Connect with us

ಕ್ರೀಡೆ

ಅಭಿಮಾನಿಗಳೊಂದಿಗೆ ಕ್ರಿಕೆಟಿಗ ದಿನೇಶ್ ಕಾರ್ತಿಕ್ ‘ಸ್ಟಾರ್ ಟಾಕ್’ ಕಾರ್ಯಕ್ರಮ

Published

on

ಸುದ್ದಿದಿನ,ಬೆಂಗಳೂರು : ಜಗತ್ತಿನ ಅತ್ಯುನ್ನತ ಅಥ್ಲೆಟ್ ಗಳಿಂದ ಸ್ಫೂರ್ತಿ ಪಡೆದ ಕ್ರೀಡಾ ಉಡುಪುಗಳ ಬ್ರಾಂಡ್ – ಪರಿಮ್ಯಾಚ್ ಸ್ಪೋರ್ಟ್ಸ್ ಬೆಂಗಳೂರಿನ ಮಂತ್ರಿ ಸ್ಟೋರ್ ಮಾಲ್‌ನಲ್ಲಿ ಭಾನುವಾರ ಖ್ಯಾತ ಕ್ರಿಕೆಟಿಗೆ ದಿನೇಶ್ ಕಾರ್ತಿಕ ಅವರೊಂದಿಗೆ ಅಭಿಮಾನಿಗಳ ಪ್ರತ್ಯೇಕ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಪರಿಮ್ಯಾಚ್ ಸ್ಪೋರ್ಟ್ಸ್ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿರುವ ದಿನೇಶ್ ಕಾರ್ತಿಕ್ ಅವರು ಅಭಿಮಾನಿಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆಸಿಕೊಂಡರಲ್ಲದೇ ಪ್ರಶೋತ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಗೂ ಸಂವಾದ ನಡೆಸಿದರು.
ಕ್ರಿಕೆಟ್ ಕ್ಷೇತ್ರದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ದಿನೇಶ್ ಕಾರ್ತಿಕ್ ಅವರ ಅಸಾಧಾರಣ ಕೌಶಲ್ಯಗಳಿಗೆ ಖ್ಯಾತಿ ಹೊಂದಿದ್ದಾರಲ್ಲದೇ ಅದರಲ್ಲೂ ಮುಖ್ಯವಾಗಿ ಪಂದ್ಯದ ಅಂತಿಮ ಓವರ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಹೆಸರಾಗಿದ್ದಾರೆ. ಭಾರರತದ ಅಂತಾರಾಷ್ಟ್ರೀಯ ಟಿ29 ತಂಡದಲ್ಲಿ ಕಾರ್ತಿಕ ಅತ್ಯಂತ ಪ್ರಮುಖ ಆಟಗಾರರಾಗಿದ್ದಾರೆ. ಅವರ ಅಸಾಧಾರಣ ವೇಗ ಮತ್ತು ಸ್ವಿಂಗ್‌ಗಳು ಜಗತ್ತಿನ ಕೆಲವು ಅಗ್ರ ಬ್ಯಾಟ್ಸ್‌ಮನ್‌ಗಳಿಗೆ ಸತತವಾಗಿ ಸವಾಲೆಸೆಯುತ್ತಿವೆ.

ಈ ಸಂದರ್ಭದಲ್ಲಿ ದಿನೇಶ್ ಕಾರ್ತಿಕ ಅವರು ಮುಂಬರಲಿರುವ ಕ್ರಿಕೆಟ್ ಋತುವಿಗೆ ತಮ್ಮ ವೈಯಕ್ತಿಕ ಗುರಿಗಳ ಕುರಿತು ಒಳನೋಟಗಳನ್ನು ಹಂಚಿಕೊಂಡರು. ಅಲ್ಲದೇ ಪ್ರದರ್ಶನದ ಒತ್ತಡವನ್ನು ಯಶಸ್ವಿಯಾಗಿ ನಿಭಾಯಿಸುವುದಕ್ಕಾಗಿ ಅಶ್ಲೀಟ್‌ಗಳು ಬಳಸಿಕೊಳ್ಳುವ ಕಾರ್ಯತಂತ್ರಗಳನ್ನು ಕುರಿತು ತಿಳಿಸಿದರು.

ಚರ್ಚೆಯ ಗಮನಾರ್ಹವಾದ ಮುಖ್ಯಾಂಶ ಎಂದರೆ ಅದು ಪರಿಮ್ಯಾಚ್ ಸ್ಪೋರ್ಟ್ಸ್ನೊಂದಿಗೆ ಅವರ ಪಾಲುದಾರಿಕೆ ಕುರಿತ ಚರ್ಚೆಯಾಗಿತ್ತು. ಇದರಲ್ಲಿ ಕಾರ್ತಿಕ್ ಅವರ ಕ್ರೀಡಾ ಮಹತ್ವಾಕಾಂಕ್ಷೆಗಳಿಗೆ ಬ್ರಾಂಡ್‌ನ ಅಚಲ ಬೆಂಬಲ ಕುರಿತು ಅವರು ಒತ್ತಿ ಹೇಳಿದರು. ತಮ್ಮ ಪ್ರತ್ಯೇಕವಾದ ಸ್ಪೋರ್ಟ್ಸ್ ವೇರ್ ಶ್ರೇಣಿಯಲ್ಲಿನ ಪೊಲೊ ಶರ್ಟ್ ಅನ್ನು ಕಾರ್ತಿಕ ಹೆಮ್ಮೆಯಿಂದ ಧರಿಸಿದ್ದರು. ಈ ಶ್ರೇಣಿ ಪರಿಮ್ಯಾಚ್ ಸ್ಪೋರ್ಟ್ಸ್ ನೊಂದಿಗೆ ಜಂಟಿ ಯೋಜನೆಯಾಗಿದೆ. ಕಾರ್ತಿಕ್ ಅವರಿಗೆ ಕ್ರೀಡೆ ಕುರಿತು ಇರುವ ಅಚಲ ಭಾವೋತ್ಸಾಹ ಮತ್ತು ಅವರ ಅನನ್ಯ ಶೈಲಿಯನ್ನು ಇದು ಬಿಂಬಿಸುತ್ತದೆ.

