ದಿನದ ಸುದ್ದಿ
ದೇಶಾದ್ಯಂತ ಈವರೆಗೆ 190 ಕೋಟಿ 67 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್ ನೀಡಿಕೆ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2 ಸಾವಿರದ 897 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 2 ಸಾವಿರದ 986 ಸೋಂಕಿತರು ಚೇತರಿಸಿಕೊಂಡಿದ್ದು, 54ಮಂದಿ ಮೃತಪಟ್ಟಿದ್ದಾರೆ .
ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 19 ಸಾವಿರದ 494ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೋವಿಡ್ ಸೋಂಕಿನ ವಿರುದ್ಧದ ಹೋರಾಟದ ಭಾಗವಾಗಿ ದೇಶದಾದ್ಯಂತ ಕಳೆದ 24ಗಂಟೆಗಳ ಅವಧಿಯಲ್ಲಿ 14ಲಕ್ಷದ 83 ಸಾವಿರದ 878 ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ. ಇದರೊಂದಿಗೆ ಇದುವರೆಗೆ 190ಕೋಟಿ 67 ಲಕ್ಷ 50 ಸಾವಿರದ 631 ಲಸಿಕಾ ಡೋಸ್‌ಗಳನ್ನು ನೀಡಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243