ಕ್ರೀಡೆ

ಮಹಿಳಾ ಏಕದಿನ ಕ್ರಿಕೆಟ್ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು

Published

on

ಸುದ್ದಿದಿನಡೆಸ್ಕ್:ದಕ್ಷಿಣ ಆಫ್ರಿಕಾ ಮಹಿಳೆಯರ ವಿರುದ್ಧ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಕ್ರಿಕೆಟ್ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತದ ಮಹಿಳೆಯರು ಸರಣಿಯನ್ನು 3-0 ಅಂತರದಿಂದ ತಮ್ಮದಾಗಿಸಿಕೊಂಡಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಮಹಿಳೆಯರು ತಮ್ಮ ಶಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದರು. ಸತತ ಮೂರು ಪಂದ್ಯಗಳಲ್ಲಿ ಪಾರಮ್ಯ ಮೆರೆಯುವ ಮೂಲಕ ತಾಯ್ನಾಡಿನಲ್ಲಿ ತಾವು ಎಷ್ಟು ಬಲವಂತರು ಎಂಬುದನ್ನು ಸಾಬೀತು ಮಾಡಿದರು.

ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವನಿತೆಯರಿಗೆ ಇನ್ನಿಲ್ಲದಂತೆ ಕಾಡಿದ್ದು, ಭಾರತ ತಂಡದ ಹಿರಿಯ ಬ್ಯಾಟರ್ ಸ್ಮೃತಿ ಮಂಧಾನ. ಮೊದಲೆರಡು ಪಂದ್ಯಗಳಲ್ಲಿ ಸತತ ಶತಕ ಬಾರಿಸಿದರು. ಮೂರನೇ ಪಂದ್ಯದಲ್ಲಿ ಶತಕದ ಅಂಚಿಗೆ ಬಂದು ಮೂರನೇ ಶತಕದಿಂದ ತಪ್ಪಿಸಿಕೊಂಡರು. ಮೊದಲ ಪಂದ್ಯದಲ್ಲಿ 117, ಎರಡನೇ ಪಂದ್ಯದಲ್ಲಿ 136 ರನ್ ಗಳಿಸಿದ್ದರು. ಮೂರನೇ ಪಂದ್ಯದಲ್ಲಿ ಭಾರತ ವನಿತೆಯರು ಪ್ರಯಾಸವಿಲ್ಲದೇ ಗೆಲುವು ಸಾಧಿಸಿದರು.

ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ವನಿತೆಯರು 50 ಓವರ್‌ಗಳಲ್ಲಿ 8 ವಿಕೆಟ್‌ಗೆ 215 ರನ್ ಗುರಿ ನೀಡಿದರು. ಭಾರತ 40.4 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 220 ರನ್ ಗಳಿಸಿತು. ಕೊನೆಯ ಪಂದ್ಯದಲ್ಲಿ ಸ್ಮೃತಿ ಮಂಧಾನ 83 ಎಸೆತಗಳಲ್ಲಿ 11 ಬೌಂಡರಿಗಳ ಸಮೇತ 90 ರನ್ ಗಳಿಸಿದರು. ಶೆಫಾಲಿ ವರ್ಮಾ 25, ಪ್ರಿಯಾ ಪೂನಿಯಾ 28, ನಾಯಕಿ ಹರ್ಮನ್‌ಪ್ರೀತ್ ಕೌರ್ 42 ಗಳಿಸಿದರು. ಕೊನೆಯಲ್ಲಿ ಜೆಮಿಮಾ ರೋಡ್ರಿಗಸ್ 19, ರಿಚಾ ಘೋಷ್ 6 ರನ್ ಗಳಿಸಿ ಗೆಲುವಿನ ಶಾಸ್ತ್ರ ಮುಗಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version