“ಡೇರ್ ಟು ಬಿ ಎ ಚಾಂಪಿಯನ್” ಎಂಬ ಹೊಸ ಬ್ರಾಂಡ್ ಅಭಿಯಾನಕ್ಕೆ ಸಮರ್ಪಿತವಾದ ಇತ್ತೀಚಿನ ಪರಿಮ್ಯಾಚ್ ಕ್ರೀಡಾ ಬ್ರಾಂಡ್ ವಿಡಿಯೋಗಾಗಿ ಚಿತ್ರೀಕರಣದ ಸಂದರ್ಭದಲ್ಲಿನ ತಮ್ಮ ಅನುಭವವನ್ನು ಕೂಡ ಅವರು ಹಂಚಿಕೊಂಡರು.
ಪರಿಮ್ಯಾಚ್ ಸ್ಪೋರ್ಟ್ಸ್ ಕುರಿತು : ಜಗತ್ತಿನ ಆಗ್ರಮಾನ್ಯ ಅಶ್ಲೀಟ್‌ಗಳಿಂದ ಸ್ಪೂರ್ತಿ ಪಡೆದ ಅತ್ಯುನ್ನತ ಗುಣಮಟ್ಟದ ಕ್ರೀಡಾ ಉಡುಪುಗಳ ಬ್ರಾಂಡ್ ಪರಿಮ್ಯಾಚ್ ಸ್ಪೋರ್ಟ್ಸ್ ಆಗಿದೆ.

ಪ್ರತಿ ಧೈರ್ಯಶಾಲಿ ಆಥೀಟ್‌ಗಳು ತಮ್ಮ ಗೆಲುವಿನ ಮಾರ್ಗದಲ್ಲಿ ಸಜ್ಜಾಗಿ ಇರುವಂತೆ ಇವುಗಳನ್ನು ವಿನ್ಯಾಸಗೊಳಿಸಲಾಗಿರುತ್ತದೆ. ಮೂಲವಾಗಿ ಕ್ರೀಡೆ ಕುರಿತ ಭಾವೋತ್ಸಾಹದೊಂದಿಗೆ ಪರಿಮ್ಯಾಚ್ ಸ್ಪೋರ್ಟ್ಸ್ ಪ್ರೊ-ಆನ್-ಫೀಲ್ಡ್ ಕಿಟ್‌ಗಳನ್ನು ಫುಟ್ಬಾಲ್ ಮತ್ತು ಕ್ರಿಕೆಟ್ ತಂಡಗಳಿಗಾಗಿ ಸೃಷ್ಟಿಸುತ್ತಿದೆ. ಜೊತೆಗೆ ಫ್ಯಾನ್‌ಗಳಿಗೆ ಪ್ರತಿದಿನದ ವರ್ಕ್‌ ಔಟ್ ಉಡುಪುಗಳ ಸಮಗ್ರ ಶೈಲಿಯನ್ನು ಸಾದರಪಡಿಸುತ್ತಿದೆ.

ಇದರ ಪ್ರತ್ಯೇಕ ವಿನ್ಯಾಸದೊಂದಿಗೆ ಈ ಉಡುಪುಗಳು ಗುಂಪಿನಲ್ಲಿ ಪ್ರತ್ಯೇಕವಾದ ಸ್ಥಾನ ಕಂಡುಕೊಳ್ಳುತ್ತವೆ. ಜಗತ್ತಿನ ಅಗ್ರ ಅಥ್ಲೆಟ್‌ಗಳು ಮತ್ತು ಅವರು ಕ್ರೀಡಾಂಗಣದಲ್ಲಿ ಗಳಿಸಿದ ವಿಜಯಗಳಿಂದ ಈ ಶ್ರೇಣಿ ಸ್ಫೂರ್ತಿ ಪಡೆದಿದೆ. ಕ್ರೀಡೆ ಕುರಿತಂತೆ ಭಾರತದ ಪ್ರೀತಿಯನ್ನು ವಿಸ್ತರಿಸುವ ಮತ್ತು ಅದನ್ನು ಸಂಪೂರ್ಣ ನೂತನ ಮಟ್ಟಕ್ಕೆ ತರುವ ಮಹತ್ವಾಕಾಂಕ್ಷೆಯ ಗುರಿ ಸಾಧಿಸುವ ಮಾರ್ಗದಲ್ಲಿ ಪರಿಮ್ಯಾಚ್ ಸ್ಪೋರ್ಟ್ಸ್ ಸಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಪೆಪ್ಪರ್ ಇಂಟರಾಕ್ಟಿವ್ ಕಮ್ಯುನಿಕೇಷನ್ಸ್,

  • karishma@pepperinteractive.in। +91 98333 28499
    – gl janaki@pepperinteractive.in। +91 97414 10688

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending