ದಿನದ ಸುದ್ದಿ

ರೈತರಿಂದಲೇ ಬೆಳೆ ಸಮೀಕ್ಷೆ ; ಮೊಬೈಲ್ ಆಪ್ ಅಭಿವೃದ್ದಿ

Published

on

ಸುದ್ದಿದಿನಡೆಸ್ಕ್:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅಭಿವೃದ್ದಿ ಪಡಿಸಲಾಗಿದೆ.

ಇಲಾಖೆಯ ಹಣ್ಣು ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಆಪ್‌ನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಉಡುಪಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version