ದಿನದ ಸುದ್ದಿ
ಆಧ್ಯಾತ್ಮಿಕ ಪ್ರವಾಸೋದ್ಯಮದಿಂದ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿ : ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು
ಸುದ್ದಿದಿನ ಡೆಸ್ಕ್ : ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯ ಪುನರ್ ನಿರ್ಮಿಸುತ್ತಿರುವುದು ಭಾರತೀಯ ಸಾಂಸ್ಕೃತಿಕ ಪುನರುಜ್ಜೀವನದ ಸಂಕೇತವಾಗಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ತಿಳಿಸಿದ್ದಾರೆ.
ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿನ್ನೆ ಪೂಜೆ ನೆರವೇರಿಸಿದ ಉಪರಾಷ್ಟ್ರಪತಿ, ಶ್ರೀರಾಮಮಂದಿರ ನಿರ್ಮಾಣದ ಮೂಲಕ ಶಾಂತಿ, ನ್ಯಾಯ ಮತ್ತು ಸಮಾನತೆ ಖಾತ್ರಿಪಡಿಸುವ ರಾಮರಾಜ್ಯ ಪರಿಕಲ್ಪನೆ ಸಾಕಾರಗೊಳ್ಳಲಿದೆ ಎಂದರು.
ದೇಶದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮ, ಹೆಚ್ಚು ಉದ್ಯೋಗಾವಕಾಶ ಸೃಷ್ಟಿಸಲಿದ್ದು, ರಾಮಮಂದಿರ ನಿರ್ಮಾಣದಿಂದ ಅಯೋಧ್ಯ ಮತ್ತು ಸಮೀಪದ ಪ್ರದೇಶಗಳ ಆರ್ಥಿಕ ಅಭಿವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು.
ಅಯೋಧ್ಯೆ ಜಗತ್ತಿನ ಅತ್ಯಂತ ಪ್ರಾಚೀನ ನಗರಗಳಲ್ಲಿ ಒಂದಾಗಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರ ಮೆಚ್ಚಿನ ತಾಣವಾಗಿದೆ ಎಂದು ವೆಂಕಯ್ಯನಾಯ್ಡು ವಿವರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243