ಕ್ರೀಡೆ
ಮಹಿಳಾ ಏಕದಿನ ಕ್ರಿಕೆಟ್ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು
ಸುದ್ದಿದಿನಡೆಸ್ಕ್:ದಕ್ಷಿಣ ಆಫ್ರಿಕಾ ಮಹಿಳೆಯರ ವಿರುದ್ಧ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಕ್ರಿಕೆಟ್ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತದ ಮಹಿಳೆಯರು ಸರಣಿಯನ್ನು 3-0 ಅಂತರದಿಂದ ತಮ್ಮದಾಗಿಸಿಕೊಂಡಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಮಹಿಳೆಯರು ತಮ್ಮ ಶಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದರು. ಸತತ ಮೂರು ಪಂದ್ಯಗಳಲ್ಲಿ ಪಾರಮ್ಯ ಮೆರೆಯುವ ಮೂಲಕ ತಾಯ್ನಾಡಿನಲ್ಲಿ ತಾವು ಎಷ್ಟು ಬಲವಂತರು ಎಂಬುದನ್ನು ಸಾಬೀತು ಮಾಡಿದರು.
ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವನಿತೆಯರಿಗೆ ಇನ್ನಿಲ್ಲದಂತೆ ಕಾಡಿದ್ದು, ಭಾರತ ತಂಡದ ಹಿರಿಯ ಬ್ಯಾಟರ್ ಸ್ಮೃತಿ ಮಂಧಾನ. ಮೊದಲೆರಡು ಪಂದ್ಯಗಳಲ್ಲಿ ಸತತ ಶತಕ ಬಾರಿಸಿದರು. ಮೂರನೇ ಪಂದ್ಯದಲ್ಲಿ ಶತಕದ ಅಂಚಿಗೆ ಬಂದು ಮೂರನೇ ಶತಕದಿಂದ ತಪ್ಪಿಸಿಕೊಂಡರು. ಮೊದಲ ಪಂದ್ಯದಲ್ಲಿ 117, ಎರಡನೇ ಪಂದ್ಯದಲ್ಲಿ 136 ರನ್ ಗಳಿಸಿದ್ದರು. ಮೂರನೇ ಪಂದ್ಯದಲ್ಲಿ ಭಾರತ ವನಿತೆಯರು ಪ್ರಯಾಸವಿಲ್ಲದೇ ಗೆಲುವು ಸಾಧಿಸಿದರು.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ವನಿತೆಯರು 50 ಓವರ್‌ಗಳಲ್ಲಿ 8 ವಿಕೆಟ್‌ಗೆ 215 ರನ್ ಗುರಿ ನೀಡಿದರು. ಭಾರತ 40.4 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 220 ರನ್ ಗಳಿಸಿತು. ಕೊನೆಯ ಪಂದ್ಯದಲ್ಲಿ ಸ್ಮೃತಿ ಮಂಧಾನ 83 ಎಸೆತಗಳಲ್ಲಿ 11 ಬೌಂಡರಿಗಳ ಸಮೇತ 90 ರನ್ ಗಳಿಸಿದರು. ಶೆಫಾಲಿ ವರ್ಮಾ 25, ಪ್ರಿಯಾ ಪೂನಿಯಾ 28, ನಾಯಕಿ ಹರ್ಮನ್‌ಪ್ರೀತ್ ಕೌರ್ 42 ಗಳಿಸಿದರು. ಕೊನೆಯಲ್ಲಿ ಜೆಮಿಮಾ ರೋಡ್ರಿಗಸ್ 19, ರಿಚಾ ಘೋಷ್ 6 ರನ್ ಗಳಿಸಿ ಗೆಲುವಿನ ಶಾಸ್ತ್ರ ಮುಗಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ
ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಹೊಸಪೇಟೆ |10 ಲಕ್ಷ ರೂ ಅನುದಾನ ದುರ್ಬಳಕೆ ; ಶ್ರೀಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಶಿವಪ್ಪ ಮೇಲೆ ವಂಚನೆ ಆರೋಪ ; ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ4 days ago
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
-
ದಿನದ ಸುದ್ದಿ6 days ago
ದೊಡ್ಡಘಟ್ಟ | ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ವಸತಿಯುತ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
-
ದಿನದ ಸುದ್ದಿ4 days ago
ಇಂದು ವಿಶ್ವ ಏಡ್ಸ್ ದಿನ; ಎಚ್ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ
-
ಕ್ರೀಡೆ2 days ago
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
-
ದಿನದ ಸುದ್ದಿ6 days ago
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ; ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ7 hours ago
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
-
ಕ್ರೀಡೆ2 days ago
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