ದಿನದ ಸುದ್ದಿ
ಬುಡಕಟ್ಟು ಸಮುದಾಯಗಳು ಸಾಂಸ್ಕೃತಿಕ ಶ್ರೀಮಂತಿಕೆ ಉಳಿಸಿಕೊಂಡಿರುವುದು ಶ್ಲಾಘನೀಯ : ಸಚಿವ ವಿ.ಸುನೀಲಕುಮಾರ
ಸುದ್ದಿದಿನ,ಉತ್ತರಕನ್ನಡ : ನಾಡಿನಲ್ಲಿ ವೈವಿಧ್ಯಮಯ ಸಾಹಿತ್ಯ-ಸಂಸ್ಕೃತಿಗಳಿಗೆ ಕೊರತೆ ಇಲ್ಲವಾದರೂ ಅನೇಕ ಸಮುದಾಯಗಳ ಹಲವಾರು ಮೂಲ ಸಂಸ್ಕೃತಿಯ ಅನಾವರಣಕ್ಕೆ ವೇದಿಕೆ ದೊರಕದೇ, ಜನಾಂಗೀಯ ಕಲೆಗಳು ನಶಿಸುತ್ತಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲಕುಮಾರ ಹೇಳಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಿನ್ನೆ ಹಮ್ಮಿಕೊಳ್ಳಲಾದ ಬುಡಕಟ್ಟು ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಉತ್ತರಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯಗಳು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಇನ್ನೂ ಉಳಿಸಿಕೊಂಡಿರುವುದು ಶ್ಲಾಘನೀಯ. ಗೌಳಿ, ಸಿದ್ದಿ ಸೇರಿದಂತೆ ಹಿಂದುಳಿದ ಸಮುದಾಯದವರ ಚಟುವಟಿಕೆಗಳಿಗೆ ಅಗತ್ಯವಿರುವ ಆಶ್ರಯವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243