ದಿನದ ಸುದ್ದಿ

ಕರ್ನಾಟಕ ಲಾಕ್ ಓಪನ್ | ಏನಿರತ್ತೆ..? ಏನಿರಲ್ಲ..? ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ : ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ಬೆಂಗಳೂರು: ಲಾಕ್‍ಡೌನ್ ಮಾರ್ಗಸೂಚಿ ಸಂಬಂಧಿಸಿದ ಸಭೆಯ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ನಾಳೆಯಿಂದ ಕೆಎಸ್‍ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಸಾರಿಗೆ ವಾಹನಗಳು ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಸಂಚಾರ ನಡೆಸಲಿವೆ. ರೈಲು ಪ್ರಯಾಣ ಸಹ ರಾಜ್ಯದ ಒಳಗಡೆ ಓಡಾಟ ನಡೆಸಲಿವೆ ಎಂದು ತಿಳಿಸಿದರು.

ಎಲ್ಲ ಪಾರ್ಕ್ ಗಳಲ್ಲಿ ಬೆಳಗ್ಗೆ ಮತ್ತು ಸಂಜೆ ತೆರೆದಿರುತ್ತವೆ. ಎಲ್ಲ ವ್ಯಾಪಾರಿಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇನ್ನು ಪ್ರತಿ ಭಾನುವಾರ ಕಂಪ್ಲೀಟ್ ಲಾಕ್‍ಡೌನ್ ಇರಲಿದ್ದು, ಜನರು ಮನೆಯಿಂದ ಹೊರ ಬರುವಂತಿಲ್ಲ. ಇನ್ನು ಬಸ್ ಗಳಲ್ಲಿ 30 ಜನರಿಗೆ ಪ್ರಯಾಣಿಸಲು ಮಾತ್ರ ಅವಕಾಶ ನೀಡಲಾಗಿದೆ. ತುರ್ತು ಸಂದರ್ಭ ಹೊರತುಪಡಿಸಿ ಅಂತರ್ ರಾಜ್ಯ ಸಂಚಾರ ಇರಲ್ಲ. ಈ ಕುರಿತು ಮೇ 31ರ ನಂತ್ರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದರು.

ಏನಿರತ್ತೆ..? ಎನಿರಲ್ಲ..?

  1. ಮದುವೆಗಳಲ್ಲಿ 50 ಜನಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.
  2. ಆಟೋ, ಕ್ಯಾಬ್‍ಗಳಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
  3. ಆಟೋ, ಟ್ಯಾಕ್ಸಿಗಳಲ್ಲಿ ಚಾಲಕ ಹೊರತು ಪಡಿಸಿ ಇಬ್ಬರು ಪ್ರಯಾಣ ಮಾಡಬಹುದು.
  4. ಮ್ಯಾಕ್ಸಿಕ್ಯಾಬ್ ನಲ್ಲಿ ಚಾಲಕ ಹೊರತು ಪಡಿಸಿ ಮೂವರು ಪ್ರಯಾಣ ಮಾಡಬಹುದು.
  5. ಜಿಮ್ ಓಪನ್ ಮಾಡುವಂತಿಲ್ಲ.
  6. ಕ್ರೀಡಾಂಗಣ ತೆರಯಲಾಗುವುದು ಗುಂಪು ಗುಂಪಾಗಿ ಸೇರುವಂತಿಲ್ಲ.
  7. ಪಾನಿಪುರಿ, ಫಾಸ್ಟ್ ಫುಡ್ ಸೇರಿದಂತೆ ಬೀದಿ ಬದಿ ವ್ಯಾಪಾರ ನಡೆಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version