಜೀವನವನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದರು.

“ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರಚಿಕಿತ್ಸೆ ಅಸ್ತಿ ಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರೋಗಿಯ ದೇಹರಚನೆಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ಯೋಜಿಸಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ಇದರಿಂದ ಇಂಪ್ಲಾಂಟ್‌ಗಳ ಸರಿಯಾದ ಅಳವಡಿಕೆ, ಉತ್ತಮ ಜಾಯಿಂಟ್ ಅಲೈನ್‌ಮೆಂಟ್ ಮತ್ತು ಸಹಜ ಚಲನೆಯ ಸಾಧ್ಯತೆ ಹೆಚ್ಚುತ್ತದೆ. ರೋಗಿಗಳಿಗೆ ಕಡಿಮೆ ರಕ್ತಸ್ರಾವ, ಕಡಿಮೆ ಶಸ್ತ್ರಚಿಕಿತ್ಸೆತರ ನೋವು, ವೇಗವಾದ ಚೇತರಿಕೆ ಹಾಗೂ ಬೇಗನೆ ಸಾಮಾನ್ಯ ಜೀವನಕ್ಕೆ ಮರಳುವ ಅವಕಾಶ ದೊರೆಯುತ್ತದೆ. ಮೊಣಕಾಲು ಮತ್ತು ಸೊಂಟದ ಸಂಪೂರ್ಣ ಅಥವಾ ಭಾಗಶಃ ಜಾಯಿಂಟ್ ಬದಲಾವಣೆ (TKR/PKR) ಶಸ್ತ್ರ ಚಿಕಿತ್ಸೆಗಳಲ್ಲಿ ಈ ತಂತ್ರಜ್ಞಾನ ಉತ್ತಮ ಫಲಿತಾಂಶ ನೀಡುತ್ತಿದೆ,” ಎಂದರು.

“ಇದರ ಜೊತೆಗೆ ಭುಜದ ಆರ್ಥೋಸ್ಕೋಪಿ ಅಥವಾ ‘ಕೀಹೋಲ್ ಸರ್ಜರಿ’ಯಂತಹ ಅತ್ಯಾಧುನಿಕ ಚಿಕಿತ್ಸೆಗಳಲ್ಲಿಯೂ ಉತ್ತಮ ಫಲಿತಾಂಶಗಳನ್ನು ಕಾಣುತ್ತಿದ್ದೇವೆ. ಭುಜದ ಡಿಪ್ಲೊಕೇಶನ್ (ಭುಜದ ಕೀಲಿನ ಸರಿತ) ರೋಟೇಟರ್ ಕಫ್ (ಹರಿದ ಭುಜದ ಮಾಂಸ ಖಂಡ) ಗಾಯಗಳು, ಫೋಜನ್ ಶೋಲ್ಡರ್ (ಭುಜದ ಬಿಗಿತ) ಮೊದಲಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದ್ದು, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ದೈನಂದಿನ ಚಟುವಟಿಕೆಗಳ ಮೇಲೆಯೇ ಪರಿಣಾಮ ಬೀರುತ್ತವೆ. ಈಗ ಮಿನಿಮಲ್ಲಿ ಇನ್ನೇಸಿವ್ ಸರ್ಜರಿಸ್ ಅಂದರೆ ಅತಿ ಸಣ್ಣ ಕಟ್ ಮೂಲಕ ಮಾಡುವ ಈ ಶಸ್ತ್ರಚಿಕಿತ್ಸೆಗಳು ರೋಗಿಗಳಿಗೆ ಕಡಿಮೆ ನೋವು ಹಾಗೂ ವೇಗವಾದ ಚೇತರಿಕೆಯನ್ನು ನೀಡುತ್ತಿವೆ, ಎಂದು ತಿಳಿಸಿದರು.

ಇದೇ ವೇಳೆ, ಸಂಕೀರ್ಣ ಪೆಲ್ವಿಕ್ ಟ್ರಾಮಾ ಶಸ್ತ್ರಚಿಕಿತ್ಸೆಗಳು, ‘ಕಪ್ ಅಂಡ್ ಬಾಲ್’ ಜಾಯಿಂಟ್ ಸಂಬಂಧಿತ ಪ್ರೊಸೀಜರ್‌ಗಳು, ಹಾಗು ಮೊಣಕಾಲು, ಅಂಕಲ್ ಮತ್ತು ಮೊಣಕೈಗೆ ಸಂಬಂಧಿಸಿದ ಮಿನಿಮಲಿ ಇನ್ನೇಸಿವ್ ಕೀಹೋಲ್ ಶಸ್ತ್ರಚಿಕಿತ್ಸೆಗಳ ಕುರಿತು ಕೂಡ ಅವರು ಮಾಹಿತಿ ಹಂಚಿಕೊಂಡರು.

ಇವುಗಳ ಪ್ರಮುಖ ಉದ್ದೇಶ ರೋಗಿಗಳ ಚಲನವಲನವನ್ನು ಪುನಃಸ್ಥಾಪಿಸಿ, ಅವರನ್ನು ಆತ್ಮವಿಶ್ವಾಸದಿಂದ ದಿನನಿತ್ಯದ ಬದುಕಿಗೆ ಮರಳಿಸುವುದಾಗಿದೆ ಎಂದು ಹೇಳಿದರು.

ಸಂವಾದದ ವೇಳೆ ವೈದ್ಯರು, ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಅನೇಕ ರೋಗಿಗಳು ಸಂಕೀರ್ಣ ಅಸ್ಥಿ ಚಿಕಿತ್ಸೆಗಳು ಹಾಗೂ ಅತ್ಯಾಧುನಿಕ ಜಾಯಿಂಟ್ ಕೇರ್‌ಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

ಈ ದೀರ್ಘಕಾಲದ ವಿಶ್ವಾಸವನ್ನು ಗುರುತಿಸಿಕೊಂಡಿರುವ ಆಸ್ಪತ್ರೆ, ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ವಿಶೇಷ ಅಸ್ಥಿ ತಜ್ಞರ ಸೇವೆಗಳು ಮತ್ತು ಪುನಶ್ವೇತನ ಚಿಕಿತ್ಸೆಯನ್ನು ಮಧ್ಯ ಕರ್ನಾಟಕದ ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿತು. “ನಮ್ಮ ಉದ್ದೇಶ ಕೇವಲ ಶಸ್ತ್ರಚಿಕಿತ್ಸೆ ನಡೆಸುವುದಲ್ಲ; ಜನರು ಮತ್ತೆ ಸ್ವತಂತ್ರವಾಗಿ ನಡೆಯಲು, ತಮ್ಮ ಜೀವನಶೈಲಿಗೆ ಮರಳಲು ಮತ್ತು ಸುಖಕರ ವಯೋವೃದ್ಧತೆಯನ್ನು ಅನುಭವಿಸಲು ಸಹಾಯ ಮಾಡುವುದಾಗಿದೆ,” ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.

ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending