ದಿನದ ಸುದ್ದಿ
ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ, ದಾವಣಗೆರೆ : ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆಯಲ್ಲಿಂದು ಹೇಳಿದರು.
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬೀಜ ಬಿತ್ತನೆ ಮತ್ತು ರಸಗೊಬ್ಬರ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ವಹಿಸಲು ಎಲ್ಲ ಜಿಲ್ಲಾ ಮಟ್ಟದ ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು 7 ರಂದು ಮುಂಡಗಪತ್ರ ಮಂಡಿಸಲಾಗುವುದು ಎಂದು ತಿಳಿಸಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗಾತ್ರ ಮತ್ತು ಅಧಿವೇಶನ ಅವಧಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಬಜೆಟ್ ಮಂಡನೆಯ ಬಳಿಕ ಒಂದು ವಾರಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243